ರಾಜ್ಯದಲ್ಲಿ ಮಕ್ಕಳ ನಾಪತ್ತೆ ಪ್ರಕರಣಗಳು ಏರಿಕೆ; ಬಾಲಕಿಯರ ಸಂಖ್ಯೆ ಹೆಚ್ಚು

Date:

ರಾಜ್ಯದಲ್ಲಿ ಮಕ್ಕಳ ನಾಪತ್ತೆ ಮತ್ತು ಅಪಹರಣ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು, ಇದರಲ್ಲಿ ಬಾಲಕಿಯರ ಕಾಣೆಯಾಗುವ ಪ್ರಮಾಣ ಆತಂಕಕಾರಿ ಮಟ್ಟದಲ್ಲಿದೆ.

- Advertisement -

ಗೃಹ ಇಲಾಖೆಯ ಅಂಕಿಅಂಶಗಳ ಪ್ರಕಾರ, 2025ರ ಜುಲೈ ಅಂತ್ಯದವರೆಗೆ 2,170 ಮಕ್ಕಳು ಕಾಣೆಯಾಗಿದ್ದಾರೆ. ಇವರಲ್ಲಿ 551 ಬಾಲಕರು ಮತ್ತು 1,619 ಬಾಲಕಿಯರು. ಕಳೆದ ಐದೂವರೆ ವರ್ಷಗಳಲ್ಲಿ ಕಾಣೆಯಾದ 10,792 ಬಾಲಕಿಯರಲ್ಲಿ 1,003 ಮತ್ತು 4,086 ಬಾಲಕರಲ್ಲಿ 333 ಮಕ್ಕಳು ಇನ್ನೂ ಪತ್ತೆಯಾಗಿಲ್ಲ. ಈ ಪ್ರಕರಣಗಳ ಸಂಬಂಧ 634 ಆರೋಪಿಗಳನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಈ ಎಲ್ಲ ಪ್ರಕರಣಗಳನ್ನು ‘ಮಕ್ಕಳ ಕಾಣೆ/ಅಪಹರಣ’ ಎಂದು ವರ್ಗೀಕರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

2020ರಿಂದ 2025ರ ಜುಲೈವರೆಗೆ ಕಾಣೆಯಾದ 14,878 ಮಕ್ಕಳ ಪೈಕಿ 13,542 ಮಕ್ಕಳು ತಮ್ಮ ಪೋಷಕರ ಬಳಿಗೆ ಮರಳಿದ್ದಾರೆ. ಈ ಪ್ರಕರಣಗಳಲ್ಲಿ ಬೆಂಗಳೂರು ನಗರ ಜಿಲ್ಲೆ ಮೊದಲ ಸ್ಥಾನದಲ್ಲಿದ್ದರೆ, ದಾವಣಗೆರೆ, ಉಡುಪಿ, ದಕ್ಷಿಣ ಕನ್ನಡ, ಹಾವೇರಿ, ಚಿತ್ರದುರ್ಗ, ತುಮಕೂರು ಮತ್ತು ಮೈಸೂರು ಜಿಲ್ಲೆಗಳು ನಂತರದ ಸ್ಥಾನಗಳಲ್ಲಿವೆ.

ಕೌಟುಂಬಿಕ ವಿವಾದಗಳು, ತಂದೆ-ತಾಯಿಯ ಜಗಳ, ವಿಚ್ಛೇದನದಿಂದ ನೊಂದ ಮಕ್ಕಳು ಮನೆ ತೊರೆಯುವುದು, ಹದಿಹರೆಯದವರು ಪ್ರೀತಿ-ಪ್ರೇಮದ ಆಮಿಷಕ್ಕೆ ಸಿಲುಕಿ ಮನೆಬಿಡುವುದು, ಬಾಲಕಾರ್ಮಿಕರಾಗಿ ದುಡಿಯಲು ಒತ್ತಾಯ, ವೇಶ್ಯಾವಾಟಿಕೆಗೆ ತಳ್ಳುವುದು, ಅಂಗಾಂಗ ಮಾರಾಟ ಮತ್ತು ಭಿಕ್ಷಾಟನೆಗೆ ಬಳಸಿಕೊಳ್ಳಲು ಮಕ್ಕಳನ್ನು ಅಪಹರಿಸುವುದು ಈ ಪ್ರಕರಣಗಳಿಗೆ ಕಾರಣವಾಗಿದೆ.

“ನಾಪತ್ತೆಯಾದ ಮಾಹಿತಿ ತಿಳಿದ ಕೂಡಲೇ ದೂರು ದಾಖಲಿಸಿದರೆ ಮಕ್ಕಳನ್ನು ಶೀಘ್ರವಾಗಿ ಪತ್ತೆ ಮಾಡಬಹುದು. ಮೊದಲ 24 ಗಂಟೆಗಳು (ಗೋಲ್ಡನ್ ಅವರ್) ನಿರ್ಣಾಯಕ. ಫೋಟೊ ಮತ್ತು ಇತರೆ ಮಾಹಿತಿಯನ್ನು ಒದಗಿಸಿದರೆ, ಇಲಾಖೆಯ ಗ್ರೂಪ್‌ಗಳಲ್ಲಿ ಮಾಹಿತಿ ಹಂಚಿಕೊಂಡು ಮಕ್ಕಳನ್ನು ಪತ್ತೆ ಮಾಡಿ ಪೋಷಕರಿಗೆ ಒಪ್ಪಿಸಲಾಗುವುದು,” ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್‌ಗಷ್ಟೇ ಅಲ್ಲ, ಸಮಾಜಕ್ಕೆ ಅರ್ಥವಾಗಿದೆಯೇ ಆರ್‌ಎಸ್‌ಎಸ್ ಅಜೆಂಡಾ?

“ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಾದ ನಂತರ ನಾಪತ್ತೆ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಸಿಸಿಟಿವಿ ಕ್ಯಾಮೆರಾಗಳು, ಮೊಬೈಲ್ ನೆಟ್‌ವರ್ಕ್ ಸುಳಿವುಗಳನ್ನು ಆಧರಿಸಿ ಕಾಣೆಯಾದವರನ್ನು ಪತ್ತೆ ಮಾಡಲಾಗುತ್ತಿದೆ,” ಎಂದು ಅಧಿಕಾರಿಗಳು ಹೇಳುತ್ತಾರೆ.

ಕಾಣೆಯಾದ ಮಕ್ಕಳಲ್ಲಿ ಕೆಲವರು ಲೈಂಗಿಕ ಶೋಷಣೆ, ವೇಶ್ಯಾವಾಟಿಕೆ, ಬಾಲಕಾರ್ಮಿಕರಾಗಿ ಕೆಲಸ, ಭಿಕ್ಷಾಟನೆ ಮತ್ತು ಜೀತಕ್ಕೆ ಬಳಸಿಕೊಳ್ಳಲಾಗುತ್ತಿದೆ. ಕೈಕಾಲು ತಿರುಚುವ, ಕಣ್ಣು ಕೀಳುವಂತಹ ಕೃತ್ಯಗಳೂ ನಡೆಯುತ್ತಿವೆ ಎಂಬ ಆರೋಪವಿದೆ.

ನಾಪತ್ತೆಗೆ ಕಾರಣಗಳೇನು?

ಪೋಷಕರ ನಿರ್ಲಕ್ಷ್ಯ, ಬಡತನ, ನಗರದ ವ್ಯಾಮೋಹ, ಸ್ನೇಹಿತರ ಸಹವಾಸ, ದುಶ್ಚಟಗಳು, ಪರೀಕ್ಷಾ ಭಯ, ಅನುತ್ತೀರ್ಣರಾದ ಆತಂಕದಿಂದ ಮಕ್ಕಳು ಮನೆಬಿಡುತ್ತಿದ್ದಾರೆ. ಇದಲ್ಲದೆ, ಭಿಕ್ಷಾಟನೆಗೆ ಬಳಸಿಕೊಳ್ಳಲು ಮತ್ತು ಇತರ ದಂಧೆಗಳಿಗೆ ಮಕ್ಕಳನ್ನು ಅಪಹರಿಸುವ ಸಿಂಡಿಕೇಟ್‌ಗಳು ಸಕ್ರಿಯವಾಗಿವೆ ಎಂದು ಮಕ್ಕಳ ಹಕ್ಕುಗಳ ಹೋರಾಟಗಾರರು ಆರೋಪಿಸಿದ್ದಾರೆ.

ನಾಪತ್ತೆಯಾದವರ ಬಗ್ಗೆ ವಿವರಣೆ ಕೇಳಿದ ಹೈಕೋರ್ಟ್‌

ಆರು ವರ್ಷಗಳ ಹಿಂದೆ ನಗರದಿಂದ ನಾಪತ್ತೆಯಾಗಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚದೆಯೇ ಪ್ರಕರಣವನ್ನು ಮುಕ್ತಾಯಗೊಳಿಸಿದ ಪೊಲೀಸರ ಕ್ರಮಕ್ಕೆ ಬೇಸರ ವ್ಯಕ್ತಪಡಿಸಿರುವ ಹೈಕೋರ್ಟ್, ಈ ಕುರಿತು ವಿವರಣೆ ನೀಡುವಂತೆ ರಾಜ್ಯ ಸರಕಾರ ಮತ್ತು ಪೊಲೀಸ್ ಇಲಾಖೆಗೆ ಸೂಚಿಸಿದೆ.

ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಿಂದ 2019ರಲ್ಲಿ ನಾಪತ್ತೆಯಾದ ಕುಮಾರ್‌ ಎಂಬ ವ್ಯಕ್ತಿಯನ್ನು ಈವರೆಗೂ ಪತ್ತೆ ಮಾಡದ ಹಾಗೂ ಕುಟುಂಬದವರಿಗೆ ಮಾಹಿತಿ ನೀಡದೆಯೇ ಪ್ರಕರಣವನ್ನು ಮುಕ್ತಾಯಗೊಳಿಸಿರುವ ಪೊಲೀಸರ ಕ್ರಮ ಪ್ರಶ್ನಿಸಿ ಕುಮಾರ್ ಸೋದರ ಸಂಬಂಧಿ ಮಹೇಶ್‌ ಎಂಬುವವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ನಗರ ಪೊಲೀಸ್‌ ಆಯುಕ್ತರು, ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಮತ್ತು ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ಗೆ ತುರ್ತು ನೋಟಿಸ್‌ ಜಾರಿಗೊಳಿಸಿತು.

ಕಾಣೆಯಾದವರನ್ನು ಪತ್ತೆ ಹಚ್ಚದೆಯೇ ಪ್ರಕರಣ ಮುಕ್ತಾಯಗೊಳಿಸುತ್ತಿರುವುದು ಏಕೆ, ಪ್ರತಿ 8 ನಿಮಿಷಕ್ಕೆ ಒಂದು ಮಗು ನಾಪತ್ತೆಯಾಗುತ್ತಿದೆ ಎಂಬ ವರದಿಗಳಿವೆ. ನಾಪತ್ತೆಯಾದ ಪ್ರಕರಣಗಳನ್ನ ಡಾರ್ಮಾಂಟ್‌ ಲಿಸ್ಟ್‌ಗೆ (ಎಷ್ಟೇ ಹುಡುಕಿದ ಪತ್ತೆಯಾಗದೆ ನಿಶ್ಚಲವಾಗಿ ಉಳಿದ ಪ್ರಕರಣಗಳು) ಹೇಗೆ ಸೇರಿಸಲಾಗುತ್ತದೆ. ಅಂತಹ ಪ್ರಕರಣಗಳನ್ನು ಸಮಗ್ರವಾಗಿ ತನಿಖೆ ನಡೆಸಬೇಕಲ್ಲವೇ ಎಂದು ಸರಕಾರದ ಪರ ವಕೀಲರನ್ನು ಉದ್ದೇಶಿಸಿ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಮೂರ್ತಿಗಳು, ಈ ಕುರಿತು ವಿವರಣೆ ನೀಡುವಂತೆ ರಾಜ್ಯ ಸರಕಾರ ಮತ್ತು ಪೊಲೀಸ್ ಇಲಾಖೆಗೆ ಸೂಚಿಸಿ, ವಿಚಾರಣೆಯನ್ನು ನವೆಂಬರ್ 3ಕ್ಕೆ ವಿಚಾರಣೆ ಮುಂದೂಡಿತು.

ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲ ಎನ್‌. ಪುರುಷೋತ್ತಮ್‌ ವಾದ ಮಂಡಿಸಿ, ಮಲ್ಲತ್ತಹಳ್ಳಿಯಲ್ಲಿ ವಾಸವಿದ್ದ ಕುಮಾರ್‌ ಎಂಬಾತ ಕೇಟರಿಂಗ್‌ ಸಂಸ್ಥೆಯೊಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು. 2019ರಲ್ಲಿ ನಾಪತ್ತೆಯಾದ ಆತ ಹಲವು ದಿನಗಳಾದರೂ ಮನೆಗೆ ಹಿಂದಿರುಗಿಲಿಲ್ಲ. ಇದರಿಂದ, ಆತನ ಸೋದರ ಸಂಬಂಧಿಯಾಗಿರುವ ಅರ್ಜಿದಾರರು 2020ರಲ್ಲಿ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ದೂರು ನೀಡಿದ್ದರು. ಆದರೆ, ಕುಮಾರ್‌ ಅನ್ನು ಪತ್ತೆ ಹಚ್ಚದ ಪೊಲೀಸರು, ಪ್ರಕರಣವನ್ನು 2024ರಲ್ಲಿ ಮುಕ್ತಾಯಗೊಳಿಸಿದ್ದಾರೆ. ಪ್ರಕರಣವನ್ನು ಡಾರ್ಮಾಂಟ್‌ ಲಿಸ್ಟ್‌ಗೆ ಸೇರಿಸಿದ್ದಾರೆ. ಈ ಬಗ್ಗೆ ಕುಮಾರ್‌ ಮನೆಯವರಿಗಾಗಲಿ ಅಥವಾ ಅರ್ಜಿದಾರರಿಗೆ ಮಾಹಿತಿ ನೀಡಿಲ್ಲ. ಪ್ರಕರಣವನ್ನು ಮುಕ್ತಾಯಗೊಳಿಸಿದಾಗ ನಾಪತ್ತೆಯಾದ ಕುಟುಂಬದವರಿಗೆ ಮಾಹಿತಿ ನೀಡುವುದು ಕಡ್ಡಾಯ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...