ರಾಜ್ಯದಲ್ಲಿ ತೆರವಾಗಿರುವ ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಜುಲೈ12ರಂದು ಉಪ ಚುನಾವಣೆ ನಡೆಯಲಿದೆ.
ಕೇಂದ್ರ ಚುನಾವಣಾ ಆಯೋಗವು ಜೂನ್ 18ರಂದು ಉಪಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಿದೆ. ಜು.12ರಂದು ವಿಧಾನಪರಿಷತ್ತಿನ 1 ಸ್ಥಾನಕ್ಕೆ ಈ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ.
ವಿಧಾನಸಭಾ ಚುನಾವಣೆಯ ಸಮಯದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ವಿಧಾನಪರಿಷತ್ ಸದಸ್ಯರಾಗಿ ಆಯ್ಕೆ ಮಾಡಲಾಗಿತ್ತು. ಮತ್ತೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೇರಿ ಸ್ಪರ್ಧೆ ಮಾಡಿದ್ದ ಅವರು ಗೆದ್ದು ಸಂಸದರಾಗಿದ್ದಾರೆ.
ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಬಿಡುವಾಗ ತಮ್ಮ ಎಂಎಲ್‌ಸಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಈ ಹಿನ್ನೆಲೆ, ತೆರವಾದ ಆ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ.

ಈ ಸುದ್ದಿ ಓದಿದ್ದೀರಾ? ಲೈಂಗಿಕ ಹಗರಣ | ಪ್ರಜ್ವಲ್ ರೇವಣ್ಣಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ
ಜತೆಗೆ, ಬಿಹಾರ, ಉತ್ತರ ಪ್ರದೇಶ, ಆಂಧ್ರಪ್ರದೇಶದಲ್ಲಿ ತಲಾ ಒಂದು ಸ್ಥಾನಕ್ಕೆ ಉಪ ಚುನಾವಣೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ.
