ಬೆಂಗಳೂರು | ನಾಯಂಡಹಳ್ಳಿ ಫ್ಲೈಓವರ್‌ನಿಂದ ಜಿಗಿದು ಕೆಪಿಟಿಸಿಎಲ್‌ ಗುತ್ತಿಗೆ ನೌಕರ ಆತ್ಮಹತ್ಯೆ

Date:

ರಾಜ್ಯ ರಾಜಧಾನಿ ಬೆಂಗಳೂರಿನ ನಾಯಂಡಹಳ್ಳಿ ಮೇಲ್ಸೇತುವೆಯಿಂದ ಜಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಏಪ್ರಿಲ್ 12ರಂದು ನೆಡೆದಿದೆ.

- Advertisement -

ನವೀನ್ (30) ಮೃತ ದುರ್ದೈವಿ. ಇವರು ಜ್ಞಾನಭಾರತಿ ನಿವಾಸಿಯಾಗಿದ್ದು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್‌)ನಲ್ಲಿ ಗುತ್ತಿಗೆ ನೌಕರನಾಗಿ ಕೆಲಸ‌ ಮಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಏ.12ರಂದು ಬೆಳಿಗ್ಗೆ 8:20ರ ಸುಮಾರಿಗೆ ನವೀನ್ ಮೇಲ್ಸೇತುವೆ​ ಮೇಲೆ ಬೈಕ್​ ಪಾರ್ಕ್​ ಮಾಡಿದ್ದಾರೆ. ಬಳಿಕ, ಏಕಾಏಕಿ ಮೇಲ್ಸೆತುವೆ ಮೇಲಿನಿಂದ ಜಿಗಿದಿದ್ದಾರೆ. ಮೃತ ನವೀನ್​ ನಾಲ್ಕು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದರು ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಪಶ್ಚಿಮ ಬಂಗಾಳದಲ್ಲಿ ಇಬ್ಬರು ಶಂಕಿತರ ಬಂಧನ

ಘಟನಾ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಟರಾಯನಪುರ ಸಂಚಾರ ಪೊಲೀಸರು ಕೂಡಲೇ ನವೀನ್​ ಬಳಿ ಧಾವಿಸಿದ್ದಾರೆ. ಇನ್ನು ಸ್ಥಳಕ್ಕೆ ಬ್ಯಾಟರಾಯನಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಏ.12ರಂದು ಬೆಳಗ್ಗೆ ಡ್ಯೂಟಿಗೆ ಹೋಗುತ್ತೇನೆ ಎಂದು ಮನೆಯಿಂದ ಹೊರಟಿದ್ದ ನವೀನ್‌ ನಾಯಂಡಹಳ್ಳಿ ಫ್ಲೈಓವರ್‌ ಮೇಲಿಂದ ಕೆಳಗೆ ಜಿಗಿದಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ…

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...

ಹವಾಮಾನ ವೈಪರೀತ್ಯ: ಮುನ್ನೆಚ್ಚರಿಕೆ ವಹಿಸಿ-ಸಚಿವ ಪಿ.ಎಂ. ನರೇಂದ್ರಸ್ವಾಮಿ

ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಜನರು...

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...