ಬಿರು ಬಿಸಿಲಿನ ನಡುವೆ ಸದ್ಯ ಲೋಕಸಭಾ ಚುನಾವಣೆಯ ಕಾವು ಹೆಚ್ಚಾಗಿದೆ. ರಾಜಕೀಯ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿ ಮತ ನೀಡುವಂತೆ ಮತದಾರರಲ್ಲಿ ಮನವಿ ಮಾಡುತ್ತಿದ್ದಾರೆ. ಇನ್ನೊಂದೆಡೆ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಅವರು ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಬಳಿ ಮತ ನೀಡುವಂತೆ ಮನವಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಬಿಜೆಪಿ ಅಭ್ಯರ್ಥಿ ಬಾಲರಾಜ್ ಅವರು ಶಾಲಾ–ಕಾಲೇಜುಗಳಿಗೆ ತೆರಳಿ ವಿದ್ಯಾರ್ಥಿಗಳ ಬಳಿ ಮತಯಾಚನೆ ಮಾಡುವ ಮೂಲಕ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಬಗ್ಗೆ ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದು, ನೀತಿ ಸಂಹಿತೆ ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಮನವಿ ಮಾಡಿದೆ.
“ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಅವರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಶಾಲಾ ಕಾಲೇಜುಗಳಲ್ಲಿ ಮತ ಯಾಚಿಸಿದ್ದಾರೆ” ಎಂದು ಹೇಳಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಅಗ್ನಿ ಅವಘಡ: 10ಕ್ಕೂ ಹೆಚ್ಚು ಉದ್ಯೋಗಿಗಳು ಸಿಲುಕಿರುವ ಶಂಕೆ
“ವಿದ್ಯಾರ್ಥಿಗಳನ್ನು ಚುನಾವಣಾ ಪ್ರಚಾರಕ್ಕೆ ಬಳಸುವುದು, ರಾಜಕೀಯ ಚಟುವಟಿಕೆಗಳಿಗೆ ಬಳಸುವುದು ಬಿಜೆಪಿಯ ಚುನಾವಣಾ ಅಕ್ರಮದ ಸಾಮಾನ್ಯ ಸಂಗತಿಯಾಗಿದೆ. ಮುಖ್ಯ ಚುನಾವಣಾ ಆಯುಕ್ತರು ಕೂಡಲೇ ಬಿಜೆಪಿ ಅಭ್ಯರ್ಥಿ ಬಾಲರಾಜ್ ಅವರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ಬರೆದುಕೊಂಡಿದೆ.
ಚಾಮರಾಜ ನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಶಾಲಾ ಕಾಲೇಜುಗಳಲ್ಲಿ ಮತ ಯಾಚಿಸಿದ್ದಾರೆ.
ವಿದ್ಯಾರ್ಥಿಗಳನ್ನು ಚುನಾವಣಾ ಪ್ರಚಾರಕ್ಕೆ ಬಳಸುವುದು, ರಾಜಕೀಯ ಚಟುವಟಿಕೆಗಳಿಗೆ ಬಳಸುವುದು ಬಿಜೆಪಿಯ ಚುನಾವಣಾ ಅಕ್ರಮದ ಸಾಮಾನ್ಯ ಸಂಗತಿಯಾಗಿದೆ.@ceo_karnataka ಅವರು ಕೂಡಲೇ ಬಿಜೆಪಿ… pic.twitter.com/16RLaL9I5A
— Karnataka Congress (@INCKarnataka) April 5, 2024
ಕಾಂಗ್ರೆಸ್ ಹಂಚಿಕೊಂಡಿರುವ ವಿಡಿಯೋದಲ್ಲಿ ಬಿಜೆಪಿ ಅಭ್ಯರ್ಥಿ ಬಾಲರಾಜ್ ಅವರು ಕೇಸರಿ ಶಾಲು ಹಾಕಿಕೊಂಡು ಕಾಲೇಜ್‌ವೊಂದರ ತರಗತಿ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ಹಸ್ತಲಾಘವ ಮಾಡುವುದನ್ನು ಕಾಣಬಹುದು.