ಭಾಗ್ಯಗಳನ್ನು ಕೊಟ್ಟಿರುವ ಮುಖ್ಯಮಂತ್ರಿಗಳು ಬಡವರಿಗೆ ಭೂಮಿಯ ಹಕ್ಕನ್ನು ನೀಡಲಿ: ಮಧು ಬಂಗಾರಪ್ಪ

Date:

ಹಲವಾರು ಭಾಗ್ಯಗಳನ್ನು ಕೊಟ್ಟಿರುವ ಮುಖ್ಯಮಂತ್ರಿಗಳು ಬಡವರಿಗೆ ಭೂಮಿಯ ಹಕ್ಕನ್ನೂ ನೀಡಬೇಕೆಂದು ಭರವಸೆಯನ್ನು ನೀಡಲಿ ಎಂದು ಪ್ರಾಥಮಿಕ ಹಾಗೂ ಮಾಧ್ಯಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

- Advertisement -

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಆರ್ಯ ಈಡಿಗ ಸಮಾವೇಶದಲ್ಲಿ ಮಾತನಾಡಿದ ಅವರು, “ನಮ್ಮ ಸಮುದಾಯದವರಿಗೆ ಭೂ ಹಕ್ಕನ್ನು ನೀಡಬೇಕೆಂದು ಏಳೆಂಟು ಹೋರಾಟ ಮಾಡಿದ್ದೇವೆ. ದೇವರಾಜ ಅರಸು ನಂತರದಲ್ಲಿ ಮುಖ್ಯಮಂತ್ರಿಯಾಗಿದ್ದ ಬಂಗಾರಪ್ಪನವರು ಬಡವರಿಗೆ ಭೂಮಿ ಕೊಟ್ಟರು. ಹಲವಾರು ಭಾಗ್ಯಗಳನ್ನು ಕೊಟ್ಟಿರುವ ಮುಖ್ಯಮಂತ್ರಿಗಳು ನಮ್ಮ ಸಮುದಾಯದ ಬಡವರಿಗೆ ಬಗುರ್ ಹುಕುಂ ನೀಡಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

“ಶರಾವತಿ ಯೋಜನೆಯಿಂದ ಸಂತ್ರಸ್ತರಾಗಿ ಭೂಮಿಯನ್ನು ಕೊಟ್ಟವರು ಇಂದು ಕತ್ತಲಲ್ಲಿದ್ದಾರೆ. ರಾಜ್ಯಕ್ಕೆ ಬೆಳಕು ಕೊಟ್ಟು ಕತ್ತಲಲ್ಲಿ ಇರುವವರು ಇದ್ದಾರೆ. ಈ ಸಮುದಾಯಕ್ಕೆ ಹಕ್ಕುಪತ್ರವನ್ನು ನೀಡುವ ಕೆಲಸ ಮಾಡಬೇಕೆಂದು ಕೋರುತ್ತೇನೆ” ಎಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.

“ನಾವೆಲ್ಲ ಹೆಂಡವನ್ನು ಮಾರಿಕೊಂಡು ಬಂದ ಕುಟುಂಬದವರು. ಕುಲಕಸುಬವನ್ನು ನಂಬಿಕೊಂಡಿರುವುದರಿಂದ ಈಗ ಸಮುದಾಯದ ಅನೇಕರು ಬೀದಿಪಾಲಾಗಿದ್ದಾರೆ. ನಮ್ಮ ಸಮುದಾಯವನ್ನು ಮೇಲೆತ್ತುವ ಭರವಸೆಯನ್ನು ಸರ್ಕಾರ ನೀಡಬೇಕು. ಕಲ್ಯಾಣ ಕರ್ನಾಟಕದಲ್ಲಿ  ಕುಲಕಸುಬನ್ನೇ ನಂಬಿಕೊಂಡಿದ್ದವರು ಬಡವರಾಗಿ ಕೂಲಿಕಾರರಾಗಿಯೇ ಇದ್ದಾರೆ. ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಮೇಲುತ್ತುವ ಕೆಲಸ ಆಗಬೇಕಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ತೆಲಂಗಾಣ | ಅಂದು ಗನ್ ಹಿಡಿದಿದ್ದ ನಕ್ಸಲೈಟ್, ಇಂದು ಕ್ಯಾಬಿನೆಟ್ ಮಿನಿಸ್ಟರ್; ಸೀತಕ್ಕನ ರೋಚಕ ಪಯಣ

ಬಂಗಾರಪ್ಪನವರನ್ನು ನಿಮ್ಮಲ್ಲಿ ಕಾಣುತ್ತಿದ್ದೇನೆ

“ಒಬ್ಬರು ಬಂಗಾರಪ್ಪನವರನ್ನು ಕಳೆದುಕೊಂಡಿದ್ದಾರೆ. ಆದರೆ ಲಕ್ಷಾಂತರ ಬಂಗಾರಪ್ಪನವರು ನಮ್ಮಲ್ಲಿ ಇದ್ದಾರೆ. ನಿಮ್ಮಲ್ಲಿ ನಾನು ಬಂಗಾರಪ್ಪನವರನ್ನು ಕಾಣುತ್ತಿದ್ದೇನೆ. ನಿಮ್ಮಿಂದ ಬಡವರ ಪರ ಕಳಕಳಿ, ಚಿಂತನೆ ನೋಡುತ್ತಿದ್ದೇನೆ. ಬಂಗಾರಪ್ಪನವರ ಸ್ಥಾನದಲ್ಲಿ ನಿಮ್ಮನ್ನು ನೋಡುತ್ತಿದ್ದೇನೆ. ಈ ಒಗ್ಗಟ್ಟು ಮುಂದುವರಿಯಬೇಕು. ನಾರಾಯಣ ಗುರುಗಳು ಹೇಳಿಕೊಟ್ಟಿರುವಂತೆ ಸಂಘಟನೆಯಲ್ಲಿ ಶಕ್ತಿವಂತರಾಗಿರಿ”ಎಂದು ಕರೆ ನೀಡಿದರು.

“ನಾರಾಯಣ ಗುರುಗಳ ತತ್ವ ಸಿದ್ಧಾಂತವನ್ನು ಒಪ್ಪಿ ಬಂದಿರುವ 26 ಸಮಾಜದ ಬಂಧು ಮಿತ್ರರು ಬಂದಿದ್ದೀರಿ. ಸಂಘಟನೆಯಿಂದ ಶಕ್ತಿವಂತರಾಗಬಹುದು ಎಂಬುದನ್ನು ತೋರಿಸಿದ್ದೀರಿ. ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತಿಯನ್ನು ಮಾಡಿದವರು ಸಿದ್ದರಾಮಯ್ಯ. ಹಾಗೆಯೇ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠವನ್ನು ಮಾಡಿಕೊಡಬೇಕು. ಪಠ್ಯಪುಸ್ತಕದಲ್ಲಿ ನಾರಾಯಣ ಗುರುಗಳನ್ನು ಸೇರಿಸುವಂತೆ ಕೇಳಿದ್ದೆ, ಅದನ್ನು ಸಿಎಂ ನೆರವೇರಿಸಿದ್ದಾರೆ” ಎಂದು ಮಧು ಬಂಗಾರಪ್ಪ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರ ಎಲ್ಲರ ಜವಾಬ್ದಾರಿ: ಡಿ.ಕೆ. ಶಿವಕುಮಾರ್

ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಕೇವಲ...

ಉತ್ತರ ಕನ್ನಡ: ಹಾಲಕ್ಕಿಗಳ ಹಾಡು-ಪಾಡು ಮತ್ತು ಮರೀಚಿಕೆಯಾದ ಮೀಸಲಾತಿ

ಹಾಲಕ್ಕಿಗಳಿಗೆ ಪರಿಶಿಷ್ಟ ಪಂಗಡ ಮೀಸಲಾತಿ ಮರೀಚಿಕೆ ಆಗುತ್ತಿದೆ. ಮೀಲಾತಿ ಕೊಡಿಸುವ ಬಣ್ಣ-ಬಣ್ಣದ...

ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದ ವಿವಿಧ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ.  ಇನ್ನೂ...

ಕೆಪಿಎಸ್‌ಸಿ ಪರೀಕ್ಷಾ ಅಕ್ರಮದ ಆರೋಪಿ ಬಸವರಾಜ್ ಕಿನ್ನಾಳೆ RSS ಪಥಸಂಚಲನದ ಫೋಟೊ ವೈರಲ್

ಕೆಪಿಎಸ್‌ಸಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಸಿಐಡಿಯಿಂದ ಬಂಧನಕ್ಕೊಳಗಾಗಿ, ಮಧ್ಯಂತರ ಜಾಮೀನಿನ ಮೇಲೆ...