ಎತ್ತಿನಹೊಳೆ ಯೋಜನೆ ಮೂಲಕ 7 ಜಿಲ್ಲೆಗಳಿಗೆ ಕುಡಿಯುವ ನೀರು: ಸಿಎಂ ಸಿದ್ದರಾಮಯ್ಯ

Date:

ಎತ್ತಿನಹೊಳೆ ನೀರಾವರಿ ಯೋಜನೆಯಲ್ಲ, ಕುಡಿಯುವ ನೀರು ಮತ್ತು ಕೆರೆ ತುಂಬಿಸುವ ಯೋಜನೆಯಾಗಿದ್ದು, ಯೋಜನಾ ವ್ಯಾಪ್ತಿಯ ಎಲ್ಲ 7 ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವುದು ಸರ್ಕಾರದ ಗುರಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು.

- Advertisement -

ಅವರು ಇಂದು ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆಸಿದ ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಎತ್ತಿನಹೊಳೆ ಯೋಜನೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವುದು ಸರ್ಕಾರದ ಆದ್ಯತೆಯಾಗಿದೆ. ಕುಡಿಯುವ ನೀರಿನ ಪೂರೈಕೆಗೆ ಬೇಕಾದಷ್ಟು ನೀರು ಸರಾಸರಿ ಲಭ್ಯವಿದೆ. ಪ್ರಾರಂಭಿಕ ಹಂತದಲ್ಲಿ ಕುಡಿಯುವ ನೀರಿನ ಕಾಮಗಾರಿಗಳನ್ನು ಪೂರ್ಣಗೊಳಿಸಿ ಬಳಿಕ ಕೆರೆಗಳನ್ನು ತುಂಬಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು. ಯೋಜನಾ ವ್ಯಾಪ್ತಿಯ ಎಲ್ಲ ಜಿಲ್ಲೆಗಳಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಖಾತ್ರಿಪಡಿಸಬೇಕು. ಕುಡಿಯುವ ನೀರು ಕಾಮಗಾರಿ ಪೂರ್ಣಗೊಳಿಸಲು ಇರುವ ಎಲ್ಲ ತಾಂತ್ರಿಕ ಅಡಚಣೆಗಳನ್ನು ನಿವಾರಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ 14.056 ಟಿಎಂಸಿ ಕುಡಿಯುವ ನೀರು, 9.953 ಟಿಎಂಸಿ ನೀರು ಕೆರೆಯನ್ನು ತುಂಬಿಸಲು ಡಿಪಿಆರ್‌ ಮಾಡಲಾಗಿದೆ. ಯೋಜನೆಗೆ 23,251.66 ಕೋಟಿ ರೂ. ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇದುವರೆಗೆ ರೂ.17,147 ಕೋಟಿ ವೆಚ್ಚವಾಗಿದೆ. ಒಂದನೇ ಹಂತದಲ್ಲಿ ನದಿ ಪಾತ್ರದ ಏತ ಕಾಮಗಾರಿಗಳಲ್ಲಿ 7 ಪ್ಯಾಕೇಜ್‌ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಹಂತ 2ರಲ್ಲಿ ಗುರುತ್ವ ಮುಖ್ಯ ಕಾಲುವೆ ಕಾಮಗಾರಿಗಳಲ್ಲಿ 33 ಪ್ಯಾಕೇಜ್‌ಗಳ ಪೈಕಿ 11 ಪ್ಯಾಕೇಜ್ ಪೂರ್ಣಗೊಳಿಸಲಾಗಿದೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರೇ ಹೇಳಿ- ಅಘೋಷಿತ ತುರ್ತುಪರಿಸ್ಥಿತಿ ಮುಗಿಯುವುದು ಯಾವಾಗ?

16 ಕಿಮೀ ವ್ಯಾಪ್ತಿಯ ಕಾಮಗಾರಿ ಪ್ರಾರಂಭಿಸಬೇಕಿದ್ದು, ಇದರಲ್ಲಿ 6 ಎಕರೆ ಅರಣ್ಯ ಪ್ರದೇಶ ಹಾಗೂ 10 ಕಿಮೀ ಭೂಸ್ವಾಧೀನ ಪ್ರಕ್ರಿಯೆ ಕೈಗೊಳ್ಳಬೇಕಾಗಿದೆ. ಯೋಜನೆಯನ್ನು 2027ರ ಮಾರ್ಚ್‌ ಒಳಗಾಗಿ ಪೂರ್ಣಗೊಳಿಸಲು ಕಾಲಾವಧಿ ನಿಗದಿಪಡಿಸಲಾಗಿದೆ. ಕಳೆದ ಏಳು ವರ್ಷಗಳಲ್ಲಿ ಸರಾಸರಿ 18.08 ಟಿಎಂಸಿ ನೀರು ಯೋಜನೆಗೆ ಲಭ್ಯವಿದ್ದು, ಉಳಿದ 6 ಟಿಎಂಸಿ ನೀರಿನ ಕೊರತೆಯನ್ನು ನೀಗಿಸಲು ಹೆಚ್ಚುವರಿ ನೀರನ್ನು ತಿರುವುಗೊಳಿಸುವ ಕುರಿತು ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲು ಸಮಾಲೋಚಕರನ್ನು ನೇಮಕ ಮಾಡಲಾಗಿದೆ ಎಂದು ಸಿಎಂ ಹೇಳಿದರು.

ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಡಾ.ಜಿ. ಪರಮೇಶ್ವರ್, ಕೆ.ಎಚ್. ಮುನಿಯಪ್ಪ, ಕೃಷ್ಣ ಭೈರೇಗೌಡ, ಡಾ.ಎಂ.ಸಿ. ಸುಧಾಕರ್, ಭೈರತಿ ಸುರೇಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ ಮತ್ತು ಮೇಕೆ

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...