ಕಾಂಗ್ರೆಸ್ ಸರ್ಕಾರದ ನೂತನ ಸಚಿವ ಸಂಪುಟದ ಜಾತಿ ಲೆಕ್ಕಾಚಾರ ಹೀಗಿದೆ

Date:

Advertisements

ಜಾತಿವಾರು ಮತ್ತು ಪ್ರಾದೇಶಿಕ ಪ್ರಾತಿನಿಧ್ಯದ ಜತೆಗೆ ಸಾಮಾಜಿಕ ನ್ಯಾಯದ ಮಾನದಂಡದಲ್ಲಿ ಹಿರಿಯ ಹಾಗೂ ಕಿರಿಯ ಶಾಸಕರುಗಳನ್ನು ಸಚಿವ ಸಂಪುಟಕ್ಕೆ ಆಯ್ಕೆ ಮಾಡಿಕೊಳ್ಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮತೋಲನ ಮೆರೆದಿದ್ದಾರೆ.

ಲಿಂಗಾಯತ ಸಮುದಾಯಕ್ಕೆ ಒಟ್ಟು ಎಂಟು ಸಚಿವ ಸ್ಥಾನ ನೀಡಲಾಗಿದ್ದು ಈ ಸಮುದಾಯದ ಬಹುತೇಕ ಎಲ್ಲಾ ಪ್ರಮುಖ ಒಳಪಂಗಡಗಳನ್ನೂ ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಈಶ್ವರ್ ಖಂಡ್ರೆ, ಲಕ್ಷ್ಮೀ ಹೆಬ್ಬಾಳ್‌ಕರ್ ಮತ್ತು ಶಿವಾನಂದ ಪಾಟೀಲ್, ಎಂ.ಬಿ.ಪಾಟೀಲ್, ಎಸ್.ಎಸ್.ಮಲ್ಲಿಕಾರ್ಜುನ್, ಶರಣ ಪ್ರಕಾಶ ಪಾಟೀಲ್, ದರ್ಶನಾಪುರ, ಹೆಚ್.ಕೆ.ಪಾಟೀಲ್ ಅವರು ಲಿಂಗಾಯತರ ಖೋಟಾದಲ್ಲಿ ಸಚಿವರಾಗಿದ್ದಾರೆ.

ಒಕ್ಕಲಿಗರಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಚೆಲುವರಾಯಸ್ವಾಮಿ, ಪಿರಿಯಾಪಟ್ಟಣ ವೆಂಕಟೇಶ್, ಎಂ.ಸಿ.ಸುಧಾಕರ್, ಕೃಷ್ಣಬೈರೇಗೌಡ ಸೇರಿ ಐದು ಮಂದಿಗೆ ಪ್ರಾತಿನಿಧ್ಯ ದೊರೆತಿದೆ.

Advertisements

ದಲಿತ ಸಮುದಾಯಕ್ಕೆ ಬರೋಬ್ಬರಿ 9 ಸಚಿವ ಸ್ಥಾನ ಲಭಿಸಿದ್ದು ಮುನಿಯಪ್ಪ, ಜಿ.ಪರಮೇಶ್ವರ್, ಹೆಸ್.ಸಿ.ಮಹದೇವಪ್ಪ, ಆರ್.ಬಿ. ತಿಮ್ಮಾಪುರ ಮತ್ತು ಪ್ರಿಯಾಂಕ್ ಖರ್ಗೆ ಅವರುಗಳು ಪರಿಶಿಷ್ಟ ಜಾತಿ ಖೋಟಾದಲ್ಲಿ ಸಚಿವರಾಗಿದ್ದಾರೆ. ಎಡಗೈ ಮತ್ತು ಬಲಗೈ ಸಮುದಾಯಗಳನ್ನು ಸರಿದೂಗಿಸಲಾಗಿದೆ. ಪರಿಶಿಷ್ಟ ಪಂಗಡದ ಪ್ರತಿನಿಧಿಗಳಾಗಿ ನಾಗೇಂದ್ರ, ಮಧುಗಿರಿ ರಾಜಣ್ಣ, ಸತೀಶ್ ಜಾರಕಿಹೊಳಿ ಅವರಿಗೆ ಅವಕಾಶ ದೊರೆತಿದೆ.

ಹಿಂದುಳಿದ ಜಾತಿಗಳಲ್ಲಿ ಅತ್ಯಂತ ಸಣ್ಣ ಸಮುದಾಯ ರಾಜು ಕ್ಷತ್ರಿಯ ಸಮುದಾಯದ ಬೋಸರಾಜು, ಅತ್ಯಂತ ಸಣ್ಣ ಹಿಂದುಳಿದ ಸಮುದಾಯಗಳಲ್ಲಿ ಒಂದಾದ ಬೆಸ್ತ ಸಮುದಾಯದ ಮಾಂಕಾಳ ವೈದ್ಯ, ಮರಾಠ ಸಮಾಜದಿಂದ ಸಂತೋಷ್ ಲಾಡ್ ಇದ್ದಾರೆ. ಕುರುಬ ಸಮುದಾಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಟ್ಟರೆ ಬೈರತಿ ಸುರೇಶ್ ಅವರಿಗೆ ಮಾತ್ರ ಸಂಪುಟದೊಳಗೆ ಪ್ರವೇಶ ದೊರೆತಿದೆ. ಬಿಲ್ಲವ (ಈಡಿಗ) ಸಮುದಾಯದಿಂದ ಮಧು ಬಂಗಾರಪ್ಪ ಇದ್ದಾರೆ. ರಜಪೂತ ಸಮುದಾಯದ ಅಜಯ್ ಸಿಂಗ್ ಅವರು ಮುಖ್ಯ ಸಚೇತಕರಾಗಿರುವುದರಿಂದ ಕಡೆ ಗಳಿಗೆಯ ಒತ್ತಡದಲ್ಲಿ ಸಚಿವ ಸ್ಥಾನ ಕೈ ತಪ್ಪಿದೆ. ವಿಧಾನ ಪರಿಷತ್ ಮುಖ್ಯ ಸಚೇತಕರಾಗಿರುವ ಬಂಜಾರ ಸಮುದಾಯದ ಪ್ರಕಾಶ್ ರಾಥೋಡ್ ಅವರಿಗೂ ಈಗಾಗಲೇ ಒಂದು ಜವಾಬ್ದಾರಿ ಇರುವ ಕಾರಣಕ್ಕೆ ಸಚಿವ ಸ್ಥಾನ ದೊರಕಿಲ್ಲ.

ಮುಸ್ಲಿಂ ಸಮುದಾಯದಿಂದ ಜಮೀರ್ ಅಹಮದ್ ಖಾನ್, ರಹೀಂ ಖಾನ್ ಇಬ್ಬರು ಸಚಿವರಾಗಿದ್ದರೆ, ಯು.ಟಿ.ಖಾದರ್ ಸ್ಪೀಕರ್ ಆಗಿದ್ದಾರೆ. ಕ್ರೈಸ್ತ ಸಮುದಾಯದಿಂದ ಕೆ.ಜೆ.ಜಾರ್ಜ್ ಅವರಿಗೆ ಸಚಿವ ಸ್ಥಾನ ಒಲಿದಿದೆ. ಜೈನ ಸಮುದಾಯದಿಂದ ಡಿ.ಸುಧಾಕರ್ ಹಾಗೂ ಬ್ರಾಹ್ಮಣ ಸಮುದಾಯದ ಪ್ರತಿನಿಧಿಯಾಗಿ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸ್ಥಾನ ದೊರಕಿದೆ.

ಹೀಗೆ ಸಚಿವರ ಆಯ್ಕೆಯಲ್ಲಿ ಸಾಮಾಜಿಕ ನ್ಯಾಯವನ್ನು ಪಾಲಿಸುವಾಗ ಪ್ರಾದೇಶಿಕ ನ್ಯಾಯ ಸಮತೋಲನ ತಪ್ಪದಂತೆಯೂ ಎಚ್ಚರ ವಹಿಸಿರುವುದು ಸಿದ್ದರಾಮಯ್ಯ ಅವರ ಆಯ್ಕೆ ಸಮತೂಕದಲ್ಲಿದೆ ಎನ್ನುವುದಕ್ಕೆ ಸ್ಪಷ್ಟ ಉದಾಹರಣೆ.

ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೂ ಪ್ರಾತಿನಿಧ್ಯ ದೊರೆತಿದೆ. ಮಲೆನಾಡು, ಕರಾವಳಿ ಕರ್ನಾಟಕ ಮತ್ತು ಮೈಸೂರು ಕರ್ನಾಟಕ ಹಾಗೂ ಮಧ್ಯ ಕರ್ನಾಟಕಕ್ಕೆ ಸಿಕ್ಕಿರುವ ಪ್ರಾತಿನಿಧ್ಯ ಜಾತಿವಾರು ಲೆಕ್ಕಾಚಾರಗಳನ್ನೂ ಸರಿದೂಗಿಸಿದೆ.

ಹಿಂದಿನ ಬಿಜೆಪಿ ಅವಧಿಯಲ್ಲಿ ಬಿಜೆಪಿ ಜಾತಿವಾರು ಪ್ರಾತಿನಿಧ್ಯವನ್ನು ಕಡೆಗಣಿಸಿದ್ದ ಅಸಮಾಧಾನ ಹಲವು ಸಮುದಾಯಗಳಲ್ಲಿ ಹೆಪ್ಪುಗಟ್ಟಿತ್ತು. ಹಾಲಿ ಸಿದ್ದರಾಮಯ್ಯ ಅವರ ಆಯ್ಕೆ ಜಾತಿ ಲೆಕ್ಕಾಚಾರ ಮತ್ತು ಚುನಾಯಿತ ಶಾಸಕರ ಲೆಕ್ಕದಲ್ಲೂ ಸಾಮಾಜಿಕ ನ್ಯಾಯವನ್ನು ಕಾಪಾಡಿಕೊಂಡಿದೆ.

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X