ಮುಂಗಾರು ಮಳೆ ನಿರ್ವಹಣೆಗೆ ಸಜ್ಜಾಗುತ್ತಿರುವ ಪಾಲಿಕೆ; ಚರಂಡಿ ಸ್ವಚ್ಛತಾ ಕಾರ್ಯದಲ್ಲಿ ನಿರತ

Date:

ಇನ್ನೇನು ಬೇಸಿಗೆ ಕಳೆದು ಮಳೆಗಾಲ ಹತ್ತಿರ ಬರುತ್ತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮುಂಗಾರು ಮಳೆಗೆ ಸಜ್ಜಾಗುತ್ತಿದ್ದು, ಮೇ 30ರೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

- Advertisement -

ಪಾಲಿಕೆಯ ಮುಂಗಾರು ಪೂರ್ವ ಸಿದ್ಧತೆ ಕುರಿತು ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, “ಮಳೆಗಾಲ ಮುಗಿಯುವವರೆಗೆ ಪ್ರತಿ ತಿಂಗಳ ಮೂರು ವಾರಕ್ಕೊಮ್ಮೆ ಚರಂಡಿಗಳನ್ನು ಸ್ವಚ್ಛಗೊಳಿಸುವಂತೆ ಎಸ್‌ಡಬ್ಲ್ಯೂಡಿ ವಿಭಾಗದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮುಂದಿನ ಕೆಲ ದಿನಗಳಲ್ಲಿ ಮುಂಗಾರು ಪೂರ್ವ ಮಳೆ ಸುರಿಯಲಿದೆ. ಈ ಮಳೆಯಿಂದಾಗಿ ನಗರದಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗುವುದನ್ನು ತಪ್ಪಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಮುಖವಾಗಿ ಚರಂಡಿ, ರಾಜಕಾಲುವೆಗಳಲ್ಲಿ ಶೇಖರಣೆಯಾಗಿರುವ ತ್ಯಾಜ್ಯ, ಹೂಳನ್ನು ತೆಗೆಯಲಾಗುತ್ತಿದೆ. ಅದಕ್ಕಾಗಿ ವಲಯ ಅಧಿಕಾರಿಗಳಿಗೆ ಮೇ 10ರೊಳಗೆ ಚರಂಡಿ, ರಾಜಕಾಲುವೆ ಸ್ವಚ್ಛಗೊಳಿಸುವಂತೆ ಸೂಚಿಸಲಾಗಿದೆ” ಎಂದು ಹೇಳಿದ್ದಾರೆ.

“ಮನೆ ನಿರ್ಮಾಣಕ್ಕಾಗಿ ರಸ್ತೆಬದಿಯಲ್ಲಿ ಬಿಸಾಡಿರುವ ಅವಶೇಷಗಳು ಮತ್ತು ಇತರ ವಸ್ತುಗಳನ್ನು ತ್ವರಿತವಾಗಿ ನಾಗರಿಕರು ಸ್ವಚ್ಛಗೊಳಿಸಬೇಕು. ಇಲ್ಲದಿದ್ದರೇ, ಇದು ನೀರಿನ ಹರಿವಿಗೆ ತೊಂದರೆ ಉಂಟು ಮಾಡುತ್ತದೆ. ಅಲ್ಲದೇ, ರಸ್ತೆ ಬದಿ ಶೇಖರಣೆಯಾಗಿರುವ ತ್ಯಾಜ್ಯ ಮತ್ತು ಕಟ್ಟಡ ತ್ಯಾಜ್ಯವನ್ನು ಕೂಡಲೇ ತೆರವು ಮಾಡುವಂತೆಯೂ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ. ಜತೆಗೆ ರಸ್ತೆ ಬದಿ ಕಟ್ಟಡ ತ್ಯಾಜ್ಯ ಸುರಿಯುವವರನ್ನು ಪತ್ತೆ ಮಾಡಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆಯೂ ಹೇಳಲಾಗಿದೆ” ಎಂದು ಹೇಳಿದ್ದಾರೆ.

“ವಲಯ ಆಯುಕ್ತರು, ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆ, ಬಿಬಿಎಂಪಿ ಅರಣ್ಯ ಕೋಶ, ಬಿಡಬ್ಲ್ಯೂಎಸ್‌ಎಸ್‌ಬಿ ಹಾಗೂ ಬೆಸ್ಕಾಂ ಅಧಿಕಾರಿಗಳು ಸಭೆ ನಡೆಸಿ, ಮಳೆಗಾಲದಲ್ಲಿ ದೂರುಗಳನ್ನು ಪರಿಹರಿಸಲು 63 ಉಪವಿಭಾಗಗಳಲ್ಲಿ ವಾಟ್ಸಾಆಪ್ ಗ್ರೌಂಡ್ ರಚಿಸಲಾಗಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆಸ್ಕಾಂ ಅಧಿಕಾರಿಗಳಿಗೆ ಬೆದರಿಕೆ : ದೂರು ದಾಖಲು

“ನಾವು ಎಲ್ಲ ಇಲಾಖೆಗಳೊಂದಿಗೆ ಸಮನ್ವಯದಿಂದ ಕೆಲಸ ಮಾಡುತ್ತಿದ್ದೇವೆ. ಪ್ರತಿ ಮೂರು ತಿಂಗಳಿಗೊಮ್ಮೆ ಎಸ್‌ಡಬ್ಲೂಡಿಯ 859 ಕಿಮೀ ಉದ್ದದ ಮಳೆನೀರಿನ ಚರಂಡಿಗಳ ಸ್ವಚ್ಛ ಮಾಡಲಾಗುತ್ತಿದೆ. ಮೇ 3ರವರೆಗೆ ಶೇ.75ರಷ್ಟು ಸ್ವಚ್ಛತಾ ಕಾರ್ಯ ನಡೆದಿದ್ದು, ಇನ್ನುಳಿದ ಕಾಮಗಾರಿಯನ್ನು ಒಂದು ವಾರದಲ್ಲಿ ಮಾಡಲಾಗುವುದು” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...