ಸಂವಿಧಾನ ಮತ್ತು ಶರಣ ಸಾಹಿತ್ಯ ಎರಡರ ಆಶಯವೂ ಒಂದೇ: ಸಿಎಂ ಸಿದ್ದರಾಮಯ್ಯ

Date:

  • ‘ನಮಗೆ ವಿಶ್ವ ಮಾನವರಾಗಲು ಸಾಧ್ಯವಾಗದಿದ್ದರೂ ಅಲ್ಪ ಮಾನವರು ಮಾತ್ರ ಆಗಬಾರದು’
  • ‘ಅಖಿಲ‌ ಭಾರತ ಶರಣ ಸಾಹಿತ್ಯ ಪರಿಷತ್ತಿಗೆ ಅನುದಾನ ನೀಡುವ ಬಗ್ಗೆ ಸೂಕ್ತ ನಿರ್ಧಾರ’ 

ಸಂವಿಧಾನ ಮತ್ತು ಶರಣ ಸಾಹಿತ್ಯದ ಆಶಯ ಒಂದೇ ಆಗಿದೆ. ಜಾತಿ ತಾರತಮ್ಯ ಇಲ್ಲದ ಸಮಾಜ ನಿರ್ಮಾಣ ಇವೆರಡರ ಗುರಿಯೂ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

- Advertisement -

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ರಣಶ್ರೀ ಪ್ರತಿಷ್ಠಾನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹದಿನೆಂಟನೇ ವರ್ಷದ ರಮಣಶ್ರೀ ಶರಣ ಪ್ರಶಸ್ತಿ ಪ್ರದಾನ ಮಾಡಿ, ಎಸ್.ಷಡಕ್ಷರಿ ಅವರ “ಕ್ಷಣ ಹೊತ್ತು ಅಣಿಮುತ್ತು” ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

“ಸಂವಿಧಾನ ವಿರೋಧಿಗಳು ಶರಣ ಸಾಹಿತ್ಯವನ್ನೂ ಒಪ್ಪುವುದಿಲ್ಲ. ಇಂತಹ ಸಂವಿಧಾನ ವಿರೋಧಿಗಳನ್ನು ನಾವು ದೂರ ಇಡಬೇಕು. ಸಮಾಜದ ಋಣ ನಮ್ಮ ಮೇಲಿದೆ. ಆ ಋಣವನ್ನು ತೀರಿಸುವ ಮೂಲಕ ಬಸವಾದಿ ಶರಣರ ಆಶಯದ ಸಮಾಜ ನಿರ್ಮಾಣ ಮಾಡಬೇಕಾಗಿದೆ. ಶರಣರು ನುಡಿದಂತೆ ನಡೆದವರು. ನಾವೂ ಆ ಮಾರ್ಗದಲ್ಲಿ ನಡೆಯಬೇಕು” ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿ-ಜೆಡಿಎಸ್‌ನವರಿಗೆ ಮಾಡಲು ಏನೂ ಕೆಲಸ ಇಲ್ಲ : ಡಿ ಕೆ ಶಿವಕುಮಾರ್

“ವಚನ ಸಂಸ್ಕೃತಿ ಅಂದರೆ ಮಾನವೀಯ ಸಂಸ್ಕೃತಿ. ಮಾನವೀಯ ಬದಲಾವಣೆಯನ್ನು ಸಮಾಜದಲ್ಲಿ ತರಲು ಬಸವಾದಿ ಶರಣರು ಹೋರಾಟ ಮಾಡಿದರು. ಶೂದ್ರ ಸಮುದಾಯ ಅಕ್ಷರ ಸಂಸ್ಕೃತಿಯಿಂದ ವಂಚಿತರಾದ ಕಾರಣಕ್ಕೆ ಬಡತನ ಮತ್ತು ತಾರತಮ್ಯ ಹೆಚ್ಚಾಯಿತು. ಬಸವಾದಿ ಶರಣರು ಅನುಭವ ಮಂಟಪದ ಮೂಲಕ ಮೇಲು ಕೀಳಿನ, ಜಾತಿ ತಾರತಮ್ಯದ ವ್ಯವಸ್ಥೆಯನ್ನು ಅಳಿಸಿ ಮನುಷ್ಯರಾಗಿ ಬಾಳುವುದೇ ಅತ್ಯುನ್ನತ ಧರ್ಮ ಎಂದು ಸಾರಿದರು. ನಾವು ವಿಶ್ವ ಮಾನವರಾಗದಿದ್ದರೂ ಬೇಡ, ಅಲ್ಪ ಮಾನವರಾಗಬಾರದು” ಎಂದರು.

ಪಹ

ದ್ವೇಷ, ವೈರತ್ವ, ಸೇಡು ಮನುಷ್ಯನ ಗುಣ ಅಲ್ಲ.‌ ಪ್ರಾಣಿಗಳನ್ನು ಪ್ರೀತಿಸುವ ನಾವು ಮನುಷ್ಯರನ್ನು ಜಾತಿ-ಧರ್ಮದ ಕಾರಣಕ್ಕೆ ದ್ವೇಷಿಸುತ್ತೀವಿ. ಇದು ಅತ್ಯಂತ ಅನಾಗರಿಕ ಎಂದು ವಿವರಿಸಿದರು. ಅಖಿಲ‌ ಭಾರತ ಶರಣ ಸಾಹಿತ್ಯ ಪರಿಷತ್ತಿಗೆ ಅನುದಾನ ನೀಡುವ ಬೇಡಿಕೆ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಇದೇ ವೇಳೆ ತಿಳಿಸಿದರು.

 

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ವಿ.ಸೋಮಣ್ಣ, ಸಾಹಿತಿ ಗೊ.ರು.ಚನ್ನಬಸಪ್ಪ, ರಮಣಶ್ರೀ ಪ್ರತಿಷ್ಠಾನದ ಅಧ್ಯಕ್ಷ ಎಸ್.ಷಡಕ್ಷರಿ, ಪತ್ರಕರ್ತರಾದ ವಿಶ್ವೇಶ್ವರ್ ಭಟ್, ರವಿ ಹೆಗಡೆ, ಲೇಖಕಿ ವೀಣಾ ಬನ್ನಂಜೆ, ಮನು ಬಳಿಗಾರ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಕೋರಿದ ಸಿಎಂ ಡಿಕೆ ಶಿವಕುಮಾರ್

ರಾಜ್ಯದ ಕುಡಿಯುವ ನೀರು, ನೀರಾವರಿ ಹಾಗೂ ಬರ ಪರಿಹಾರದ ಅಗತ್ಯಗಳನ್ನು ಈಡೇರಿಸಲು...

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...