ಚಿತ್ರದುರ್ಗ | ನದಾಫ್ ಪಿಂಜಾರ ಸಂಘದ ರಾಜ್ಯ ಮಟ್ಟದ ಸಮಾವೇಶ, ಪ್ರತಿಭಾ ಪುರಸ್ಕಾರ

Date:

ಕರ್ನಾಟಕ ರಾಜ್ಯದ ನದಾಫ್ ಪಿಂಜಾರ ಸಂಘದ ಸಂಸ್ಥಾಪನಾ ದಿನಾಚರಣೆ ಹಾಗೂ ರಾಜ್ಯ ಮಟ್ಟದ ಸಮಾವೇಶ, ಸಾಧಕರ, ಪ್ರತಿಭಾವಂತ ವಿದ್ಯಾರ್ಥಿಗಳ ಪುರಸ್ಕಾರ ಮತ್ತು ವಕೀಲರ ಸಮಾವೇಶ ಚಿತ್ರದುರ್ಗ ನಗರದ ಮುರುಘಾ ಮಠದ ಅನುಭವ ಮಂಟಪದ ಒಳಾಂಗಣ ಅವರಣದಲ್ಲಿ 25 ಅಕ್ಟೋಬರ್ 2025 ರ ಶನಿವಾರ ಬೆಳಗ್ಗೆ 10.30ಕ್ಕೆ ನಡೆಯಲಿದೆ.

- Advertisement -

ನದಾಫ್ ಪಿಂಜಾರ ಸಂಘ ಚಿತ್ರದುರ್ಗ ಜಿಲ್ಲಾ ಘಟಕದ ಸಹಯೋಗದಲ್ಲಿ ನಡೆಯಲಿರುವ ರಾಜ್ಯಮಟ್ಟದ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮಗಳ ವೇದಿಕೆಗೆ ಭಾವೈಕ್ಯತೆಗೆ ಹೆಸರಾದ ಜಗಳೂರಿನ ಮಹಮದ್ ಇಮಾಮ್ ಎಂದು ಹೆಸರಿಡಲಾಗಿದೆ. ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ನೆರವೇರಿಸಲಿದ್ದು, ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್, ಸಚಿವ ಶಿವರಾಜ್ ತಂಗಡಗಿ, ಸಂಸದ ಗೋವಿಂದ ಕಾರಜೋಳ ಭಾಗವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಅನುಭವ ಮಂಟಪದ ಆವರಣದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಕರ್ನಾಟಕದ ಏಕೀಕರಣದ ಹುತಾತ್ಮ ಬಳ್ಳಾರಿಯ ಪೈಲ್ವಾನ್ ಸಾಬ್ ರವರ ಕುರಿತು ಸಿದ್ರಾಮ ಕಲ್ಮಠ ವಿರಚಿತ ಪುಸ್ತಕದ ಮೂರನೇ ಆವೃತ್ತಿ ಬಿಡುಗಡೆಯಾಗಲಿದೆ.

ಕಾರ್ಯಕ್ರಮದಲ್ಲಿ ಸಮಾಜದ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಕಾರ್ಯಕ್ರಮವಿರಲಿದ್ದು, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ. ಅಲ್ಲದೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಮಾಜದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಕಾನೂನು ನೆರವು ಮತ್ತು ವಿಷಯ ಪ್ರಸ್ತುತಪಡಿಸಲು ವಕೀಲರ ಸಮಾವೇಶ ಕೂಡ ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮುಖ್ಯಮಂತ್ರಿ ಬದಲಾವಣೆ ವಿಚಾರ; ಯತೀಂದ್ರಗೆ ನೋಟೀಸ್ ಏಕಿಲ್ಲ? ಶಾಸಕ ಬಸವರಾಜ್ ಶಿವಗಂಗಾ ಪ್ರಶ್ನೆ

ಕಾರ್ಯಕ್ರಮದಲ್ಲಿ ಶಾಸಕ ರಘುಮೂರ್ತಿ, ಶಾಸಕ ಗೋವಿಂದಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಾಜ್ ಪೀರ್, ಮಾಜಿ ಸಚಿವ ಆಂಜನೇಯ, ಸಂಘದ ರಾಜ್ಯಾಧ್ಯಕ್ಷ ಜಲೀಲ್ ಸಾಬ್, ಜಿಲ್ಲಾಧ್ಯಕ್ಷ ರಷೀದ್, ಉಪಾಧ್ಯಕ್ಷ ಷಫಿವುಲ್ಲಾ, ಮಹಮದ್ ಇಮಾಮ್ ಕಾರ್ಯದರ್ಶಿ ಅಲೀಪೀರ್, ಅಕ್ಬರ್ ಭಾಷಾ, ಖಜಾಂಚಿ ದಾದಾಪೀರ್, ರಾಜ್ಯ ಉಪಾಧ್ಯಕ್ಷ ಜಿಡಿ ನದಾಫ್, ಮೌಲಾಸಾಬ್ ಬೆಂಡಿಗೇರಿ, ಮುಖಂಡರಾದ ರಿಯಾಜ್ ನಾಗ್ತೆ, ಶಬಾಬುದ್ದೀನ್ ಕೊಪ್ಪಳ, ದಾದಾ ಕಲಂದರ್, ಲಾಲ್ ಸಾಬ್ ನದಾಫ್, ಎಸ್ ಹೆಚ್ ಮುದಕವಿ, ಪ್ರೊ. ಸನಾವುಲ್ಲ, ಮೆಹಬೂಬ್ ಅಲಿ, ಶಬಾನ
ಸೇರಿದಂತೆ ಚಿತ್ರದುರ್ಗ ಮತ್ತು ಎಲ್ಲಾ ಜಿಲ್ಲೆಗಳ ತಾಲೂಕುಗಳ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು ರಾಜ್ಯ ಘಟಕದ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರುಗಳು ಸೇರಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಹತ್ತು ಸಾವಿರ ಸಮುದಾಯದ ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.

“

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | SIR ವಿರೋಧ: ಚುನಾವಣಾ ಆಯೋಗ ಅಕ್ರಮವಾಗಿ ಕಾರ್ಯನಿರ್ವಹಿಸಿದೆ; ನಟ ಪ್ರಕಾಶ್ ರಾಜ್ 

SIR ವಿರೋಧಿ ಒಕ್ಕೂಟ, ನಾಗರೀಕ ಸಂಘಟನೆಗಳ ಹಾಗೂ ಜಾತ್ಯತೀತ ಪಕ್ಷಗಳಿಂದ ರಾಜ್ಯ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ ಮಂಡಳಿಯ ಚಪ್ಪಾಳೆ

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ...

Bhalki Ground Report | ಮುಸ್ಲಿಮರ ಮತ ಹಕ್ಕಿಗೆ ಕನ್ನ: ಬಗೆದಷ್ಟು ಬಯಲಾಗ್ತಿದೆ ‘ಫಾರ್ಮ್-7’ರ ಸಂಚು?

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಈಶ್ವರ ಬಿ.ಖಂಡ್ರೆ ಅವರು ಪ್ರತಿನಿಧಿಸುವ...