ಕಾಂಗ್ರೆಸ್ ಪ್ರತಿಭಟನೆ ಕಾಣದ ಕೈಗಳ ವಿರುದ್ಧವೇ ಹೊರತು ಕೋರ್ಟ್ ವಿರುದ್ಧ ಅಲ್ಲ: ಗಂಗಾಧರ ದೊಡವಾಡ

Date:

Advertisements

ಎಪ್ಪತ್ತು ವರ್ಷಗಳ ಕಾಲ ಭಾರತವನ್ನು ಆಳಿದ ಕಾಂಗ್ರೆಸ್ ಎಂದೂ ನ್ಯಾಯಾಲಯದ ವಿರುದ್ಧ ಪ್ರತಿಭಟನೆ ಮಾಡಿಲ್ಲ. ನ್ಯಾಯಾಲಯದ ಘನತೆ ಗೌರವ ಹೆಚ್ಚಿಸುವುದಕ್ಕೆ ಕಾಂಗ್ರೆಸ್ ಎಂದೆಂದೂ ಬದ್ಧವಾಗಿದೆ. ಕೇವಲ ಮೋದಿ ಎಂಬ ಉಪನಾಮದ ಕುರಿತು ನಮ್ಮ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿಯವರು ಆಡಿದ ಮಾತುಗಳ ವಿಚಾರವಾಗಿ ಕೋರ್ಟ್‌ನಲ್ಲಿ ತೆರೆಮರೆಯಲ್ಲಿ ನಿಂತು ಅಧಿಕಾರಶಾಹಿ ಶಕ್ತಿಗಳು ಕಾನೂನನ್ನು ತಮ್ಮ ಗಾಳವನ್ನಾಗಿ ಬಳಸಿ ಕೊಳ್ಳುತ್ತಿದ್ದಾರೆಂಬ ಊಹೆ ಭಾರತೀಯರಲ್ಲಿ ಮೂಡುತ್ತಿದೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಗಂಗಾಧರ ದೊಡವಾಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಕಾಂಗ್ರೆಸ್ ಪ್ರತಿಭಟನೆ ಕೋರ್ಟ್ ವಿರುದ್ಧವೇ ಎಂದು ಪ್ರಶ್ನಿಸಿದ್ದಾರೆ. ಆದರೆ ಕಾಂಗ್ರೆಸ್ ಹುಟ್ಟಿದಾಗಿನಿಂದ ಸ್ವಾತಂತ್ರ್ಯಕ್ಕೆ ಮೊದಲು ಸ್ವಾತಂತ್ರ್ಯ ನಂತರ ಅಸಂಬದ್ಧ ಆಡಳಿತದ ವಿರುದ್ಧ ಚಳುವಳಿ ಮುಖಾಂತರ ನಾಡಿನ ಹಿತಕ್ಕಾಗಿ ತಾಯ್ನೆಲದ ಹಿತಕ್ಕಾಗಿ ಹೋರಾಡುತ್ತಾ ಬಂದ ಪಕ್ಷವಾಗಿದೆ. ಮಹಾತ್ಮಾ ಗಾಂಧಿಯವರ ಅಹಿಂಸಾ ಸಿದ್ದಾಂತವೇ ನಮ್ಮ ಪಕ್ಷದ ಮೂಲ ಧ್ಯೇಯವಾಗಿದೆ. ಕಾಂಗ್ರೆಸ್ ನವರು ಅಪ್ರಬುದ್ಧರ ಹಾಗೆ ವರ್ತಿಸುತ್ತಿದ್ದಾರೆ ಎಂಬ ಅವರ ಹೇಳಿಕೆಗೆ ಉತ್ತರವಾಗಿ ಕಳೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನವರು ಪ್ರಬುಧ್ಧರೆಂಬುದಕ್ಕೆ 135 ಶಾಸಕರ ಬಲ ಕೊಟ್ಟಿದ್ದಾರೆ. ಸೋತ ಬಿಜೆಪಿಯವರು  ಅಪ್ರಬುದ್ಧರೆಂಬುದನ್ನು ಮತದಾರರು ತೋರಿಸಿ ಕೊಟ್ಟಿದ್ದಾರೆ” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಧಾರವಾಡ | ಬಜೆಟ್‌ನಲ್ಲಿ ಕೃಷಿ ಕ್ಷೇತ್ರ, ರೈತರ ನಿರ್ಲಕ್ಷ ಖಂಡನೀಯ: ಎಐಕೆಕೆಎಂಎಸ್

Advertisements

“ಆರ್ಥಿಕ ಸಂಕಷ್ಟದಲ್ಲಿರುವ ಜನರಿಗೆ ಕಾಂಗ್ರೆಸ್ ಕೊಟ್ಟ ಗ್ಯಾರಂಟಿಗಳ ಜನಪ್ರಿಯತೆ ಬಿಜೆಪಿಯವರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ‌. ಬಿಜೆಪಿಗೆ ರಾಹುಲ್ ಗಾಂಧಿಯವರ ಅನರ್ಹತೆಯ ಪರಿಣಾಮ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಈ ರಾಷ್ಟ್ರದ ಜನತೆ ಜನತಾ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಹವನಿಸುತ್ತಿದ್ದಾರೆ” ಎಂದು ಪ್ರತಿಕ್ರಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X