ರಾಜ್ಯಾದ್ಯಂತ ಗುಡುಗು ಸಿಡಿಲಿನ ಜತೆಗೆ ಮುಂದುವರೆದ ಮಳೆ

Date:

Advertisements

ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಬೆಂಗಳೂರಿನಲ್ಲಿಯೂ ಕೂಡ ಭಾರೀ ಮಳೆಯಾಗುತ್ತಿದೆ.

ನಗರದ ಕೆ.ಆರ್.ಮಾರುಕಟ್ಟೆ, ಮೆಜೆಸ್ಟಿಕ್, ರಿಚ್‌ಮಂಡ್​​ ಟೌನ್ ಸೇರಿದಂತೆ ಅನೇಕ ಕಡೆಗಳಲ್ಲಿ ಗುರುವಾರ ತಡರಾತ್ರಿವರೆಗೂ ಸಾಧಾರಣ ಮಳೆಯಾಗಿದೆ. ಶುಕ್ರವಾರ ಬೆಳಿಗ್ಗೆ ಸಮಯವೂ ನಗರದ ಹಲವೆಡೆ ತುಂತುರು ಮಳೆಯಾಗಿದೆ. ರಾಜ್ಯದ ಹಲವೆಡೆ ಗುಡುಗು ಸಿಡಿಲಿನ ಜತೆಗೆ ಮಳೆ ಆರಂಭವಾಗಿದೆ.

ರಾಜ್ಯದಲ್ಲಿಯೂ ಕೂಡ ಮಳೆಯ ಅಬ್ಬರ ಜೋರಾಗಿದ್ದು, ಹಾಸನ ಜಿಲ್ಲೆಯಲ್ಲಿ ಸಿಡಿಲಿನಿಂದ ಮೂವರು ಮೃತಪಟ್ಟಿದ್ದರು. ಬಾಗಲಕೋಟೆಯ ಕುಳಗೇರಿ ಕ್ರಾಸ್‌ನಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಮನೆಯ ವಸ್ತುಗಳೆಲ್ಲ ನೀರಿನಲ್ಲಿ ತೇಲಿ ಹೋಗಿವೆ. ಜನರು ರಾತ್ರಿಯೆಲ್ಲಾ ಜಾಗರಣೆ ಮಾಡಿ ಪರದಾಡಿದ್ದಾರೆ.

Advertisements

ಅಲ್ಲದೇ, ಯಲ್ಲಮ್ಮ ದೇವಿಯ ಗುಡ್ಡದಲ್ಲಿ ಗುಡುಗು, ಮಿಂಚು ಸಮೇತ ಜೋರು ಮಳೆಯ ಆಗಮನವಾಗಿದೆ. ಇದರಿಂದ ದೇವಸ್ಥಾನದ ಒಳಕ್ಕೆ ಮಳೆ ನೀರು ಜಲಪಾತದ ನೀರಿನಂತೆ ಭೋರ್ಗರೆದಿದೆ. ದೇವಸ್ಥಾನ ತಗ್ಗು ಪ್ರದೇಶದಲ್ಲಿ ಇರುವುದರಿಂದ ಗುಡ್ಡದ ಮೇಲೆ ಬಿದ್ದ ಮಳೆ ನೀರು ಸರಾಗವಾಗಿ ದೇವಸ್ಥಾನಕ್ಕೆ ನುಗ್ಗಿತು. ಇದರಿಂದ ದೇವಾಲಯ ನೀರಿನಿಂದ ಸಂಪೂರ್ಣ ಜಲಾವೃತವಾಗಿತ್ತು. ದೇವಸ್ಥಾನಕ್ಕೆ ಏಕಾಏಕಿ ಮಳೆನೀರು ನುಗ್ಗಿದ ಕಾರಣ ಭಕ್ತಾದಿಗಳು ಪರದಾಡುವಂತಾಯಿತು. ಅಲ್ಲದೇ, ರಾಮದುರ್ಗದ ಮಾಗನೂರಿನಲ್ಲಿ ಮಳೆಯಿಂದಾಗಿ ಹಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಈ ಸುದ್ದಿ ಓದಿದ್ದೀರಾ? ಸಂತ್ರಸ್ತೆ ಅಪಹರಣ ಪ್ರಕರಣ | ಭವಾನಿ ರೇವಣ್ಣ‌ಗೆ ನಿರೀಕ್ಷಣಾ ಜಾಮೀನು ಮಂಜೂರು

ಕೋಲಾರದ ಮಾಲೂರು ತಾಲೂಕಿನ ಹುಣಸಿನ ಕೋಟೆಯಲ್ಲಿ ಮನೆಗಳಿಗೆ ಚರಂಡಿ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಮತ್ತೊಂದೆಡೆ, ಶ್ರೀನಿವಾಸಪುರ‌ ತಾಲೂಕಿನಲ್ಲಿ ರೈಲ್ವೆ ಅಂಡರ್ ಪಾಸ್ ಜಲಾವೃತಗೊಂಡಿದ್ದು ಸಂಚಾರ ಅಸ್ತವ್ಯಸ್ತವಾಗಿತ್ತು. ಚಾಮರಾಜನಗರದ ಅಂಡಿಪಾಳ್ಯ ಬಳಿ ಜಡೆತಡಿ ಹಳ್ಳ ಉಕ್ಕಿ ಹರಿದಿದೆ. ಇದರಿಂದಾಗಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಬೆಂಗಳೂರಿನಲ್ಲಿ ಗುರುವಾರ ರಾತ್ರಿಯೂ ಕೂಡ ಮಳೆಯಾಗಿದೆ. ಜೂನ್ 7ರಂದು ಬೆಳಗ್ಗೆ ಕೂಡ ಜಿಟಿ ಜಿಟಿ ಮಳೆ ಇದೆ. ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ, ತುಮಕೂರು ಸೇರಿದಂತೆ ಹಲವೆಡೆ ಇಂದು ಭಾರೀ ಮಳೆಯಾಗುವ ನಿರೀಕ್ಷೆ ಇದ್ದು ‘ಯೆಲ್ಲೋ ಅಲರ್ಟ್’​ ಘೋಷಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X