ಗ್ಯಾರಂಟಿ ಹೆಸರಲ್ಲಿ ಬ್ಲ್ಯಾಕ್‌ಮೇಲ್‌ ಮಾಡುತ್ತಿರುವ ಕಾಂಗ್ರೆಸ್:‌ ವಿಜಯೇಂದ್ರ ಕಿಡಿ

Date:

”ಹೊಸ ಸರ್ಕಾರ ಬಂದು ಎಂಟು ತಿಂಗಳಾಗಿದೆ. ಒಂದೂ ಹೊಸ ಯೋಜನೆ ಜಾರಿಗೆ ತಂದಿಲ್ಲ. ಈಗ ಗ್ಯಾರಂಟಿ ಹೆಸರಲ್ಲಿ ಅಕ್ಷತೆ ಬೇಕಾ-ಗ್ಯಾರಂಟಿ ಬೇಕಾ ಎಂದು ಕೇಳುವ ಮೂಲಕ ಕಾಂಗ್ರೆಸ್ ಶಾಸಕ ಎಚ್ ಸಿ ಬಾಲಕೃಷ್ಣ ಅವರು ಜನರನ್ನು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದಾರೆ” ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಕಿಡಿಕಾರಿದರು.

- Advertisement -

ಮೂಡಿಗೆರೆಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಶಾಲೆಗೆ ಹೋಗುವ ಮಕ್ಕಳಿಗೆ ಬಸ್ ಇಲ್ಲ, ರೈತರ ಪಂಪ್‌ಸೆಟ್‌ಗೆ ವಿದ್ಯುತ್ ಇಲ್ಲ. ಇವರು ಯಾವ ಗ್ಯಾರಂಟಿ ಬಗ್ಗೆ ಮಾತನಾಡುತ್ತಿದ್ದಾರೆ. ಈ ರೀತಿ ಬ್ಲಾಕ್‌ಮೇಲ್‌ ಮಾಡುವ ಕಾಂಗ್ರೆಸ್ ನಾಯಕರಿಗೆ ನಾಚಿಕೆ ಆಗಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

“ಕಾಂಗ್ರೆಸ್‌ ಗ್ಯಾರಂಟಿಯಿಂದ ರಾಜ್ಯದ ಜನ ಬೀದಿಗೆ ಬರುವ ಸ್ಥಿತಿ ಬಂದಿದೆ. ಗ್ಯಾರಂಟಿ ಬಗ್ಗೆ ಜನ ವಿಶ್ವಾಸ ಕಳೆದುಕೊಂಡಿದ್ದಾರೆ. ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನವೇ ಕಾಂಗ್ರೆಸ್ ತನ್ನ ಸೋಲು ಒಪ್ಪಿಕೊಂಡಿದೆ” ಎಂದು ಟೀಕಿಸಿದರು.

“ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿ ಕಾಂಗ್ರೆಸ್ ನಾಯಕರು ಇದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ 28 ಸ್ಥಾನ ಗೆಲ್ಲುವುದರಲ್ಲಿ ಯಾವ ಅನುಮಾನವೂ ಇಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶೂದ್ರ ಸ್ವಾಮಿ ಕೇಸರಿ ಸ್ವಾಮಿಯಾಗುವುದು ತಪ್ಪೇ?

“ಮೂರು ರಾಜ್ಯದಲ್ಲಿ ಬಿಜೆಪಿ ಗೆಲುವು ಕಂಡಿದೆ. ರಾಮ ಮಂದಿರ ಪುನರ್ ಪ್ರತಿಷ್ಠಾಪನೆ ಬಳಿಕ ದೇಶದ ವಾತಾವರಣ ಬದಲಾಗಿದೆ‌. ಇದರಿಂದ ಕಾಂಗ್ರೆಸ್ ನಾಯಕರು ಭಯಭೀತರಾಗಿ ಇಂತಹ ಹೇಳಿಕೆ ನೀಡುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

“ರಾಜ್ಯ-ದೇಶದಲ್ಲಿ ಹನುಮ ಧ್ವಜಕ್ಕೆ ಕಾಂಗ್ರೆಸ್ ವಿರೋಧಿಸುವುದು ನಾಚಿಕೆಗೇಡು. ಪ್ರತಿಯೊಬ್ಬರು ರಾಮ ಭಕ್ತನು ದುಷ್ಟ ರಾಜ್ಯ ಸರ್ಕಾರದ ನಡವಳಿಕೆ ಗಮನಿಸುತ್ತಿದ್ದಾರೆ. ಈ ವಿಷಯದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ದ್ವಂದ್ವದಲ್ಲಿದ್ದು, ಯಾವುದೇ ತೀರ್ಮಾನ ಮಾಡಲಾಗುತ್ತಿಲ್ಲ. ಕಾಂಗ್ರೆಸ್ ಮೊದಲು ದೇಶ ಹಾಗೂ ರಾಜ್ಯದ ಜನರ ಕ್ಷಮೆ ಕೇಳಬೇಕು” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...