”ಬೆಂಗಳೂರು ನಗರದ ಹೃದಯ ಭಾಗದಲ್ಲಿರುವ ಬೆಲೆಬಾಳುವ ಪಶುಸಂಗೋಪನೆ ಇಲಾಖೆಯ ಎರಡು ಎಕರೆ ಜಾಗವನ್ನು ಮುಸ್ಲಿಮರಿಗೆ ನೀಡುವ ಹುನ್ನಾರ ಮಾಡುತ್ತಿದ್ದೀರಲ್ಲ ಸಿಎಂ ಸಿದ್ದರಾಮಯ್ಯನವರೇ, ಮುಸ್ಲಿಮರ ಓಲೈಕೆಗೆ ಒಂದು ಇತಿ ಮಿತಿ ಬೇಡವೇ” ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್ ಅಶೋಕ್ ಪ್ರಶ್ನಿಸಿದ್ದಾರೆ.
ಸರ್ಕಾರದ ನಡಾವಳಿ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, “ದನ ಕರುಗಳಿಗೆ ಚಿಕಿತ್ಸೆ ನೀಡುವ ಸರ್ಕಾರಿ ಪಶು ಚಿಕಿತ್ಸಾಲಯವನ್ನು ಮುಚ್ಚಿಸಿ ಅದನ್ನ ಮುಸ್ಲಿಂರಿಗೆ ಕೊಡುವ ಅನಿವಾರ್ಯತೆ ಆದರೂ ಏನಿತ್ತು? ಜಾನುವಾರುಗಳಿಗೆ ಮಾತ್ರ ಆ ಚಿಕಿತ್ಸಾಲಯ ಸ್ಥಾಪಿಸಿಲ್ಲ. ಇತರೆ ಸಾಕು ಪ್ರಾಣಿಗಳ ಚಿಕಿತ್ಸೆಗೂ ಸ್ಥಾಪಿಸಲಾಗಿತ್ತು” ಎಂದಿದ್ದಾರೆ.
“ನಗರದ ಹೃದಯಭಾಗದಲ್ಲಿರುವ ಐನೂರು ಕೋಟಿಗೂ ಹೆಚ್ಚು ಬೆಲೆ ಬಾಳುವ ಜಾಗವನ್ನು ಹಸ್ತಾಂತರ ಮಾಡಲು ನಾವು ಬಿಡುವುದಿಲ್ಲ. ಕಾಂಗ್ರೆಸ್ ಸರ್ಕಾರದ ಈ ಕ್ರಮವನ್ನು ಕಾಂಗ್ರೆಸ್ ಸರ್ಕಾರದ ಲ್ಯಾಂಡ್ ಜಿಹಾದ್ ಎಂದು ಕರೆಯಬಹುದೇ?” ಎಂದು ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಲ್ಯಾಂಡ್ ಜಿಹಾದ್
ಬೆಂಗಳೂರು ನಗರದ ಹೃದಯ ಭಾಗದಲ್ಲಿರುವ ಬೆಲೆಬಾಳುವ ಪಶುಸಂಗೋಪನೆ ಇಲಾಖೆಯ ಎರಡು ಎಕರೆ ಜಾಗವನ್ನು ಮುಸ್ಲಿಮರಿಗೆ ನೀಡುವ ಹುನ್ನಾರ ಮಾಡುತ್ತಿದ್ದೀರಲ್ಲ ಸಿಎಂ @siddaramaiah ನವರೇ, ಮುಸ್ಲಿಮರ ಓಲೈಕೆಗೆ ಒಂದು ಇತಿ ಮಿತಿ ಬೇಡವೇ?
ದನ ಕರುಗಳಿಗೆ ಚಿಕಿತ್ಸೆ ನೀಡುವ ಸರ್ಕಾರಿ ಪಶು ಚಿಕಿತ್ಸಾಲಯವನ್ನ… pic.twitter.com/r8G4sph0Qa
— R. Ashoka (ಆರ್. ಅಶೋಕ) (@RAshokaBJP) February 29, 2024

ಬಿಬಿಎಂಪಿ ದಾಖಲೆ ರೂಂ ಗೆ ಬೆಂಕಿ ಬಿದ್ದು ಎಲ್ಲಾ ಅವ್ಯವಹಾರಗಳನ್ನು ಸುಟ್ಟು ಹಾಕಿದರೆಂದು ಮಾಧ್ಯಮಗಳಲ್ಲಿ ಬಂದಿತ್ತು,,ಆ ಘಟನೆಯ ಹಿಂದೆ ಯಾರ ಕೈವಾಡವಿತ್ತು ಬಹಿರಂಗವಾಗಿಲ್ಲ ಆಗ ನೀವೇ ಸರ್ಕಾರದಲ್ಲಿ ಇದ್ದವರು,, ಗೊತ್ತಿದ್ದರೆ ಜನರಿಗೆ ಹೇಳಿ ಮಾಜಿಗಳೆ