ಬಂಡವಾಳ ಹೂಡಿಕೆ | ಬಿಜೆಪಿ ನಾಯಕರ ಆಪಾದನೆಯಲ್ಲಿ ಹುರುಳಿಲ್ಲ: ಎಂ ಬಿ ಪಾಟೀಲ್‌

Date:

Advertisements

ಬಂಡವಾಳ ಹೂಡಿಕೆ ಚೆನ್ನೈಗೆ ಹೋಗಿದೆ, ಬಂಡವಾಳ ತರುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂಬ ಬಿಜೆಪಿ ನಾಯಕರ ಆಪಾದನೆಯಲ್ಲಿ ಹುರುಳಿಲ್ಲ ಎಂದು ಸಚಿವ ಎಂ ಬಿ ಪಾಟೀಲ್‌ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಬಿಜೆಪಿಯ 4 ವರ್ಷಗಳ ಅವಧಿಯಲ್ಲಿ ಕೃಷಿ, ತೋಟಗಾರಿಕೆ, ಕೈಗಾರಿಕೆ, ವಸತಿ ಸೇರಿದಂತೆ ಯಾವುದೇ ಇಲಾಖೆ ಸಮರ್ಪಕವಾಗಿ ಕೆಲಸ ನಿರ್ವಹಿಸಿಲ್ಲ” ಎಂದರು.

“ನಮ್ಮ 1ವರ್ಷದ ಅವಧಿಯ ಒಂದು ಉದಾಹರಣೆ ಕೊಡುವುದಾದರೆ ಫಾಕ್ಸ್ ಕಾನ್ 25 ಸಾವಿರ ಕೋಟಿ ರೂ.ಗಳ ಕಾಮಗಾರಿ ಆರಂಭಿಸಿದೆ. ಅಮೆರಿಕ, ದಾವೋಸ್ ಭೇಟಿ ಸೇರಿದಂತೆ ನಮ್ಮ 1ವರ್ಷ ಹಾಗೂ ಬಿಜೆಪಿಯವರ 4 ವರ್ಷಗಳಲ್ಲಾದ ಎಲ್ಲಾ ವಿವರಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸುತ್ತೇನೆ” ಎಂದು ಹೇಳಿದರು.

Advertisements

ಸಚಿವರ ಗಮನಕ್ಕೆ ಬಾರದೆ ಹಣ ವರ್ಗಾವಣೆ

“ಸಚಿವರ ಗಮನಕ್ಕೆ ಬಾರದೆ ಹಣ ವರ್ಗಾವಣೆ ಆಗುತ್ತೆ. ನನ್ನ ಇಲಾಖೆಯಲ್ಲೂ ಕೆಲವು ವ್ಯತ್ಯಾಸಗಳಾಗಿತ್ತು ಎಂದು ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಆಗ್ರಹಿಸುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿದರು.

“ಚಂದ್ರಶೇಖರ್‌ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಯಾವುದೇ ಕೈವಾಡವಿಲ್ಲ ಎಂದರು. ಮುಂದುವರೆದು ಮಾತನಾಡಿ, ಹಲವು ಸಲ ಹಣ ವರ್ಗಾವಣೆ ಆಗುತ್ತದೆ. ನನ್ನ ಇಲಾಖೆಯಲ್ಲೂ ಕೆಲವು ವ್ಯತ್ಯಾಸವಾಗಿದೆ. ಇದನ್ನು ನೋಡಿ ನನಗೂ ಅಚ್ಚರಿಯಾಗಿತ್ತು. ಕೆಲವರನ್ನು ಸಸ್ಪೆಂಡ್ ಮಾಡಿದ್ದೇನೆ. ಹಣ ಬೇರೆ ರಾಜ್ಯಕ್ಕೆ ವರ್ಗಾವಣೆ ಆಗಿರುವ ವಿಚಾರವಾಗಿ ಸಿಎಂ ತನಿಖೆಗೆ ಆದೇಶ ಮಾಡುತ್ತಾರೆ. ಯಾವ ರೀತಿ ತನಿಖೆ ಎಂಬುದನ್ನು ಅವರು ನಿರ್ಧರಿಸುತ್ತಾರೆ” ಎಂದರು.

ಪರಿಷತ್ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಹಿರಿಯರನ್ನು ಕಡೆಗಣಿಸಿದ್ದಾರೆಂಬ ಆರೋಪಕ್ಕೆ ಪ್ರತಿಕ್ರಿಯಿಸಿ, “ಎಲ್ಲವೂ ನಾಲ್ಕು ಗೋಡೆಗಳ ಮಧ್ಯೆ ಚರ್ಚೆಯಾಗುತ್ತದೆ. ಈ ಹಿಂದೆ ನಾಲ್ವರ ಕಮಿಟಿ ಇತ್ತು. ಸಮ್ಮಿಶ್ರ ಸರ್ಕಾರದಲ್ಲೂ ಕಮಿಟಿ ಇತ್ತು. ಇದರ ಬಗ್ಗೆ ಪಕ್ಷದ ವೇದಿಕೆಯಲ್ಲಿ ಮಾತನಾಡುತ್ತೇವೆ” ಎಂದು ತಿಳಿಸಿದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ ಮಾಡಿಲ್ಲ

“ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರಕ್ಕೆ, ನಾನೇನು ಲಾಬಿ ಮಾಡಿಲ್ಲ. ಲಾಬಿ ಮಾಡುವ ಸಂದರ್ಭವೂ ಇಲ್ಲ. ಲೋಕಸಭೆ ಚುನಾವಣೆಯ ನಂತರ ಈ ವಿಚಾರ ಚರ್ಚೆಗೆ ಬರಲಿದೆ. ಪಕ್ಷದಲ್ಲಿ ಸಾಕಷ್ಟು ಮಂದಿ ಆಕಾಂಕ್ಷಿಗಳಿದ್ದಾರೆ. ಹೈಕಮಾಂಡ್ ಬಯಸಿದರೆ ಎಲ್ಲವೂ ಆಗುತ್ತದೆ. ಸಂಪುಟ ಪುನಾರಚನೆಯೂ ಆಗುತ್ತದೆ. ಇನ್ನು ಸಿಎಂ ಬದಲಾವಣೆ ವಿಚಾರ ನಮ್ಮ ವ್ಯಾಪ್ತಿಯಲ್ಲಿಲ್ಲ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X