ಯಾವ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಿದ್ದೇವೆಯೋ ಅದನ್ನು ಕಾಂಗ್ರೆಸ್ ವಿರೋಧಿಸುತ್ತಾ?: ಬೊಮ್ಮಾಯಿ ಸವಾಲು

Date:

  • ಮೀಸಲಾತಿ ಹೆಚ್ಚಳ ಮಾಡಿರುವುದು ಕಾಂಗ್ರೆಸ್‌ ನಾಯಕರಿಗೆ ಸಹಿಸಲಾಗುತ್ತಿಲ್ಲ
  • ಮುಸ್ಲಿಮರಿಗೆ ಅನ್ಯಾಯ ಮಾಡಿಲ್ಲ, ಅವರನ್ನು ಇಡಬ್ಲುಎಸ್‌ಗೆ ಸೇರಿಸಿದ್ದೇವೆ

ನಾವು ಯಾವ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿದ್ದೇವೆಯೋ ಅದನ್ನು ವಿರೋಧಿಸುತ್ತೇವೆ ಎಂದು ಕಾಂಗ್ರೆಸ್‌ ಹೇಳಲಿ ನೋಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲು ಹಾಕಿದರು.

ಸೋಮವಾರ ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, “ಮೀಸಲಾತಿ ಹೆಚ್ಚಳ ಮಾಡಿರುವುದು ಕಾಂಗ್ರೆಸ್ ನವರಿಗೆ ಸಹಿಸಲಿಕ್ಕೆ ಆಗುತ್ತಿಲ್ಲ. ಹೀಗಾಗಿ ಅವರು ವಿರೋಧ ಮಾಡುತ್ತಿದ್ದಾರೆ” ಎಂದರು.

“ಮುಸ್ಲಿಮರಿಗೆ ಯಾವುದೇ ರೀತಿಯ ಅನ್ಯಾಯವಾಗಿಲ್ಲ. ಅವರನ್ನು ಇಡಬ್ಲುಎಸ್ ವರ್ಗದಲ್ಲಿ ಸೇರಿಸಿದ್ದೇವೆ. ಅಲ್ಲಿ ಶೇ.10% ಮೀಸಲಾತಿ ಇದೆ. ನಮ್ಮ ಸಂವಿಧಾನದಲ್ಲಿ ಧಾರ್ಮಿಕ ಆಧಾರದಲ್ಲಿ ಮಿಸಲಾತಿ ಇಲ್ಲ. ಮುಸ್ಲಿಮರಿಗೆ ಯಾವುದೇ ರೀತಿಯ ಅನ್ಯಾಯ ಮಾಡಿಲ್ಲ” ಎಂದು ಹೇಳಿದರು.

ಹಿಂದುಳಿದ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ

“ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಆಗಬೇಕು ಎನ್ನುವ ಅಭಿಲಾಷೆಯಿಂದ ನಮ್ಮ ಪ್ರಧಾನಿಗಳು ನಿಯಮ ಸರಳಿಕರಣಗೊಳಿಸಿದ್ದಾರೆ. ಹಿಂದುಳಿದ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು  ಸ್ಥಾಪಿಸಲಾಗುತ್ತಿದೆ. ಚಿಕ್ಕಬಳ್ಳಾಪುರ, ಹಾವೇರಿ, ಯಾದಗಿರಿ, ಚಿಕ್ಕಮಗಳೂರು ಮೆಡಿಕಲ್ ಕಾಲೇಜು ಅಭಿವೃದ್ಧಿ ಮಾಡಲಾಗಿದೆ. ರಾಮನಗರದಲ್ಲಿಯೂ ವೈದ್ಯಕೀಯ ಕಾಲೇಜು ಆರಂಭಿಸಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ಒಳ ಮೀಸಲಾತಿ ಜಾರಿಗೆ ಬೊಮ್ಮಾಯಿ ಸಚಿವ ಸಂಪುಟ ಸದಸ್ಯರಿಂದಲೇ ವಿರೋಧ

ಶಂಕರ್ ನಾಗ್ ಕನಸು ನನಸು

ನಂದಿಬೆಟ್ಟಕ್ಕೆ ರೋಪ್ ವೇ ಆಗಬೇಕೆಂದು ದಿವಂಗತ ನಟ  ಶಂಕರನಾಗ್ ಅವರು ಕಂಡ ಕನಸು ಈಗ ನನಸಾಗುತ್ತಿದೆ.  ರೋಪ್ ವೇ ಮಾಡಿದರೆ  ಪ್ರವಾಸೋದ್ಯಮಕ್ಕೆ ಸಾಕಷ್ಟು ಅನುಕುಲವಾಗುತ್ತದೆ‌. ಈ ಭಾಗದಲ್ಲಿ ಸಾಕಷ್ಟು  ಪ್ರವಾಸಿ ತಾಣಗಳಿವೆ. ನಂದಿ ಬೆಟ್ಟದ  ಪಕ್ಕದ ದೇವಸ್ಥಾನ ಅಭಿವೃದ್ಧಿ ಆಗುತ್ತದೆ. ಆದ್ದರಿಂದ ಇದೊಂದು ಪ್ರವಾಸಿ ಸರ್ಕಿಟ್ ಆಗಲು ಅನುಕೂಲವಾಗಲಿದೆ” ಎಂದು ತಿಳಿಸಿದರು.

“ನಮ್ಮ ಯೋಜನೆಗಳ ಬಗ್ಗೆ ಜನರಿಗೆ ವಿಶ್ವಾಸ ಮೂಡಿದೆ‌.  ಇದರಿಂದ ನಮ್ಮ‌ಆತ್ಮವಿಶ್ವಾಸ ಹೆಚ್ಚಾಗಿದೆ‌. ಅಮಿತ್ ಶಾ ಅವರ ಸಭೆಯಲ್ಲಿ ಪ್ರಣಾಳಿಕೆಯ ಬಗ್ಗೆ ಚರ್ಚೆ ಮಾಡಿದ್ದೇವೆ. ಆರೋಗ್ಯ ಸಚಿವ ಸುಧಾಕರ್ ಅವರು ಪ್ರಾಣಾಳಿಕೆ  ಸಮಿತಿ  ಅಧ್ಯಕ್ಷರಾಗಿದ್ದಾರೆ. ಈ ಬಾರಿ ನಮ್ಮದು ಜನತಾ ಪ್ರಣಾಳಿಕೆಯಾಗಲಿದೆ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿಗಮ ಮಂಡಳಿ ನೇಮಕಾತಿಯಲ್ಲಿ ಯಾರ ಅಭಿಪ್ರಾಯವನ್ನೂ ಪಡೆದಿಲ್ಲ: ಸಿದ್ದರಾಮಯ್ಯ

ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಕಾನೂನುಬಾಹಿರ ನ್ಯಾಯಾಲಯದ ಮೊರೆ...

‘ಮಹಾಧರಣಿ’ಗೆ ಸಿಎಂ ಸಿದ್ದರಾಮಯ್ಯ ಸ್ಪಂದನೆ: ಡಿ.19ರಂದು ಮಹತ್ವದ ಸಭೆ

ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಕಳೆದ ಮೂರು ದಿನಗಳಿಂದ ಸಂಯುಕ್ತ ಹೋರಾಟ ಸಮಿತಿಯ...

ದೇಶದಲ್ಲಿ ‘ಬ್ರ್ಯಾಂಡ್‌ ಬೆಂಗಳೂರು’ ನಂಬರ್ ಒನ್ ಆಗಿಸಬೇಕಿದೆ: ಸಿದ್ದರಾಮಯ್ಯ

'ದೇಶ ಸುಸ್ಥಿರವಾಗಿ ಬೆಳೆಯಬೇಕಾದರೆ ನಗರ-ಗ್ರಾಮೀಣ ಸುಸ್ಥಿರ ಬೆಳವಣಿಗೆ ಕಾಣಬೇಕು' 'ರಾಜ್ಯದ...

‘ಫ್ರೀಡಂ ಪಾರ್ಕ್’ನಿಂದ ನಮಗೆ ‘ಫ್ರೀಡಂ’ ಕೊಡಿ: ಸಿಎಂ ಸಿದ್ದರಾಮಯ್ಯಗೆ ‘ಮಹಾಧರಣಿ’ ಆಗ್ರಹ

ರಾಜಧಾನಿ ಬೆಂಗಳೂರಿನಲ್ಲಿ ನಡೆಯುವ ಪ್ರತಿಯೊಂದು ಪ್ರತಿಭಟನೆಗಳು ಕೇವಲ 'ಫ್ರೀಡಂ ಪಾರ್ಕ್‌'ಗೆ ಸೀಮಿತವಾಗಿದ್ದು,...