ಚಿತ್ರದುರ್ಗ | ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯ ಆಡಳಿತ ವ್ಯವಸ್ಥೆ ಮಾದರಿ; ಎಡಿಸಿ ಬಿ.ಟಿ. ಕುಮಾರಸ್ವಾಮಿ

Date:

Advertisements

ಕೆಂಪೇಗೌಡರು ಕೇವಲ ನಾಡಪ್ರಭು ಮಾತ್ರವಲ್ಲದೇ ಧರ್ಮಪ್ರಭುವೂ ಆಗಿದ್ದರು. ದೂರದೃಷ್ಟಿಯ ನಾಯಕ, ಅಪೂರ್ವ ಕನಸುಗಾರ ಸಮರ್ಥ ಆಡಳಿತಗಾರರಾಗಿದ್ದು ಅವರ ಆಡಳಿತ ಮಾದರಿಯಾಗಿದ್ದು. ಬೆಂಗಳೂರು ಜಾಗತಿಕ ನಗರವಾಗುವಲ್ಲಿ ಮೂಲ ಕಾರಣಕರ್ತರಾಗಿದ್ದಾರೆ” ಎಂದು ಚಿತ್ರದುರ್ಗ ಅಪರ ಜಿಲ್ಲಾಧಿಕಾರಿ (ಎಡಿಸಿ) ಬಿ ಟಿ ಕುಮಾರಸ್ವಾಮಿ ಸ್ಮರಿಸುವ ಮೂಲಕ ಗೌರವ ಸಲ್ಲಿಸಿದರು.‌

1002225774

ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಸಮಾರಂಭದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದ ಅವರು “ಬೆಂಗಳೂರು ಎಲ್ಲ ಧರ್ಮಗಳಿಗೆ ಎಲ್ಲ ಭಾಷಿಕರಿಗೆ ಸುರಕ್ಷಿತ ಸ್ಥಳ, ಹಾಗಾಗಿ ಬೆಂಗಳೂರು ಶೈಕ್ಷಣಿಕ, ಔದ್ಯೋಗಿಕ, ಆರೋಗ್ಯ ಸೇರಿದಂತೆ ಎಲ್ಲ ವಲಯಗಳಲ್ಲಿಯೂ ತನ್ನದೇ ಆದ ಛಾಪು ಮೂಡಿಸಿದ್ದು ಜಗತ್ತಿಗೆ ಸಿಲಿಕ್ಟ್ರಾನ್ ವ್ಯಾಲಿಯಾಗಿದೆ. ಈ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ” ಎಂದು ಹೇಳಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ. ತಾಜ್ ಪೀರ್ ಮಾತನಾಡಿ “ಬೆಂಗಳೂರು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದ್ದು, ಐಟಿ ಬಿಟಿ ಕಂಪನಿಗಳಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿದೆ. ಕೆಂಪೇಗೌಡರು ವ್ಯಕ್ತಿಯ ಹೆಸರಿನಲ್ಲಿ ವಿವಿಧ ಪೇಟೆಗಳನ್ನು ನಿರ್ಮಿಸಿದ್ದರು, ಈ ಪೇಟೆಗಳೆಲ್ಲವೂ ಪ್ರಸ್ತುತ ಇಂಡಸ್ಟ್ರೀಯಲ್ ಏರಿಯಾಗಳಾಗಿವೆ. ಮಹಾ ಪುರುಷರ ಜಯಂತಿಗಳು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೇ ಎಲ್ಲ ಸಮುದಾಯದವರು ಸೇರಿ ಆಚರಣೆ ಮಾಡಬೇಕು. ಇಂದಿನ ಯುವ ಪೀಳಿಗೆ ಮಹನೀಯರ ವಿಚಾರಧಾರೆಗಳನ್ನು ತಿಳಿದುಕೊಳ್ಳಬೇಕು” ಎಂದು ತಿಳಿಸಿದರು.

Advertisements
1002225772

ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಆರ್. ಶಿವಣ್ಣ ಅವರು ಮಾತನಾಡಿ, “ಬೆಂಗಳೂರು ನಗರವನ್ನು ವಿಶ್ವವಿಖ್ಯಾತ ನಗರವಾಗಿ ನಿರ್ಮಾಣ ಮಾಡಿದವರು ಕೆಂಪೇಗೌಡರು. ಅವರ ಹೆಸರಿನಲ್ಲಿ ರಾಜ್ಯದಲ್ಲಿ 53 ಜನರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಅವರ ದೂರದೃಷ್ಟಿಯ ಯೋಜನೆಗಳು ಇಂದಿನ ಜನಪ್ರತಿನಿಧಿಗಳಿಗೆ ಮಾದರಿಯಾಗಿದೆ” ಎಂದರು.

ಸಾಹಿತಿ ಹಾಗೂ ನಿವೃತ್ತ ಪ್ರಾಂಶುಪಾಲ ಡಾ.ಸಿ. ಶಿವಲಿಂಗಪ್ಪ ಉಪನ್ಯಾಸ ನೀಡಿ, “ಬೆಂಗಳೂರು ನಗರ ನಿರ್ಮಾತೃ ಕೆಂಪೇಗೌಡರು ಧೀರೋದಾತ್ತ ನಾಯಕ, ರಾಜಕೀಯ ಮುತ್ಸದ್ಧಿ ಹಾಗೂ ಆರ್ಥಿಕ ಚಿಂತಕ. 16ನೇ ಶತಮಾನದಲ್ಲಿ ಯೋಜನಾ ಬದ್ಧ ಶೈಲಿ ನಗರವಾಗಿ ಮಾಡಿದ ಬೆಂಗಳೂರು ನಗರ ಸಂಸ್ಥಾಪಕ ಕೆಂಪೇಗೌಡರು, ನಾಡು ಮತ್ತು ಜನರ ಹಿತರಕ್ಷಣೆಗಾಗಿ ಕೆರೆ ಕೋಟೆ ಮತ್ತು ಗುಡಿಗೋಪುರಗಳ ನಿರ್ಮಾಣದ ಜೊತೆಗೆ ನಗರ ಹಾಗೂ ಕೃಷಿ ನೀರಿನ ಸಂಪನ್ಮೂಲ ವ್ಯವಸ್ಥೆ ಮತ್ತು ವಾಣಿಜ್ಯ ನಗರವಾಗಿ ಅಭಿವೃದ್ಧಿ ಮಾಡಿದರು. ರಕ್ಷಣೆ ಮತ್ತು ಆಡಳಿತ ವ್ಯವಸ್ಥೆಯಿಂದ ಇಡೀ ನಾಡು ಕಾಂತಿ ಮತ್ತು ಸುಭಿಕ್ಷವಾಗಿರುವಂತೆ ಆಳ್ವಿಕೆ ಮಾಡಿದ ಜನಹಿತ ಕಾರ್ಯಗಳಿಂದ ಲೋಕ ಪ್ರಸಿದ್ದಿಯಾದ ಮಾನವತಾವಾದಿ ಕೆಂಪೇಗೌಡ ನಾಡಪ್ರಭುಗಳು ಅಜರಾಮರರಾಗಿದ್ದಾರೆ” ಎಂದು ಪ್ರಶಂಸೆ ವ್ಯಕ್ತಪಡಿಸಿದರು. .

1002225773

“ಕೆಂಪೇಗೌಡರ ಆತ್ಮಸ್ಥೈರ್ಯ ಪರಿಶ್ರಮ ಬದ್ಧತೆ, ನೈತಿಕತೆ, ಸ್ವಾಭಿಮಾನ, ಜನಹಿತ ಇಚ್ಚಾಶಕ್ತಿ, ಅನುಪಮ ವ್ಯಕ್ತಿತ್ವದ ನಾಯಕತ್ವದ ಒಳನೋಟಗಳು ಈಗಿನ ಜನಪ್ರತಿನಿಧಿಗಳಿಗೆ ಮತ್ತು ಆಡಳಿತಗಾರರಿಗೆ ಪ್ರೇರಕಶಕ್ತಿಯಾಗಿ ಮಾದರಿಯಾಗಬೇಕಾಗಿದೆ” ಎಂದು ಹೇಳಿದರು.

ನಾಡಪ್ರಭು ಕೆಂಪೇಗೌಡ ಜಯಂತಿ ಪ್ರಯುಕ್ತ ಆಯೋಜಿಸಲಾದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಪುಸ್ತಕ ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಜಿಲ್ಲಾ ಯುವ ಕಾಂಗ್ರೆಸ್ಸಿನ ತಿರಂಗಾ ಯಾತ್ರೆ ಹಾಗೂ ಪದಗ್ರಹಣ ಸಮಾರಂಭ

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್. ಮೈಲಾರಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಿ.ಎಂ.ಗುರುನಾಥ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಜಿ.ಪಿ. ಚೇತನ್, ಕಾರ್ಯದರ್ಶಿ ಎಸ್.ಜಗನ್ನಾಥ, ಗೌರವಾಧ್ಯಕ್ಷ ಪ್ರೊ.ಎನ್.ಈರಣ್ಣ, ಮುಖಂಡರಾದ ಕರಿಯಪ್ಪ, ರಮೇಶ ಗೌಡ, ಹನುಮಂತಪ್ಪ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್, ಕ್ಷೇತ್ರ ಸಮನ್ವಯಾಧಿಕಾರಿ ಸಂಪತ್ ಕುಮಾರ್, ಬೋಸೆದೇವರಹಟ್ಟಿಯ ಮಂಜಣ್ಣ ಮತ್ತು ತಂಡದವರು ಗೀತಗಾಯನ ನಡೆಸಿಕೊಟ್ಟರು, ಆಕಾಶವಾಣಿಯ ಡಾ.ನವೀನ್ ಮಸ್ಕಲ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X