ಯಲಹಂಕ ರೈಲ್ವೆ ಟ್ರ್ಯಾಕ್ ಬಳಿ ಸುಟ್ಟ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿತ್ತು. ಇದೀಗ ಪ್ರಕರಣವನ್ನು ಭೇಧಿಸಿರುವ ಪೊಲೀಸರು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಿದ್ದಾರೆ.
ಸಾಗರ (32) ಮೃತ ವ್ಯಕ್ತಿ. ಫೆಬ್ರವರಿ 25 ರಂದು ಯಲಹಂಕ ರೈಲ್ವೆ ಟ್ರ್ಯಾಕ್ ಬಳಿ ಸುಟ್ಟ ಸ್ಥಿತಿಯಲ್ಲಿ ಸಾಗರ ಮೃತದೇಹ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವ್ಹೀಲಿಂಗ್ ಮಾಡುವವರ ವಿರುದ್ದ ಕಾರ್ಯಾಚರಣೆಗಿಳಿದ ಪೊಲೀಸರು
ಇದೀಗ, ತನಿಖೆ ನಡೆಸಿ ಪ್ರಕರಣ ಭೇಧಿಸಿರುವ ಪೊಲೀಸರು, “ಸಾಗರ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದನು. ಫೆ.24 ರಂದು ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧಾರ ಮಾಡಿ ವಿಷ ಸೇವನೆ ಮಾಡಿದ್ದಾನೆ. ಆ ನಂತರ, ರೈಲ್ವೆ ಟ್ರ್ಯಾಕ್ ಬಳಿ ತೆರಳಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ” ಎಂದು ಹೇಳಿದ್ದಾರೆ.