ಬೆಂಗಳೂರು ವಿಭಾಗದ ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ ಮತ್ತು ಬಸಂಪಲ್ಲಿ ನಿಲ್ದಾಣಗಳ ನಡುವಿನ ಸುರಂಗ ಮಾರ್ಗದಲ್ಲಿ ಸುರಕ್ಷತಾ ಕಾರ್ಯ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆ ಮಾರ್ಗದಲ್ಲಿ ಸಂಚರಿಸುವ 18 ರೈಲುಗಳ ಸಂಚಾರವನ್ನು ಡಿಸೆಂಬರ್, ಜನವರಿ ಹಾಗೂ ಫೆಬ್ರವರಿ ತಿಂಗಳುಗಳ ನಾನಾ ದಿನಾಂಕದಂದು ರದ್ದುಗೊಳಿಸಲಾಗಿದೆ ಎಂದು ನೈಋತ್ಯ ರೈಲ್ವೆ ಇಲಾಖೆ ತಿಳಿಸಿದೆ.
ಮೂರು ತಿಂಗಳ ಕಾಲ ಸುರಕ್ಷತಾ ಕ್ರಮಗಳ ಅಳವಡಿಕೆ ಕಾರ್ಯ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈಲು ಸಂಚಾರ ರದ್ದುಗೊಳಿಸಲಾಗಿದೆ. ಅದರ ಜತೆಗೆ 6 ರೈಲುಗಳನ್ನು ಭಾಗಶಃ ರದ್ದು ಮಾಡಲಾಗಿದ್ದು, 30 ರೈಲುಗಳ ಮಾರ್ಗ ಬದಲಿಸಿದೆ.