ಆನೆ ಹಾವಳಿ ತಡೆಗೆ ರೈಲ್ವೆ ಬ್ಯಾರಿಕೇಡ್ ನಿರ್ಮಾಣ: ಅರಣ್ಯ ಸಚಿವ ಈಶ್ವರ ಖಂಡ್ರೆ

Date:

ರಾಜ್ಯದಲ್ಲಿ ಆನೆ ಮತ್ತು ಮಾನವ ಸಂಘರ್ಷ ತಪ್ಪಿಸಲು 200 ಕೋಟಿ ರೂ. ವೆಚ್ಚದಲ್ಲಿ ಬ್ಯಾರಿಕೇಡ್ ನಿರ್ಮಾಣ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಸೋಮವಾರ ವಿಧಾನ ಪರಿಷತ್‌ನಲ್ಲಿ ತಿಳಿಸಿದರು.

ಸದಸ್ಯ ಕೆ ಹರೀಶ್ ಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, “ಆನೆಗಳು ಜನವಸತಿ ಪ್ರದೇಶಕ್ಕೆ ಬರುವುದನ್ನು ತಡೆಯಲು 640 ಕಿಮೀ ರೈಲ್ವೆ ಬ್ಯಾರಿಕೇಡ್ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದ್ದು, ಈಗಾಗಲೇ 312 ಕಿಮೀ ಬ್ಯಾರಿಕೇಡ್ ಅಳವಡಿಸಲಾಗಿದೆ. ಒಟ್ಟು 200 ಕೋಟಿ ರೂ ವೆಚ್ಚದಲ್ಲಿ ರೈಲ್ವೆ ಬ್ಯಾರಿಕೇಡ್ ಅಳವಡಿಸುವ ಕಾರ್ಯ ನಡೆಯುತ್ತಿದೆ” ಎಂದರು.

“ಆನೆ ಹಾವಳಿಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಶೆ.90 ರಷ್ಟು ಪ್ರಕರಣಗಳಲ್ಲಿ ಪರಿಹಾರ ವಿತರಿಸಲಾಗಿದ್ದು, ಮಾನವ ಜೀವಹಾನಿಗೆ ಹೆಚ್ಚಿನ ಪರಿಹಾರ ನೀಡಲಾಗುವುದು. ರಾಜ್ಯದಲ್ಲಿ ದಟ್ಟ ಅರಣ್ಯ ವ್ಯಾಪ್ತಿಯಲ್ಲಿ ಹೊಂದಿಕೊಂಡಿರುವ ರಾಷ್ಟ್ರೀಯ ಹೆದಾರಿಗಳ ಇಕ್ಕೆಲಗಳಲ್ಲಿ ಕಾಡಾನೆ ಹಾಳಿಯನ್ನು ತಡೆಯುವ ನಿಟ್ಟಿನಲ್ಲಿ ಹದ್ದಾರಿ ಪಕ್ಕದಲ್ಲಿ ಆನೆಗಳ ಇರುವಿಕೆಯ ಬಗ್ಗೆ ಎಚ್ಚರಿಕಾ ಫಲಕಗಳನ್ನು ಅಳವಡಿಸಲಾಗಿದೆ. ಕಾಡಾನೆ ಹಾವಳಿ ಹೆಚ್ಚಳವಾಗಿರುವ ಹಾಸನ, ಕೊಡಗು, ಚಿಕ್ಕಮಗಳೂರು, ಮೈಸೂರು ಮತ್ತು ಕೊಡಗು, ಚಾಮರಾಜನಗರ, ರಾಮನಗರ ಹಾಗೂ ಬೆಂಗಳೂರು ಜಿಲ್ಲೆಗಳಲ್ಲಿ ಪ್ರತಿ ಜಿಲ್ಲೆಗೊಂದರಂತೆ ಅಧಿಕಾರಿ / ಸಿಬ್ಬಂದಿ ಒಳಗೊಂಡ ಆನೆ ಕಾರ್ಯಪಡೆಯನ್ನು ರಚಿಸಲಾಗಿದೆ” ಎಂದು ಮಾಹಿತಿ ನೀಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ವನ್ಯಪ್ರಾಣಿಗಳಿಗಾಗಿ ಅರಣ್ಯ ಪ್ರದೇಶಗಳ ಒಳಗೆ ನೀರಿನ ಲಭ್ಯತೆ ಹೆಚ್ಚಿಸಲು ರಕ್ಷಿತಾರಣ್ಯಗಳಲ್ಲಿ ಕರೆಗಳ ನಿರ್ಮಾಣ ಹಾಗೂ ಪುನಶ್ವೇತನಗೊಳಿಸಿ ವನ್ಯಪ್ರಾಣಿಗಳ ಆವಾಸ ಸ್ಥಾನವನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ. ಇದರಿಂದ ಕಾಡಾನೆ ಹಾಗೂ ಇತರ ವನ್ಯಪ್ರಾಣಿಗಳು ಕಾಡಿನಿಂದ ಹೊರಗೆ ಬಾರದಂತೆ ತಡೆಯಲಾಗುತ್ತಿದೆ” ಎಂದು ಹೇಳಿದರು.

“ಅರಣ್ಯ ಪ್ರದೇಶಗಳಲ್ಲಿ ಹುಲ್ಲುಗಾವಲು ಸಂರಕ್ಷಣೆ ಹಾಗೂ ಅಭಿವೃದ್ಧಿಗೊಳಿಸಬೇಕಾಗಿದೆ. ಹೆಚ್ಚಿನ ಅರಣ್ಯ ಪ್ರದೇಶಗಳಲ್ಲಿ ದಟ್ಟವಾಗಿ ಬೆಳೆದ ಲಂಟಾನ ಮತ್ತು ಯುಪಟೋರಿಯಂ ಕಳೆಗಳಿಂದಾಗಿ ಹುಲ್ಲಿನ ಬೆಳವಣಿಗೆಗೆ ತೀವ್ರ ಅಡಚಣೆಯಾಗಿ ಅರಣ್ಯದಲ್ಲಿ ಹುಲ್ಲಿನ ಲಭ್ಯತೆ ಗಣನೀಯವಾಗಿ ಕಡಿಮೆಯಗಿದೆ. ಅದರಿಂದ ಹುಲ್ಲು ಬೆಳೆಯುವ ಪ್ರದೇಶಗಳಲ್ಲಿ ಬೆಳೆದಿರುವ ಲಂಟಾನ ಮತ್ತು ಯುಪಟೋರಿಯಂ ಕಳೆಗಳನ್ನು ಕಿತ್ತು ಸ್ವಚ್ಛಗೊಳಿಸಿ ಅರಣ್ಯಕ್ಕೆ ಪೂರಕವಾದ ಹುಲ್ಲು ಬೆಳೆಯಲು ಅನುವು ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ” ಎಂದರು.

“ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ತಡೆಗಟ್ಟಲು ಮನೆ ಅರಣ್ಯದಂಚಿನಲ್ಲಿ ಸೌರಶಕ್ತಿ ಬೇಲಿ ನಿರ್ಮಾಣ/ನಿರ್ವಹಣೆ, ಆನೆ ತಡೆ ಕಂದಕ ನಿರ್ಮಾಣ/ನಿರ್ವಹಣೆ ಮಾಡಲಾಗಿದೆ. ಕಾಡಾನೆ ಹಾವಳಿ ತುರ್ತು ನಿರ್ವಹಣೆಗಾಗಿ ಕ್ಷಿಪ ಕಾರ್ಯಪಡೆ ತಂಡಗಳನ್ನು ರಚಿಸಿ ನಿರ್ವಹಿಸಲಾಗುತ್ತಿದೆ. ಕಾಡಾನೆ ಹಿಮ್ಮೆಟ್ಟಿಸುವ ತಂಡಗಳನ್ನು ರಚಿಸಿ ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸುವ ಕಾರ್ಯ ಕೈಗೊಳ್ಳಲಾಗುತ್ತಿದೆ” ಎಂದು ತಿಳಿಸಿದರು.

“ಕಾಡಾನೆಗಳ ಮಾಹಿತಿಯನ್ನು ಸಂಗ್ರಹಿಸಲು 24 ಗಂಟೆ ಕಾರ್ಯನಿರ್ವಹಿಸುವ ಮಾಹಿತಿ ಕೇಂದ್ರ ಸ್ಥಾಪಿಸಲಾಗಿದೆ. ಕಾಡಾನೆ ಗುಂಪಿನಲ್ಲಿದ್ದ ವಯಸ್ಕ ಹೆಣ್ಣಾನೆಯನ್ನು ಗುರುತಿಸಿ ಅದಕ್ಕೆ ರೇಡಿಯೋ ಕಾಲರ್ ಅಳವಡಿಸಿ ಆನೆಗಳ ಚಲನ-ವಲನಗಳ ಬಗ್ಗೆ ಎಸ್.ಎಂ.ಎಸ್ ಹಾಗೂ ವಾಟ್ಸಾಪ್ ಮೂಲಕ ಜನರಿಗೆ ಮಾಹಿತಿ ನೀಡಿ ಮಾನವ ಪ್ರಾಣಹಾನಿ ಹಾಗೂ ಮಾನವ ಗಾಯ ತಪ್ಪಿಸಲು ಕ್ರಮ ವಹಿಸಲಾಗುತ್ತಿದೆ. ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಪುಂಡಾನೆಗಳನ್ನು ಗುರುತಿಸಿ, ಸೆರೆ ಹಿಡಿದು ಆಗ್ಗಿಂದಾಗ್ಗೆ ಸ್ಥಳಾಂತರಿಸಲಾಗುತ್ತಿದೆ. ಕಾಡಾನೆಗಳ ಹಾವಳಿ ಹೆಚ್ಚಾಗಿರುವ ಪ್ರದೇಶದಲ್ಲಿ ಜನ ಸಂಪರ್ಕ ಸಭೆಯನ್ನು ಕರೆದು ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | 65 ಕೆಜಿಗೂ ಅಧಿಕ ಗಾಂಜಾ ವಶ ; ಇಬ್ಬರ ಬಂಧನ

ಐದು ದಿನಗಳ ಕಾಲ ಚಲಿಸುತ್ತಿದ್ದ ರೈಲುಗಳ ಮೇಲೆ ದಾಳಿ ನಡೆಸಿ 65.47ಕೆಜಿ...

ಎಚ್‌ಡಿಕೆ ವಿರುದ್ಧ ನಟ ದರ್ಶನ್ ಮಹಿಳಾ ಅಭಿಮಾನಿ ನಿಂದನೆ; ದೂರು ದಾಖಲು

ಕೊಲೆ ಆರೋಪದಲ್ಲಿ ನಟ ದರ್ಶನ್ ಪೊಲೀಸ್‌ ಕಸ್ಟಡಿಯಲ್ಲಿದ್ದಾರೆ. ಅವರ ಮಹಿಳಾ ಅಭಿಮಾನಿಯೊಬ್ಬರು...

ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ ಆರಂಭಕ್ಕೆ ಸರ್ಕಾರ ಆದೇಶ

ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ ವಾರ್ಷಿಕ ಯೋಜನಾ ಮಂಡಳಿಯಲ್ಲಿ ಅನುಮೋದನೆಗೊಂಡಂತೆ ರಾಜ್ಯದ...