ಸಿಇಟಿ ಪರೀಕ್ಷೆಗೆ ಸಂಬಂಧಿಸಿ ಹಲವು ಗೊಂದಲಗಳಿಗೆ ಕಾರಣರಾಗಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿರ್ದೇಶಕಿ ರಮ್ಯಾ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ಹೆಚ್.ಪ್ರಸನ್ನ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಸನ್ನ ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕರಾಗಿದ್ದರು.
ಸಿಇಟಿ ಪರೀಕ್ಷೆಯಲ್ಲಿ 50ಕ್ಕೂ ಹೆಚ್ಚು ಪಠ್ಯೇತರ ಪ್ರಶ್ನೆ ಕೇಳಿ ಕೆಇಎ ಎಂಡಿ ರಮ್ಯಾ ವಿವಾದಕ್ಕೀಡಾಗಿದ್ದರು. ಈ ಗೊಂದಲಗಳಿಗೆ ರಮ್ಯಾ ಅವರೇ ನೇರ ಕಾರಣ ಎಂದು ಉನ್ನತ ಶಿಕ್ಷಣ ಸಚಿವರಿಗೆ ಪೋಷಕರ ಸಂಘಟನೆಯು ಪತ್ರವನ್ನು ಬರೆದಿತ್ತು. ಅಲ್ಲದೇ ರಮ್ಯಾ ವಿರುದ್ಧ ತನಿಖೆಗೂ ಆಗ್ರಹಿಸಿತ್ತು. ಇನ್ನು ಕೆಇಎ ನಿಯಮದ ಪ್ರಕಾರವೇ ಪರೀಕ್ಷೆ ನಡೆಸಲಾಗಿದೆ ಎಂಬ ರಮ್ಯಾ ಅವರ ಹೇಳಿಕೆಗೆ ವಿದ್ಯಾರ್ಥಿ ವಲಯದಲ್ಲೂ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಈ ಸುದ್ದಿ ಓದಿದ್ದೀರಾ? ಆರ್ಸಿಬಿ ಪಂದ್ಯದ ವೇಳೆ ಕಳಪೆ ಆಹಾರ ವಿತರಣೆ: ಕೆಎಸ್ಸಿಎ ವಿರುದ್ಧ ಎಫ್ಐಆರ್ ದಾಖಲು
ರಮ್ಯಾ ವರ್ಗಾವಣೆಗಾಗಿ ಪೋಷಕರು ಒತ್ತಾಯಿಸಿದ್ದರು. ಇದರಿಂದ ರಾಜ್ಯ ಸರ್ಕಾರ ತೀವ್ರ ಮುಜುಗರಕ್ಕೀಡಾಗಿತ್ತು. ಪೋಷಕರ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ರಮ್ಯಾ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.