ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

Date:

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ ಮಾಡಲಾಗಿದೆ. ಚಾಮರಾಜನಗರದ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಮತದಾನ ಬಹಿಷ್ಕರಿಸಿರುವ ಗ್ರಾಮಸ್ಥರ ಮನವೊಲಿಸಲು ಗ್ರಾಮಕ್ಕೆ ತೆರಳಿದ ಅಧಿಕಾರಿಗಳ ಮೇಲೆ ಗ್ರಾಮಸ್ಥರು ಕಲ್ಲುತೂರಾಟ ನಡೆಸಿ, ಮತ ಯಂತ್ರಗಳನ್ನು ಸುಟ್ಟು ಹಾಕಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

- Advertisement -

ಮತದಾನ ಬಹಿಷ್ಕಾರ ಹಾಕಿದ್ದ ಮತದಾರರ ಮನವೊಲಿಸಲು ಗ್ರಾಮಕ್ಕೆ ತಹಶೀಲ್ದಾರ್ ಆಗಮಿಸಿದ್ದ ವೇಳೆ ಘರ್ಷಣೆ ಆರಂಭವಾಗಿದೆ. ತಹಸೀಲ್ದಾರ್ ಗುರುಪ್ರಸಾದ್ ನೇತೃತ್ವದ ಅಧಿಕಾರಿಗಳ ಮಾತಿಗೆ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ಅಧಿಕಾರಿಗಳ ಜೊತೆ ಮಾತಿನ‌ ಚಕಮಕಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇನ್ನು ಇದೇ ವೇಳೆ ಮತಗಟ್ಟೆ ಧ್ವಂಸ ಮಾಡಿರುವುದಷ್ಟೇ ಅಲ್ಲ, ಘಟನಾ ಸ್ಥಳದಲ್ಲಿ ಲಾಠಿ ಪ್ರಹಾರ ಹಾಗೂ ಕಲ್ಲು ತೂರಾಟ ಕೂಡ ನಡೆದಿದೆ. ಈ ಘಟನೆಯಲ್ಲಿ ಹಲವು ಮಹಿಳೆಯರು ಗಾಯಗೊಂಡಿದ್ದಾರೆ.

ಈ ಗ್ರಾಮದಲ್ಲಿ ಸುಮಾರು 800ಕ್ಕೂ ಹೆಚ್ಚು ಜನಸಂಖ್ಯೆ ಇದೆ. ಸ್ವಾತಂತ್ರ್ಯ ಬಂದು 77 ವರ್ಷಗಳು ಕಳೆದರು ಇಂಡಿಗನತ್ತ ಗ್ರಾಮಕ್ಕೆ ಇಲ್ಲಿಯವರೆಗೂ ಮೂಲಭೂತ ಸೌಲಭ್ಯ ಒದಗಿಸಿಲ್ಲ. ಈ ಹಿನ್ನೆಲೆ, ಲೋಕಸಭಾ ಚುನಾವಣೆ ಬಹಿಷ್ಕಾರ ಮಾಡುವುದಾಗಿ ಎಚ್ಚರಿಕೆ ನೀಡಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು.

ಈ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್, ತಹಸೀಲ್ದಾರ್ ಗುರು ಪ್ರಸಾದ್, ಕೊಳ್ಳೇಗಾಲ ಉಪ ವಿಭಾಗಾಧಿಕಾರಿ ಶಿವಮೂರ್ತಿ, ಇಒ ಉಮೇಶ್, ಪೊಲೀಸ್ ಇನ್ಸ್ ಪೆಕ್ಟರ್ ಜಗದೀಶ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ನೀವು ಮತದಾನ ಮಾಡಿ ಎಂದು ಮನವಿ ಮಾಡಿದ್ದರು.

ಈ ವೇಳೆ ಅಧಿಕಾರಿಗಳ ಒತ್ತಾಯದ ಮೇರೆಗೆ ಮತ ಚಲಾವಣೆ ಮಾಡಲು ಕೆಲವು ಮತದಾರರು ಮುಂದೆ ಬಂದಿದ್ದರು. ಈ ಸಂದರ್ಭದಲ್ಲಿ ಮತ್ತೊಂದು ಗುಂಪಿನವರು ಮತದಾನ ಬಹಿಷ್ಕಾರ ಮಾಡಿರುವ ಕುರಿತು ಪೋಲಿಸ್ ಇಲಾಖೆಗೆ ಮಾಹಿತಿ ನೀಡಲಾಗಿದೆ. ಇಷ್ಟಾದರೂ ಏಕೆ ನಮಗೆ ಇಷ್ಟೊಂದು ಒತ್ತಾಯ ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದರು. ಈ ವೇಳೆ ಮಾತಿನ‌ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಕೆಲ ಮಂದಿ ಮತಗಟ್ಟೆಗೆ ನುಗ್ಗಿ ಪೀಠೋಪಕರಣ ಹಾಗೂ ವಿದ್ಯುನ್ಮಾನ ಮತ ಯಂತ್ರ ನಾಶ ಪಡಿಸಿ ಮತಗಟ್ಟೆ ಧ್ವಂಸ ಮಾಡಿದ್ದಾರೆ. ಈ ವೇಳೆ ಪೋಲಿಸರು‌ ಮತ್ತು ಸ್ಥಳೀಯ ವಾಸಿಗಳ ನಡುವೆ ನಡೆದ ಗದ್ದಲದಲ್ಲಿ ಹಲವು‌ ಮಂದಿ ಮಹಿಳೆಯರ ತಲೆಗೆ ಪೆಟ್ಟಾಗಿದೆ.

ಮತ ಹಾಕುವವರಿಗೆ ನೀವು ಅವಕಾಶ ಮಾಡಿಕೊಡಿ ಎಂದು ಅಧಿಕಾರಿಗಳು ಹೇಳುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು ಅಧಿಕಾರಿಗಳ ಮೇಲೆ ಕಲ್ಲುತೂರಾಟ ನಡೆಸಿ, ಮತಯಂತ್ರ ಹಾಗೂ ಮತದಾನಕ್ಕೆ ತೆಗೆದುಕೊಂಡು ಹೋಗಲಾಗಿದ್ದ ಪರಿಕರಗಳನ್ನು ಸುಟ್ಟು ಹಾಕಿದ್ದಲ್ಲದೆ ಶಾಲೆಯ ಕಿಟಕಿ ಹಾಗೂ ಹಲವು ಸಾಮಗ್ರಿಗಳನ್ನು ಧ್ವಂಸ ಮಾಡಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಕಲ್ಲುತೂರಾಟದಲ್ಲಿ ತಹಸೀಲ್ದಾರ್ ಗುರುಪ್ರಸಾದ್ ಇನ್ಸ್‌ಪೆಕ್ಟರ್ ಜಗದೀಶ್ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...