ಕಾವೇರಿ ವಿವಾದ | ನ. 23ರ ತನಕ ನಿತ್ಯ 2,600 ಕ್ಯೂಸೆಕ್ ನೀರು ಹರಿಸಲು ನಿರ್ವಹಣಾ ಪ್ರಾಧಿಕಾರ ಸೂಚನೆ

Date:

ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಅ. 30ರಂದು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ)ಯ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಎತ್ತಿ ಹಿಡಿದಿದೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧ ಹೊಸದಿಲ್ಲಿಯಲ್ಲಿ ಇಂದು (ನ.3) ನಡೆದ ಕಾವೇರಿ ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಸಿಡಬ್ಲ್ಯೂಆರ್‌ಸಿ ನೀಡಿದ್ದ ಆದೇಶಕ್ಕೆ ಮನ್ನಣೆ ನೀಡಲಾಗಿದೆ.

ಅಕ್ಟೋಬರ್‌ 30ರಂದು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ) ತಮಿಳುನಾಡಿಗೆ ನವೆಂಬರ್‌ 15ರವರೆಗೆ ನಿತ್ಯವೂ 2,600 ಕ್ಯೂಸೆಕ್‌ ನೀರು ಹರಿಸಲು ಶಿಫಾರಸು ಮಾಡಿತ್ತು. ಈ ಹಿನ್ನೆಲೆಯಲ್ಲಿ ಇಂದು ನಡೆದ ಸಭೆಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ) ನೀಡಿದ್ದ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು (ಸಿಡಬ್ಲ್ಯೂಎಂಎ) ಎತ್ತಿ ಹಿಡಿದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಾವೇರಿ ನಿರ್ವಹಣಾ ಪ್ರಾಧಿಕಾರ ಸಭೆಯ ಬಳಿಕ ಮಾಹಿತಿ ನೀಡಿರುವ ಎಸಿಎಸ್ ರಾಕೇಶ್ ಸಿಂಗ್, “ನವೆಂಬರ್ 23 ರ ತನಕ 2600 ಕ್ಯೂಸೆಕ್ ನೀರು ಬಿಡಲು ಪ್ರಾಧಿಕಾರ ಆದೇಶಿಸಿದೆ. ತಮಿಳುನಾಡು 13,000 ಕ್ಯೂಸೆಕ್ ನೀರು ಬಿಡಲು ಆಗ್ರಹಿಸಿತ್ತು” ಎಂದು ತಿಳಿಸಿದ್ದಾರೆ.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಈ ಮುಂಚಿನ ಆದೇಶದಂತೆ ರಾಜ್ಯವು ಸದ್ಯ ತಮಿಳುನಾಡಿಗೆ ಅಕ್ಟೋಬರ್‌ 31 ವರೆಗೂ ನಿತ್ಯ 3000 ಕ್ಯೂಸೆಕ್‌ ನೀರು ಹರಿಸುತ್ತಿದೆ.

ಸದ್ಯದ ಆದೇಶದಂತೆ ನವೆಂಬರ್‌ 15ವರೆಗೂ ರಾಜ್ಯದಿಂದ ತಮಿಳುನಾಡಿಗೆ ಪ್ರತಿದಿನವೂ 2,600 ಕ್ಯೂಸೆಕ್‌ ನೀರು ಹರಿಸಬೇಕು. ಕಾವೇರಿ ನದಿ ಪಾತ್ರದ ಎಲ್ಲ ನಾಲ್ಕು ಜಲಾಶಯಗಳಿಗೆ ಒಳಹರಿವು ಬಹುತೇಕ ಶೂನ್ಯವಾಗಿದೆ. ಈ ಸ್ಥಿತಿಯಲ್ಲಿ ಸಿಡಬ್ಲ್ಯೂಎಂಎ ನಿರ್ಣಯ ಕರ್ನಾಟಕದ ಪಾಲಿಗೆ ಆತಂಕ ಹೆಚ್ಚಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಾರಾಷ್ಟ್ರದಲ್ಲಿ ಬಿಜೆಪಿ ತಂತ್ರಕ್ಕೆ ಆಹುತಿಯಾಗುತ್ತಾ ಮಹಾಯುತಿ

ಲೋಕಸಭೆ ಚುನಾವಣೆ ಬಳಿಕ ಮಹಾರಾಷ್ಟ್ರದ ಮಹಾಯುತಿ ಮೈತ್ರಿಕೂಟದಲ್ಲಿ ಬಿರುಕು ಕಾಣಿಸಿಕೊಳ್ಳುತ್ತಿದೆ. ಕೇಂದ್ರ...

ಪೋಕ್ಸೊ ಪ್ರಕರಣ | ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೋರಿದ ಬಿಎಸ್‌ವೈ, ಪೊಲೀಸರಿಂದ ಬಂಧನಕ್ಕೆ ಸಿದ್ಧತೆ

ಪೋಕ್ಸೊ ಪ್ರಕರಣದಲ್ಲಿ ತನಿಖೆಗೆ ಹಾಜರಾಗುವಂತೆ ಸಿಐಡಿ ಪೊಲೀಸರು ನೀಡಿದ್ದ ನೋಟಿಸ್​ಗೆ ಬಿ...

ಅಮಿತ್ ಮಾಳವೀಯ ಎಂಬ ಸ್ತ್ರೀಪೀಡಕನೂ, ಬಿಜೆಪಿಯ ಬೇಟಿ ಬಚಾವೋ ಎಂಬ ಘೋಷಣೆಯೂ…

ಬಿಜೆಪಿ ಐಟಿ ಸೆಲ್‌ನ ಮುಖ್ಯಸ್ಥ ಅಮಿತ್‌ ಮಾಳವೀಯ ಪಶ್ಚಿಮ ಬಂಗಾಳದ...

ಬೆಂಗಳೂರು | ಗಗನಕ್ಕೇರಿದ ದಿನಸಿ, ತರಕಾರಿ ಬೆಲೆ; ₹50ಕ್ಕೇರಿದ ಟೊಮೆಟೊ ದರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತರಕಾರಿ ಬೆಲೆ ಸೇರಿದಂತೆ ನಿತ್ಯ...