ಚಿತ್ರದುರ್ಗ | ಸಾಣೇಹಳ್ಳಿಯ ಶಿವಕುಮಾರ ಬಯಲು ರಂಗಮಂದಿರದಲ್ಲಿ ರಾಷ್ಟ್ರೀಯ ನಾಟಕೋತ್ಸವ 2025

Date:

ಶ್ರೀ ಶಿವಕುಮಾರ ಕಲಾಸಂಘ ಸಾಣೆಹಳ್ಳಿ, ದೆಹಲಿಯ ಸಂಸ್ಕೃತಿ ಸಚಿವಾಲಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವಾಲಯದ ಸಹಕಾರದೊಂದಿಗೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ತರಳಬಾಳು ಶಾಖಾಮಠ ಸಾಣೆಹಳ್ಳಿಯ ಶಿವಕುಮಾರ ಬಯಲು ರಂಗಮಂದಿರದಲ್ಲಿ ರಾಷ್ಟ್ರೀಯ ನಾಟಕೋತ್ಸವ -2025 ಆಯೋಜಿಸಲಾಗಿದ್ದು ಪ್ರತಿದಿನ ನಾಟಕ, ನೃತ್ಯ ರೂಪಕ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜರುಗಲಿವೆ.

- Advertisement -
IMG 20250314 WA0146
ಮಕ್ಕಳ ಹಬ್ಬದಲ್ಲಿ ನೃತ್ಯ ರೂಪಕ

ಹೊಸದುರ್ಗ ತಾಲೂಕಿನ ಸಾಣೆಹಳ್ಳಿಯ ತರಳಬಾಳು ಶಾಖಾಮಠದಲ್ಲಿ ಪಂಡಿತಾರಾಧ್ಯ ಶ್ರೀಗಳ ನೇತೃತ್ವದಲ್ಲಿ 2025 ನವೆಂಬರ್ 2ರಿಂದ 7ರವರೆಗೆ ನಿರಂತರ ಆರು ದಿನಗಳ ಕಾಲ ರಾಷ್ಟ್ರೀಯ ನಾಟಕೋತ್ಸವ 2025 ನಡೆಯಲಿದ್ದು, ಹಲವು ನಾಟಕಗಳು ಪ್ರದರ್ಶನಗೊಳ್ಳಲಿವೆ. ಪ್ರತಿದಿನ ವಿವಿಧ ಕಾರ್ಯಕ್ರಮಗಳಿದ್ದು, ಕಾರ್ಯಕ್ರಮದಲ್ಲಿ ನಾಡಿನ ಗಣ್ಯರು ಭಾಗವಹಿಸಲಿದ್ದಾರೆ. ಆರೋಗ್ಯ, ಮೌಲ್ಯಾಧಾರಿತ ಶಿಕ್ಷಣ, ಕೃಷಿ, ಲಿಂಗಾಯತ ಧರ್ಮ, ಸಂಸ್ಕೃತಿ ಸೇರಿದಂತೆ ವಿವಿಧ ವಿಷಯಗಳ ಉಪನ್ಯಾಸ, ಸಂವಾದ ಹಾಗೂ ಪ್ರತಿ ವರ್ಷ ಕೊಡಮಾಡುವ ಶ್ರೀ ಶಿವಕುಮಾರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...
1002969582

ರಾಷ್ಟ್ರೀಯ ನಾಟಕೋತ್ಸವದಲ್ಲಿ ಪಂಡಿತಾರಾಧ್ಯ ಶ್ರೀಗಳ ವಿರಚಿತ ‘ಜಂಗಮದೆಡೆಗೆ’ ಹಾಗೂ ‘ಶಿವಯೋಗಿ ಸಿದ್ದರಾಮೇಶ್ವರ’ ರವಿಕಿರಣ್ ಬಳ್ಳೆಗೆರೆ ರಚಿತ ‘ಆಳಿದ ಮಹಾಸ್ವಾಮಿಗಳು’ ಕೃಷ್ಣಮೂರ್ತಿ ಮೂಡಬಾಗಿಲುರವರ ‘ಕಳ್ಳರ ಸಂತೆ’ ಶೃತಿ ಶರಣ್ ಕುಮಾರ್ ರಚನೆಯ ‘ಭೂತಾಯಿ’ ನಾಡೋಜ ಹಂಪನಾ ರಚನೆಯ ದೇಸಿಕಾವ್ಯ ನಾಟಕ ‘ಚಾರುಲತಾ’ ಡಾ. ವಿಜಯ ಭಾಸ್ಕರ್ ರಚನೆಯ ಡಾ. ಲಕ್ಷ್ಮೀದೇವಿ ಕನ್ನಡ ಅನುವಾದದ ‘ಗಾಂಧೀ ಜಯಂತಿ’ ಸೇರಿದಂತೆ ನಾಟಕಗಳು ಪ್ರದರ್ಶನಗೊಳ್ಳಲಿದೆ.

1002969580

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ರಾಜಕಾರಣಿಗಳಿಗೆ ಕಿವುಡುತನ ಹೆಚ್ಚು, ಕೇಳಿಸಲು ಹೋರಾಟ ಮಾಡಿ: ಬಸವಕುಮಾರ ಶ್ರೀ

ನವಂಬರ್ 7ರಂದು ಶಿವಕುಮಾರ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಮತ್ತು ಸಮಾರೋಪ ಸಮಾರಂಭ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಖ್ಯಾತ ರಂಗಭೂಮಿ ಕಲಾವಿದೆ ಉಮಾಶ್ರೀಯವರಿಗೆ ಈ ಬಾರಿಯ ಶ್ರೀ ಶಿವಕುಮಾರ ಪ್ರಶಸ್ತಿ ಘೋಷಿಸಲಾಗಿದ್ದು, ಸಮಾರೋಪ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ನಡೆಯಲಿದೆ.

1002969604

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಕೊಂದವರು ಯಾರು?’ – ಧರ್ಮಸ್ಥಳದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅ.2ರಂದು ಬೃಹತ್ ವಿಚಾರ ಸಂಕಿರಣ

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಹಲವಾರು ದಶಕಗಳಿಂದ ನಡೆದಿದೆ...

ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ...

ಹಾಸನ | SIR ವಿರೋಧ: ಚುನಾವಣಾ ಆಯೋಗ ಅಕ್ರಮವಾಗಿ ಕಾರ್ಯನಿರ್ವಹಿಸಿದೆ; ನಟ ಪ್ರಕಾಶ್ ರಾಜ್ 

SIR ವಿರೋಧಿ ಒಕ್ಕೂಟ, ನಾಗರೀಕ ಸಂಘಟನೆಗಳ ಹಾಗೂ ಜಾತ್ಯತೀತ ಪಕ್ಷಗಳಿಂದ ರಾಜ್ಯ...