ರಾಮಮಂದಿರ ಉದ್ಘಾಟನೆ | ರಾಜ್ಯದಲ್ಲಿ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿ; ಪೊಲೀಸರಿಗೆ ಸಿಎಂ ಸೂಚನೆ

Date:

Advertisements

ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಪೊಲೀಸರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, “ಈಗಾಗಲೇ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಅಮಾಯಕ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಸುದ್ದಿಗಳು ಕಿವಿಗೆ ಬಿದ್ದ ತಕ್ಷಣ ಆತುರಕ್ಕೆ ಬಿದ್ದು ಆವೇಶಕ್ಕೆ ಒಳಗಾಗದೆ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಬೇಕು. ಯಾವುದೇ ಕಾರಣಕ್ಕೂ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳುವ ಅಧಿಕಪ್ರಸಂಗತನವನ್ನು ಮಾಡಬಾರದು” ಎಂದು ಹೇಳಿದ್ದಾರೆ.

“ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದರೆ ಅದಕ್ಕೆ ಕಾಂಗ್ರೆಸ್ ಸರ್ಕಾರ ಹೊಣೆಯಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಹೇಳಿಕೆಯಲ್ಲಿ ಶಾಂತಿ ಕಾಪಾಡಿಕೊಂಡು ಬರಬೇಕೆಂಬ ಸದಾಶಯಕ್ಕಿಂತ ಹೆಚ್ಚಾಗಿ ಬೆದರಿಕೆ ಮತ್ತು ಪ್ರಚೋದನೆಯ ದನಿ ಇದೆ. ಸರ್ಕಾರಕ್ಕೆ ಅದರ ಕರ್ತವ್ಯದ ಅರಿವಿದೆ. ತಪ್ಪು ನಡೆದರೆ ಕಾನೂನು ಅದರ ಕೆಲಸ ಮಾಡುತ್ತದೆ” ಎಂದಿದ್ದಾರೆ.

Advertisements

“ಬಿಜೆಪಿಯ ಕೆಲವು ಶಾಸಕರು, ಸಂಸದರು ಈಗಾಗಲೇ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿರುವುದನ್ನು ರಾಜ್ಯ ಸರ್ಕಾರ ಗಮನಿಸಿದೆ. ಇಂತಹವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರು ಕಠಿಣ ಕ್ರಮಗಳನ್ನು ಕೈಗೊಂಡರೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸರ್ಕಾರದ ಕೆಲಸ ಸುಲಭವಾಗುತ್ತದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ರೈಲ್ವೆ | 5,696 ಸಹಾಯಕ ಲೋಕೋ ಪೈಲಟ್​​ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

“ದೇವರು – ಧರ್ಮ – ಪೂಜೆ – ಆರಾಧನೆಗಳೆಲ್ಲ ವೈಯಕ್ತಿಕವಾದುದು. ಇದನ್ನು ವೈಯಕ್ತಿಕ ಮಟ್ಟದಲ್ಲಿಯೇ ಉಳಿಸಿಕೊಂಡರೆ ದೇವರು – ಧರ್ಮ ಎಲ್ಲರಿಗೂ ಗೌರವ ಮತ್ತು ಸಮಾಜಕ್ಕೂ ಕ್ಷೇಮ. ಇದು ಎಲ್ಲ ಧರ್ಮಾನುಯಾಯಿಗಳಿಗೂ ಅನ್ವಯಿಸುತ್ತದೆ” ಎಂದು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

Download Eedina App Android / iOS

X