ಚಾಮರಾಜನಗರ | ಕಾಲೇಜಿಗೆ ತೆರಳಿ ಮತ ಕೇಳಿದ ಬಿಜೆಪಿ ಅಭ್ಯರ್ಥಿ : ಕ್ರಮಕ್ಕೆ ಆಗ್ರಹ

Date:

ಬಿರು ಬಿಸಿಲಿನ ನಡುವೆ ಸದ್ಯ ಲೋಕಸಭಾ ಚುನಾವಣೆಯ ಕಾವು ಹೆಚ್ಚಾಗಿದೆ. ರಾಜಕೀಯ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿ ಮತ ನೀಡುವಂತೆ ಮತದಾರರಲ್ಲಿ ಮನವಿ ಮಾಡುತ್ತಿದ್ದಾರೆ. ಇನ್ನೊಂದೆಡೆ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲರಾಜ್‌ ಅವರು ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಬಳಿ ಮತ ನೀಡುವಂತೆ ಮನವಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

- Advertisement -

ಬಿಜೆಪಿ ಅಭ್ಯರ್ಥಿ ಬಾಲರಾಜ್ ಅವರು ಶಾಲಾ–ಕಾಲೇಜುಗಳಿಗೆ ತೆರಳಿ ವಿದ್ಯಾರ್ಥಿಗಳ ಬಳಿ ಮತಯಾಚನೆ ಮಾಡುವ ಮೂಲಕ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಬಗ್ಗೆ ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದು, ನೀತಿ ಸಂಹಿತೆ ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಮನವಿ ಮಾಡಿದೆ.

“ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಅವರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಶಾಲಾ ಕಾಲೇಜುಗಳಲ್ಲಿ ಮತ ಯಾಚಿಸಿದ್ದಾರೆ” ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಅಗ್ನಿ ಅವಘಡ: 10ಕ್ಕೂ ಹೆಚ್ಚು ಉದ್ಯೋಗಿಗಳು ಸಿಲುಕಿರುವ ಶಂಕೆ

“ವಿದ್ಯಾರ್ಥಿಗಳನ್ನು ಚುನಾವಣಾ ಪ್ರಚಾರಕ್ಕೆ ಬಳಸುವುದು, ರಾಜಕೀಯ ಚಟುವಟಿಕೆಗಳಿಗೆ ಬಳಸುವುದು ಬಿಜೆಪಿಯ ಚುನಾವಣಾ ಅಕ್ರಮದ ಸಾಮಾನ್ಯ ಸಂಗತಿಯಾಗಿದೆ. ಮುಖ್ಯ ಚುನಾವಣಾ ಆಯುಕ್ತರು ಕೂಡಲೇ ಬಿಜೆಪಿ ಅಭ್ಯರ್ಥಿ ಬಾಲರಾಜ್ ಅವರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ಬರೆದುಕೊಂಡಿದೆ.


ಕಾಂಗ್ರೆಸ್ ಹಂಚಿಕೊಂಡಿರುವ ವಿಡಿಯೋದಲ್ಲಿ ಬಿಜೆಪಿ ಅಭ್ಯರ್ಥಿ ಬಾಲರಾಜ್ ಅವರು ಕೇಸರಿ ಶಾಲು ಹಾಕಿಕೊಂಡು ಕಾಲೇಜ್‌ವೊಂದರ ತರಗತಿ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ಹಸ್ತಲಾಘವ ಮಾಡುವುದನ್ನು ಕಾಣಬಹುದು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...