ಹಿಂದಿನ ವರ್ಷಕ್ಕೆ ಹೋಲಿಸಿದರೆ, ಈ ವರ್ಷ ಕರ್ನಾಟಕದಲ್ಲಿ ಕಾಡ್ಗಿಚ್ಚಿನ ಘಟನೆಗಳು ಕಡಿಮೆ

Date:

ಹಿಂದಿನ ವರ್ಷಕ್ಕೆ ಹೋಲಿಸಿದರೆ, ಈ ವರ್ಷ ಕರ್ನಾಟಕದಲ್ಲಿ ಕಾಡ್ಗಿಚ್ಚಿನ ಘಟನೆಗಳು ಕಡಿಮೆಯಾಗಿವೆ. ಈ ಬಾರಿ ಬೇಸಿಗೆಯ ಶಾಖ ಮತ್ತು ತಾಪಮಾನದ ಏರಿಕೆಯಿಂದಾಗಿ ಕಾಡ್ಗಿಚ್ಚಿನ ತೀವ್ರತೆ ಮಾತ್ರ ಕಡಿಮೆಯಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

- Advertisement -

ಕರ್ನಾಟಕ ಅರಣ್ಯ ಇಲಾಖೆಯ ಪ್ರಕಾರ, ಕರ್ನಾಟಕದಲ್ಲಿ 2020 ರಿಂದ 2024ರವರೆಗೆ 20,933 ಕಾಡ್ಗಿಚ್ಚಿನ ಘಟನೆಗಳು ನಡೆದಿರುವುದನ್ನು ಉಪಗ್ರಹಗಳ ಮೂಲಕ ಪತ್ತೆ ಮಾಡಲಾಗಿದೆ. ಇದರಲ್ಲಿ 2023ರಲ್ಲಿ 6,888 ಘಟನೆಗಳು ನಡೆದಿದೆ. ಈ ವರ್ಷ (2024) ಏಪ್ರಿಲ್ ಅಂತ್ಯದವರೆಗೆ 4,245 ಘಟನೆಗಳು ದಾಖಲಾಗಿವೆ. ಅದಾಗ್ಯೂ, ಏಪ್ರಿಲ್ 16ರ ನಂತರದಲ್ಲಿ ಕಾಡ್ಗಿಚ್ಚು ಇಳಿಮುಖವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಏಪ್ರಿಲ್ ಅಂತ್ಯ ಮತ್ತು ಮೇ ಮೊದಲ ವಾರದ ನಡುವೆ ಬೆಳಗಾವಿ, ತುಮಕೂರು, ಬಳ್ಳಾರಿ, ಚಿತ್ರದುರ್ಗ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ 33 ಅಗ್ನಿ ಅವಘಡಗಳು ವರದಿಯಾಗಿವೆ. ”ಕಳೆದ ವರ್ಷಕ್ಕೆ ಹೋಲಿಸಿದರೆ, ಈ ವರ್ಷ ಕಾಡ್ಗಿಚ್ಚು ಕಡಿಮೆಯಾಗಿದೆ. ಆದಾಗ್ಯೂ, ಹೆಚ್ಚಿನ ಪ್ರಕರಣಗಳು ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ ಸಂಭವಿಸಿವೆ” ಎಂದು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕಳೆದ ವರ್ಷ, ಕಾಡುಗಳು ಒಣ ಹುಲ್ಲು ಮತ್ತು ಸುಡುವ ವಸ್ತುಗಳು ಹೆಚ್ಚಾಗಿದ್ದವು. ಅವುಗಳು 2023 ಕಾಡ್ಗಿಚ್ಚಿನಲ್ಲಿ ಸುಟ್ಟುಹೋಗಿವೆ. ಹೀಗಾಗಿಯೇ, ಈ ವರ್ಷ ಕಾಡ್ಗಿಚ್ಚು ಕಡಿಮೆಯಾಗಿದೆ. ಇದನ್ನು ಸೂಕ್ಷ್ಮವಾಗಿ ಪರಿಶೀಲಿಸಿದರೆ, ಪರಿಸರದಲ್ಲಿ ಒಂದು ಪ್ರವೃತ್ತಿ ಮತ್ತು ಚಕ್ರವಿದೆ ಎಂದು ಅವರು ವಿವರಿಸಿದ್ದಾರೆ.

2018–19ರಲ್ಲಿ ಬಂಡೀಪುರ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಕಳೆದ ವರ್ಷ ದೊಡ್ಡ ಕಾಡ್ಗಿಚ್ಚಿನ ಘಟನೆಗಳು ನಡೆದಿವೆ. ಈ ವರ್ಷ, ಕಾಡಿನ ಬೆಂಕಿಯ ಘಟನೆಗಳು ಕಡಿಮೆಯಾಗಿವೆ. ಆದರೆ, ಹೆಚ್ಚಿನ ಬೇಸಿಗೆಯ ಶಾಖ ಮತ್ತು ಉಷ್ಣತೆಯಿಂದಾಗಿ ಶಾಖದ ತೀವ್ರತೆ ಮತ್ತು ಜ್ವಾಲೆಯನ್ನು ನಂದಿಸಲು ತೆಗೆದುಕೊಂಡ ಸಮಯವು ಹೆಚ್ಚಾಗಿದೆ ಎಂದು ಹೇಳಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿಗೆ ಹೆಸರಘಟ್ಟ ಕೆರೆ ನೀರು ಸರಬರಾಜು ನಿರ್ಧಾರ ಮರುಪರಿಶೀಲನೆ: ಜಲಮಂಡಳಿ ಅಧ್ಯಕ್ಷ

ಕಾಡ್ಗಿಚ್ಚನ್ನು ತಡೆಯಲು ಈ ವರ್ಷ  ಗಸ್ತು ತಿರುಗುವಿಕೆಯನ್ನು ತೀವ್ರಗೊಳಿಸಲಾಗಿತ್ತು. ಹೀಗಾಗಿ, ಘಟನೆಗಳ ಸಂಖ್ಯೆಯು ಅರಣ್ಯ ಪ್ರದೇಶಗಳ ಒಳಗೆ ಕಡಿಮೆಯಾಗಿದೆ. ಆದರೆ, ಅರಣ್ಯದ ಗಡಿ ಮತ್ತು ಹೊರಗೆ ಹೆಚ್ಚಾಗಿದೆ” ಎಂದು ಅಧಿಕಾರಿಯೊಬ್ಬರು ಹೇಳಿದರು.

“ರಾಜ್ಯದಾದ್ಯಂತ ಹಲವು ಕಾಡ್ಗಿಚ್ಚು ಘಟನೆಗಳು ನಡೆದಿವೆ. ಬೆಂಕಿಯನ್ನು ನಂದಿಸಲು ಮತ್ತು ಪರಿಸ್ಥಿತಿಯನ್ನು ಹತೋಟಿಗೆ ತರಲು ದಿನಗಳನ್ನು ತೆಗೆದುಕೊಂಡಿತು. ಪ್ರತಿ ಬೆಂಕಿಯ ವಿವರವಾದ ವರದಿಯೊಂದಿಗೆ ಇಲಾಖೆಯು ಡೇಟಾವನ್ನು ಸಾರ್ವಜನಿಕಗೊಳಿಸಬೇಕು. ಸಂಪೂರ್ಣ ಮೂರನೇ ವ್ಯಕ್ತಿಯ ತನಿಖೆಯ ಅಗತ್ಯವಿದೆ, ”ಎಂದು ಸಂರಕ್ಷಣಾವಾದಿ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ ಮತ್ತು ಮೇಕೆ

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...