ಎಚ್‌ ಡಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ

Date:

  • ಸಾಮಾಜಿಕ ಹೋರಾಟಗಾರ ಸಿ ಎಸ್ ​ಸಿದ್ದರಾಜು ಅವರಿಂದ ದೂರು
  • ಚುನಾವಣಾ ವೇಳೆ ಆಸ್ತಿ ಕುರಿತು ಅಪೂರ್ಣ ಮಾಹಿತಿಯ ಆರೋಪ

ಚುನಾವಣಾ ಸಂದರ್ಭದಲ್ಲಿ ಆಸ್ತಿ ಕುರಿತು ಪೂರ್ಣ ಮಾಹಿತಿ ನೀಡದ ಆರೋಪದ ಮೇಲೆ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ವಿರುದ್ಧ ಸಾಮಾಜಿಕ ಹೋರಾಟಗಾರ ಸಿ ಎಸ್ ​ಸಿದ್ದರಾಜು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

“2004ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕೇತನಗಾನಹಳ್ಳಿಯಲ್ಲಿ 24 ಎಕರೆ ಜಮೀನಿರುವ ಬಗ್ಗೆ ಉಲ್ಲೇಖಿಸಿದ್ದಾರೆ. ವಿವಿಧ ಸರ್ವೇ ನಂಬರ್ ಗಳಲ್ಲಿ 1, 2, 3, 4 ಎಕರೆ ಜಮೀನು ಖರೀದಿ ಮಾಡಿರುವುದಾಗಿ ಹೇಳಿದ್ದಾರೆ. ಹಾಗೆ ತನ್ನ ಚಿಕ್ಕಮ್ಮ ಸಾವಿತ್ರಮ್ಮರಿಂದ ದಾನ ಪಡೆದಿರುವುದಾಗಿಯೂ ಹೇಳಿದ್ದಾರೆ. ಸಾವಿತ್ರಮ್ಮನವರಿಗೆ ಕುಮಾರಸ್ವಾಮಿ ಬೇನಾಮಿಯಾಗಿದ್ದಾರಾ? ಅಥವಾ ತಾಯಿಯ ಸಹೋದರಿಯ ಆದಾಯದ ಮೂಲ ಯಾವುದು?” ಎಂದು ಪ್ರಶ್ನಿಸಿದ್ದಾರೆ.

2008 ಹಾಗೂ 2018ರ ಚುನಾವಣೆಯ ಅಫಿಡವಿಟ್ ನಲ್ಲಿ ಬೆಂಗಳೂರಿನ ಜೆಪಿ ನಗರದ ಮನೆಯನ್ನ ಖರೀದಿ ಮಾಡಿದ್ದಾಗಿ ಉಲ್ಲೇಖಿಸಿದ್ದಾರೆ. 2023ರ ಚುನಾವಣೆಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಅದೇ ಮನೆಯನ್ನ 1995ರಲ್ಲಿ ಖರೀದಿಸಿರುವ ಬಗ್ಗೆ ಮಾಹಿತಿ ಇದೆ. ಪೂರ್ಣ ಪ್ರಮಾಣದ ಮಾಹಿತಿ ನೀಡದೇ ವಂಚಿಸಿದ್ದಾರೆ ಎಂದು ಸಿ ಎಸ್ ಸಿದ್ಧರಾಜು ಅವರು ಆರೋಪಿಸಿ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸಿನ ಚಳಿ ಬಿಡಿಸಲಿದೆಯೇ ಬಿಜೆಪಿ?

“ಅನಿತಾ ಕುಮಾರಸ್ವಾಮಿಯವರು ಕುಪೇಂದ್ರ ರೆಡ್ಡಿಯವರಿಂದ 9 ಕೋಟಿ 50 ಲಕ್ಷ ಸಾಲಪಡೆದಿರುವುದಾಗಿ ಹೇಳಿದ್ದಾರೆ. ಆದರೆ, 2022 ರಲ್ಲಿ ಕುಪೇಂದ್ರರೆಡ್ಡಿಯವರು ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಿದ್ದಾಗ ಚೆನ್ನಾಂಬಿಕ ಫಿಲ್ಮ್ ಸಂಸ್ಥೆಗೆ 4 ಕೋಟಿ ಕೊಟ್ಟಿರುವುದಾಗಿ ಮಾಹಿತಿ ನೀಡಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಸರ್ಕಾರ ಒಪ್ಪದೆ ಜಾತಿಗಣತಿ ವರದಿಯ ಮಾಹಿತಿ ಬಹಿರಂಗ ಪಡಿಸಲು ಸಾಧ್ಯವಿಲ್ಲ: ಜಯಪ್ರಕಾಶ್ ಹೆಗ್ಡೆ

"ರಾಜ್ಯದ 5.98 ಕೋಟಿ ಜನಸಂಖ್ಯೆಯನ್ನು ಸಮೀಕ್ಷೆ ಮಾಡಿದ ಸಾಮಾಜಿಕ ಶೈಕ್ಷಣಿಕ ಜನಗಣತಿ...

ಅಲ್ಪಸಂಖ್ಯಾತರ ಮೇಲೆ ಆರೋಪ ಬಂದರೆ ಪ್ರಕರಣ ಮುಚ್ಚಿಹಾಕಲು ಸರ್ಕಾರದಿಂದ ನಿರ್ದೇಶನ: ಆರ್‌ ಅಶೋಕ್‌ ಆರೋಪ

ಅಲ್ಪಸಂಖ್ಯಾತರ ಮೇಲೆ ಆರೋಪ ಬಂದರೆ ಅದನ್ನು ಮುಚ್ಚಿಹಾಕಿ, ಬಹು ಸಂಖ್ಯಾತರ ಮೇಲೆ...

ದೇವರು-ಧರ್ಮದ ಹೆಸರಲ್ಲಿ ಮರುಳು ಮಾಡಿ ನಾವು ಅಧಿಕಾರ ನಡೆಸಲ್ಲ: ಸಿದ್ದರಾಮಯ್ಯ

ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ...

ಲಾಲೂ ಪ್ರಸಾದ್ ಟೀಕೆಯನ್ನೇ ಅಸ್ತ್ರವನ್ನಾಗಿಸಿಕೊಂಡ ಬಿಜೆಪಿ: ‘ಮೋದಿ ಕಾ ಪರಿವಾರ್’ ಅಭಿಯಾನ!

ನಿನ್ನೆ ಪಾಟ್ನಾದಲ್ಲಿ ನಡೆದಿದ್ದ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ರಾಷ್ಟ್ರೀಯ ಜನತಾ ದಳ...