ರಾಜ್ಯಾದ್ಯಂತ ಹಲವು ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್‌ ಬೆದರಿಕೆ

Date:

ಕೊಡಗು, ಧಾರವಾಡ, ದಾವಣಗೆರೆ, ಹಾಸನ ಸೇರಿ ರಾಜ್ಯದ ವಿವಿಧ ಜಿಲ್ಲೆಗಳ ನ್ಯಾಯಾಲಯಗಳಿಗೆ ಏಕಕಾಲಕ್ಕೆ ಬಾಂಬ್‌ ಬೆದರಿಕೆ ಬಂದಿದೆ. ಇದರಿಂದ ಸಾರ್ವಜನಿಕರು, ವಕೀಲರು ಹಾಗೂ ಕೋರ್ಟ್‌ ಸಿಬ್ಬಂದಿ ಆತಂಕಗೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು, ಬಾಂಬ್‌ ನಿಷ್ಕ್ರಿಯ ದಳ, ಶ್ವಾನದಳದೊಂದಿಗೆ ದೌಡಾಯಿಸಿದ್ದು, ತಪಾಸಣೆ ಕೈಗೊಂಡಿದ್ದಾರೆ.

- Advertisement -

ಮಡಿಕೇರಿಯಲ್ಲಿ ಇರುವ ನ್ಯಾಯಾಲಯ ಸಂಕೀರ್ಣಕ್ಕೆ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಪೊಲೀಸ್ ಇಲಾಖೆ ಭದ್ರತಾ ಕ್ರಮ ಕೈಗೊಂಡಿದೆ. ಮುನ್ನೆಚ್ಚರಿಕೆಯಾಗಿ ನ್ಯಾಯಾಲಯ ಸಂಕೀರ್ಣಕ್ಕೆ ಪೊಲೀಸ್ ವಿಶೇಷ ಭದ್ರತಾ ಪಡೆ, ಶ್ವಾನ ದಳ ಹಾಗೂ ಬಾಂಬ್‌ ನಿಷ್ಕ್ರೀಯ ದಳಗಳು ಧಾವಿಸಿದ್ದು, ಪರಿಶೀಲನೆ‌ ನಡೆಸುತ್ತಿದೆ. ಪರಿಶೀಲನೆ ವೇಳೆ ನ್ಯಾಯಾಲಯದ ಒಳಗಿದ್ದ ಸಿಬ್ಬಂದಿ, ವಕೀಲರು ಹಾಗೂ ಇತರೆ ಸಿಬ್ಬಂದಿಯನ್ನು ಹೊರಗೆ ಕಳುಹಿಸಲಾಗಿದೆ. ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ನ್ಯಾಯಾಲಯ ಸಂಕೀರ್ಣದ ಪ್ರತಿಯೊಂದು‌ ಭಾಗವನ್ನೂ ಸೂಕ್ಷ್ಮವಾಗಿ ತಪಾಸಣೆ ನಡೆಸುತ್ತಿರುವ ಪೊಲೀಸರು ಅನುಮಾನಾಸ್ಪದ ವಸ್ತುಗಳ ಶೋಧ ನಡೆಸುತ್ತಿದ್ದಾರೆ. ಅಲ್ಲದೇ ಬೆದರಿಕೆ ಬಂದ ಇಮೇಲ್ ಮೂಲ ಪತ್ತೆ ಹಚ್ಚಲು ತನಿಖೆ ಆರಂಭಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಧಾರವಾಡ ಹೈಕೋರ್ಟ್‌ಗೆ ಬೆದರಿಕೆ
ಇದೇ ವೇಳೆ ಧಾರವಾಡ ಹೈಕೋರ್ಟ್‌ ಹಾಗೂ ಜಿಲ್ಲಾ ನ್ಯಾಯಾಲಯಕ್ಕೆ ಇಮೇಲ್‌ ಮೂಲಕ ಬಾಂಬ್‌ ಬೆದರಿಕೆ ಸಂದೇಶ ಬಂದಿದೆ. ಕೂಡಲೇ ಕೋರ್ಟ್‌ ಸಿಬ್ಬಂದಿ ಹಾಗೂ ವಕೀಲರನ್ನು ಹೊರಗೆ ಕಳುಹಿಸಿದ್ದು, ಬಳಿಕ ಧಾರವಾಡ ಗರಗ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಕೋರ್ಟ್‌ ಆವರಣಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಎಸ್ಪಿ ಗುಂಜನ್ ಆರ್ಯ ನೇತೃತ್ವದಲ್ಲಿ ಶೋಧ ನಡೆಸಿದ್ದಾರೆ. ಇದರೊಂದಿಗೆ ಡಿಜಿಟಲ್‌ ತಪಾಸಣೆ ಮಾಡುವಂತೆ ಧಾರವಾಡ ಹೈಕೋರ್ಟ್ ವಕೀಲರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಖರ್ಗೆ ಭಾಷಣ ಕಿತ್ತು ಹಾಕಿದ್ದು ಖಂಡನೀಯ; ಅಂದು ದ್ರೋಣಾಚಾರ್ಯ, ಇಂದು ಸಂಘಾಚಾರ್ಯ!

ದಾವಣಗೆರೆ ಜಿಲ್ಲಾ ಕೋರ್ಟ್‌ಗೆ ಬಾಂಬ್ ಬೆದರಿಕೆ
ಇಲ್ಲಿನ ಜಿಲ್ಲಾ ನ್ಯಾಯಾಲಯಕ್ಕೂ ಅಪರಿಚಿತ ಇಮೇಲ್‌ ವಿಳಾಸದಿಂದ ಬಾಂಬ್‌ ಬೆದರಿಕೆ ಬಂದಿದೆ. ʻಇಂದು ಮಧ್ಯಾಹ್ನ 12:30ರ ಹೊತ್ತಿಗೆ ಆರ್‌ಡಿಎಕ್ಸ್ ಸ್ಫೋಟವಾಗಲಿದೆʼ ಎಂಬ ಸಂದೇಶ ಬಂದಿದೆ. ಈ ಹಿನ್ನೆಲೆ ಕೂಡಲೇ ಕಲಾಪಗಳನ್ನು ಸ್ಥಗಿತಗೊಳಿಸಲಾಗಿದೆ. ಮಾಹಿತಿ ಪಡೆದ ಪೊಲೀಸರು ಕೂಡಲೇ ಬಾಂಬ್‌ ನಿಷ್ಕ್ರಿಯ ದಳ ಹಾಗೂ ಶ್ವಾನದಳದೊಂದಿಗೆ ಸ್ಥಳಕ್ಕೆ ಧಾವಿಸಿ ತಪಾಸಣೆ ನಡೆಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಇಮೇಲ್‌ ವಿಳಾಸ ತಮಿಳುನಾಡಿನಲ್ಲಿ ಪತ್ತೆಯಾಗಿದೆ. ಸದ್ಯ ಕೋರ್ಟ್‌ನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಹಾಸನ ಜಿಲ್ಲಾ ನ್ಯಾಯಾಲಯಕ್ಕೆ ಬೆದರಿಕೆ ಸಂದೇಶ
ಇಲ್ಲಿನ ಜಿಲ್ಲಾ ನಾಯಾಲಯಕ್ಕೆ ಬಾಂಬ್‌ ಬೆದರಿಕೆ ಇಮೇಲ್‌ ಬಂದಿದ್ದು, ಹಾಸನ ನಗರ ಠಾಣೆ ಪೊಲೀಸರು ತಪಾಸಣೆ ಕೈಗೊಂಡಿದ್ದಾರೆ. ಕೋರ್ಟ್‌ ಸಿಬ್ಬಂದಿ, ವಕೀಲರನ್ನು ಆವರಣದಿಂದ ಹೊರಗೆ ಕಳಿಸಿದ್ದು, ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಪಾರ್ಕಿಂಗ್, ಕೋರ್ಟ್ ಆವರಣ, ಒಳಾಂಗಣಗಳಲ್ಲಿ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ತಪಾಸಣೆ ನಡೆಸುತ್ತಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ ಮತ್ತು ಮೇಕೆ

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...