ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾಳೆ ಎಂದು ದುಷ್ಟ ಪತಿಯೊಬ್ಬ ತನ್ನ ಪತ್ನಿಯನ್ನು ಕೊಲೆಗೈದಿರುವ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಶ್ವೇತಾ(31) ಮೃತ ದುರ್ದೈವಿ. ಶ್ವೇತಾ ಪತಿ ಆರೋಪಿ ದರ್ಶನ್. ಈತ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾನೆ. ಶ್ವೇತಾ ಮತ್ತು ದರ್ಶನ್‌ಗೆ 7 ವರ್ಷಗಳ ಹಿಂದೆ ವಿವಾಹವಾಗಿತ್ತು. ದಂಪತಿಗೆ 4 ವರ್ಷದ ಗಂಡು ಮಗುವೊಂದಿದೆ.
ಕೆಲಸದ ನಿಮಿತ್ತ ಬೆಂಗಳೂರಿನಲ್ಲಿಯೇ ನೆಲೆಸಿರುವ ದಂಪತಿ 4 ದಿನದ ಹಿಂದೆ ಬೆಂಗಳೂರಿನಿಂದ ದೇವವೃಂದಕ್ಕೆ ಬಂದಿದ್ದರು. ಈ ವೇಳೆ, ಹಾರ್ಟ್ ಅಟ್ಯಾಕ್‌ನಿಂದ ಶ್ವೇತಾ ಮೃತಪಟ್ಟಿದ್ದಾಳೆ ಎಂದು ಪತಿ ದರ್ಶನ್ ಆಕೆಯ ಕುಟುಂಬಸ್ಥರಿಗೆ ತಿಳಿಸಿದ್ದನು.
ದರ್ಶನ್ ವಿವಾಹೇತರ ಸಂಬಂಧ ಹೊಂದಿದ್ದಾನೆ. ಇದಕ್ಕೆ ಅಡ್ಡಿಯಾದ ಶ್ವೇತಾಳನ್ನು ವಿಷದ ಇಂಜೆಕ್ಷನ್ ಚುಚ್ಚಿ ಕೊಲೆ ಮಾಡಿರಬಹುದು ಎಂದು ಶ್ವೇತಾ ಕುಟುಂಬದವರು ಆರೋಪಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹೊಸ ವರ್ಷಕ್ಕೆ ಸಂಗ್ರಹಿಸಿಟ್ಟಿದ್ದ ₹21 ಕೋಟಿ ಮೌಲ್ಯದ ಡ್ರಗ್ಸ್ ವಶ
ಶ್ವೇತಾ ಅವರ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸುತ್ತಿರುವ ವೇಳೆ ಮಧ್ಯ ಪ್ರವೇಶಿಸಿದ ಕುಟುಂಬಸ್ಥರು ಇದು ಸಹಜ ಸಾವಲ್ಲ, ಪತಿಯೇ ಶ್ವೇತಾ ಅವರನ್ನು ಕೊಲೆ ಮಾಡಿದ್ದಾನೆ. ಈಗ ತರಾತುರಿಯಲ್ಲಿ ಅಂತ್ಯಕ್ರಿಯೆ ನಡೆಸಲು ಮುಂದಾಗಿದ್ದಾನೆ ಎಂದು ಆರೋಪಿಸಿ, ಅಂತ್ಯ ಕ್ರಿಯೆಯನ್ನು ತಡೆದಿದ್ದಾರೆ.
ಶವ ಪರೀಕ್ಷೆಗೆ ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ. ಈ ಸಂಬಂಧ ಗೋಣಿಬೀಡು ಠಾಣೆಯಲ್ಲಿ ದರ್ಶನ್ ವಿರುದ್ಧ ಪ್ರಕರಣ ದಾಖಲಾಗಿದೆ.
ಶ್ವೇತಾ ಪತಿ ಮೇಲೆ ಕೊಲೆ ಆರೋಪ ಕೇಳಿ ಬಂದ ಹಿನ್ನೆಲೆ, ಪತಿ ದರ್ಶನ್‌ರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.