ಬ್ರ್ಯಾಂಡ್ ಬೆಂಗಳೂರು ಬ್ಯಾಂಡ್ ಬಜಾಯಿಸುತ್ತಿದೆ: ಬಿಜೆಪಿ ಟೀಕೆ

Date:

Advertisements

ರಸ್ತೆಗಳು ಗುಂಡಿಮಯವಾಗಿದ್ದರೆ, ಚರಂಡಿ, ಮ್ಯಾನ್ ಹೋಲ್‌ಗಳಿಂದ ಕೊಳಚೆ ನೀರು ಉಕ್ಕಿ ರಸ್ತೆಯಲ್ಲಿ ಹರಿದು ಸುಗಂಧ ಬೀರುತ್ತಿವೆ! ಬ್ರ್ಯಾಂಡ್ ಬೆಂಗಳೂರು ಬ್ಯಾಂಡ್ ಬಜಾಯಿಸುತ್ತಿದೆ! ಎಂದು ಬಿಜೆಪಿ ಟೀಕಿಸಿದೆ.

ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ರಾಜ್ಯ ಬಿಜೆಪಿ, “ಆ‌ ದಿನಗಳ ಬ್ರ್ಯಾಂಡ್ ಬೆಂಗಳೂರಿನ ಕನಸು ಹೊತ್ತಿರುವ ಡಿಸಿಎಂ ಡಿಕೆ ಶಿವಕುಮಾರ್‌ ಸಾಹೇಬರು ಅದನ್ನು ಅಚ್ಚುಕಟ್ಟಾಗಿ ಜಾರಿ ಮಾಡುತ್ತಿರುವುದಕ್ಕೆ ರಾಜಧಾನಿಯ ರಸ್ತೆಗಳ ದುಸ್ಥಿತಿಯೇ ಸಾಕ್ಷಿ. ಟ್ರಾಫಿಕ್ ಸಮಸ್ಯೆಯ ನಡುವೆ ಈ ವಾಸನೆಯನ್ನು ಕುಡಿದು ಜನತೆ ಪಾವನರಾಗುತ್ತಿದ್ದಾರೆ‌” ಎಂದು ಲೇವಡಿ ಮಾಡಿದೆ.

“ಈಗಾಗಲೇ ಆ ದಿನಗಳಂತೆ ಬೆಂಗಳೂರಿನಲ್ಲಿ ಹಾಡಹಾಗಲೇ ರಾಜಾರೋಷವಾಗಿ ಗೂಂಡಾಗಿರಿ ನಡೆಯುತ್ತಿದೆ. ಗೂಂಡಾಗಿರಿ ಸಹಿಸಲಾರದೆ ಕೆಲಸ ಅರಸಿ ಬಂದವರು ಕಾಲ್ಕೀಳುತ್ತಿದ್ದಾರೆ” ಎಂದು ಕುಟುಕಿದೆ.

Advertisements

ಕೇಂದ್ರದ ಬಸ್ಸುಗಳನ್ನೂ ತನ್ನದು ಎನ್ನುತ್ತಿದ್ದಾರೆ ಸಿಎಂ

“ಜನರಿಗೆ ಕಷ್ಟ ಬಂದಾಗಲೆಲ್ಲಾ ಪ್ರತಿಯೊಂದಕ್ಕೂ ಕೇಂದ್ರ ಸರ್ಕಾರವನ್ನು ಕೇಳಿದ್ದೇನೆ ಎಂದು ಬೆರಳು ತೋರಿಸುವ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ಯೋಜನೆಗಳನ್ನೂ ತನ್ನದು ಎಂದು ಹೇಳುವುದರಲ್ಲಿ ನಿಸ್ಸೀಮರು” ಎಂದು ವಾಗ್ದಾಳಿ ನಡೆಸಿದೆ.

“ಕೇಂದ್ರ ಸರ್ಕಾರ ನೀಡುವ ಅಕ್ಕಿಗೆ ತಮ್ಮ ಫೋಟೋ ಹಾಕುತ್ತಿದ್ದ ಸಿದ್ದರಾಮಯ್ಯರವರು ಈಗ ಕೇಂದ್ರ ಸರ್ಕಾರ ಕೊಡುವ ಬಸ್ಸುಗಳನ್ನೂ ತನ್ನದು ಎನ್ನುತ್ತಿದ್ದಾರೆ” ಎಂದು ಬಿಜೆಪಿ ಹರಿಹಾಯ್ದಿದೆ.

 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X