ಯುವತಿ ಜತೆಗೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ: ಭಾರತೀಯ ಹಾಕಿ ತಂಡದ ಡಿಫೆಂಡರ್ ವರುಣ್ ವಿರುದ್ಧ ದೂರು ದಾಖಲು

Date:

ಯುವತಿಯೊಬ್ಬರಿಗೆ ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ ಆರೋಪದಡಿ ಭಾರತೀಯ ಹಾಕಿ ತಂಡದ ಡಿಫೆಂಡರ್ ಆಗಿರುವ ವರುಣ್ ಕುಮಾರ್ ಅವರ ವಿರುದ್ದ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

2019ರಲ್ಲಿ ಸಂತ್ರಸ್ತ ಯುವತಿಗೆ 17 ವರ್ಷ ಇರುವಾಗಲೇ ಆರೋಪಿ ವರುಣ್ ಮದುವೆಯಾಗುವುದಾಗಿ ನಂಬಿಸಿ, ಆಕೆಯ ಜತೆಗೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಯುವತಿ ಗಂಭೀರ ಆರೋಪ ಮಾಡಿದ್ದಾಳೆ.

ಯುವತಿ ನೀಡಿದ ದೂರಿನಲ್ಲೇನಿದೆ?

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

2016-17ನೇ ಸಾಲಿನಲ್ಲಿ ನ್ಯಾಷನಲ್ ಸೆಂಟರ್ ಆಗಿ ಎಕ್ಸಿಲೆನ್ಸ್​ನಿಂದ ವಾಲಿಬಾಲ್ ಕ್ರೀಡೆಯಲ್ಲಿ ಆಯ್ಕೆಯಾಗಿ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ದಕ್ಷಿಣ ವಿಭಾಗದಲ್ಲಿ ಸಂತ್ರಸ್ತ ಯುವತಿ ತರಬೇತಿ ಪಡೆಯುತ್ತಿದ್ದರು. ಈ ಸಮಯದಲ್ಲಿ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಹಾಸ್ಟೆಲ್‌ವೊಂದರಲ್ಲಿ ನೆಲೆಸಿದ್ದಳು.

ಸಾಮಾಜಿಕ ಜಾಲತಾಣದ ಮೂಲಕ ಹಾಕಿ ಆಟಗಾರ ವರುಣ್ ಕುಮಾರ್ ಸಂತ್ರಸ್ತ ಯುವತಿಗೆ ಪರಿಚಯವಾಗಿದ್ದಾನೆ. ಈ ಸಮಯದಲ್ಲಿ ಯುವತಿಯು 17 ವರ್ಷದವಳಾಗಿದ್ದಳು. ಯುವತಿಯ ಜತೆಗೆ ಸ್ನೇಹಿತನಾದ ವರುಣ್ ಬಳಿಕ ಆಕೆಯನ್ನು ಪ್ರೀತಿಸುವುದಾಗಿ ತಿಳಿಸಿದ್ದಾನೆ.

ಈ ಸುದ್ದಿ ಓದಿದ್ದೀರಾ?  ಕೆಎಸ್‌ಆರ್‌ಟಿಸಿಯಿಂದ 100 ಹೊಸ ವಿನ್ಯಾಸದ ‘ಅಶ್ವಮೇಧ’ ಬಸ್‌ ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ

“ಯುವತಿ 17 ವರ್ಷದವಳು ಇರುವಾಗಲೇ 2019ರಲ್ಲಿ ನೈಟ್ ಡಿನ್ನರ್ ನೆಪದಲ್ಲಿ ಜಯನಗರಕ್ಕೆ ಕರೆದುಕೊಂಡು ಹೋಗಿ ಮದುವೆಯಾಗುವುದಾಗಿ ನಂಬಿಸಿ ಆಕೆಯ ಜತೆಗೆ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದನು. ಇದಲ್ಲದೇ, ನಿರಂತರ ಐದು ವರ್ಷಗಳ ಕಾಲ ಮದುವೆಯಾಗುವುದಾಗಿ ನಂಬಿಸಿ ಸಂತ್ರಸ್ತ ಯುವತಿ ಜತೆಗೆ ಆರೋಪಿ ವರುಣ್ ದೈಹಿಕ ಸಂಪರ್ಕ ಮಾಡಿದ್ದನು” ಎಂದು ಸಂತ್ರಸ್ತ ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಒಂದು ವರ್ಷದ ಹಿಂದೆ ಸಂತ್ರಸ್ತ ಯುವತಿಯ ತಂದೆ ಮೃತಪಟ್ಟಾಗ ಮನೆ ಬಳಿ ಬಂದು ವರುಣ್ ಸಾಂತ್ವನ ಹೇಳಿ ಹೋಗಿದ್ದನು. ಆ ಘಟನೆ ಬಳಿಕ ವರುಣ್ ಈಗ ಸಂಪರ್ಕಕ್ಕೆ ಸಿಗದೇ ವಂಚಿಸುತ್ತಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಬಿಸಿಲಿನ ತಾಪ ಹೆಚ್ಚಳ; ಮೃಗಾಲಯ ತಂಪಾಗಿಡಲು ವಿಶೇಷ ವ್ಯವಸ್ಥೆ

ಪ್ರಸ್ತುತ ವರ್ಷ ಮೈಸೂರು ನಗರದಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗಿರುವುದರಿಂದ ಮೃಗಾಲಯದ ಪ್ರಾಣಿಗಳು...

ತುಮಕೂರು | ಹಾಲಪ್ಪ ಯಾರು? ಮುದ್ದಹನುಮೇಗೌಡರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ: ಸಚಿವ ರಾಜಣ್ಣ

ಮಾಜಿ ಸಂಸದ ಮುದ್ದಹನುಮೇಗೌಡ ಅವರು ಯಾವುದೇ ಷರತ್ತಿಲ್ಲದೆ ಪಕ್ಷಕ್ಕೆ ಮರು ಸೇರ್ಪಡೆಯಾಗಿದ್ದು,...

ಬೆಂಗಳೂರು | ಕನ್ನಡ ನಾಮಫಲಕ ಕಡ್ಡಾಯ; ತಪ್ಪಿದಲ್ಲಿ ‘ಕರ್ನಾಟಕ ಬಂದ್’: ವಾಟಾಳ್ ನಾಗರಾಜ್ ಎಚ್ಚರಿಕೆ

ಕನ್ನಡ ನಾಮಫಲಕ ಕಡ್ಡಾಯಕ್ಕೆ ಮೂರು ದಿನಗಳಷ್ಟೇ ಬಾಕಿ ಉಳಿದಿದ್ದು, ಗಡುವು ಮುಗಿಯುವುದರೊಳಗಾಗಿ...

ತುಮಕೂರು | ಲೋಕಸಭಾ ಚುನಾವಣೆಗೆ ಜೆಡಿಎಸ್‌ ಟಿಕೆಟ್‌ ಬೇಡಿಕೆಯಿಟ್ಟ ಕೆ.ಟಿ ಶಾಂತಕುಮಾರ್

ಕಳೆದ 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್...