ಬಿಬಿಎಂಪಿ | ಸಿಒಟಿಪಿಎ ನಿಯಮ ಉಲ್ಲಂಘಿಸಿದ 13 ಅಂಗಡಿಗಳು ಬಂದ್

Date:

Advertisements

ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯಿದೆ (COTPA) ಅಡಿಯಲ್ಲಿ ನಿಯಮ ಉಲ್ಲಂಘಿಸಿದ ವ್ಯಾಪಾರ ಸಂಸ್ಥೆಗಳ ಮೇಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ನಿಯಮ ಉಲ್ಲಂಘನೆ ಮಾಡಿದವರ ಮೇಲೆ ಭಾರೀ ದಂಡ ವಿಧಿಸಿದ್ದಾರೆ.

ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯಿದೆ (COTPA) ಅಡಿಯಲ್ಲಿ ಬಿಬಿಎಂಪಿ ಅಧಿಕಾರಿಗಳು ಪಾಲಿಕೆಯ ಎಂಟು ವಲಯಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ಎಂಟು ವಲಯಗಳಲ್ಲಿರುವ 13 ವ್ಯಾಪಾರ ಸಂಸ್ಥೆಗಳನ್ನು ಪಾಲಿಕೆ ಬುಧವಾರ ಬಂದ್‌ ಮಾಡಿದೆ.

“ಜತೆಗೆ, ಕಾಯಿದೆ ಉಲ್ಲಂಘನೆ ಮಾಡಿದ್ದಕ್ಕಾಗಿ ಒಟ್ಟು 50 ಸಂಸ್ಥೆಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ತಪ್ಪಿತಸ್ಥರಿಂದ ಸುಮಾರು ₹50,000 ದಂಡ ಸಂಗ್ರಹಿಸಲಾಗಿದೆ. ಕಾಯಿದೆ ಉಲ್ಲಂಘನೆ ಪತ್ತೆಗೆ ಸಿಒಟಿಪಿಎ ಉಲ್ಲಂಘನೆ ವಿರುದ್ಧ ನಗರ ಪೊಲೀಸರ ವಿಶೇಷ ಅಭಿಯಾನ ನಡೆಸಿದ್ದಾರೆ” ಎಂದು ಬಿಬಿಎಂಪಿ ಆರೋಗ್ಯ ಆಯುಕ್ತ ಕೆ.ವಿ.ತ್ರಿಲೋಕ್ ಚಂದ್ರ ತಿಳಿಸಿದರು.

Advertisements

“ವಾರಾಂತ್ಯದಲ್ಲಿ ಪಬ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಹೋಟೆಲ್‌ಗಳಲ್ಲಿ ಜನಸಂದಣಿ ಇರುತ್ತದೆ. ಹಾಗಾಗಿ, ಕೂಡಲೇ ತಪಾಸಣೆ ನಡೆಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ದಾಳಿ ನಡೆಸಿದ ಅಧಿಕಾರಿಗಳು ವ್ಯಾಪಾರ ಸ್ಥಳಗಳಲ್ಲಿ ಸಿಒಟಿಪಿಎ ನಿಯಮಗಳ ಅನುಸರಣೆ ಆಗಿದೆಯಾ ಅಥವಾ ಇಲ್ಲವಾ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗಿದೆ” ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

“ರೆಸ್ಟೋರೆಂಟ್‌ಗಳು, ಪಬ್‌ಗಳು ಮತ್ತು ಕೆಫೆಗಳು ನಿಯಮಗಳನ್ನು ಉಲ್ಲಂಘಿಸುತ್ತಿವೆ ಎಂದು ಹಲವು ಬಾರಿ ದೂರುಗಳನ್ನು ಸ್ವೀಕರಿಸಿದ್ದೇವೆ. ಇತ್ತೀಚೆಗೆ, ನಗರ ಪೊಲೀಸರು ನೂರಾರು ಸ್ಥಳಗಳ ಮೇಲೆ ದಾಳಿ ನಡೆಸಿದರು. ನಿಯಮಗಳನ್ನು ಅನುಸರಿಸದ ಮತ್ತು ‘ಧೂಮಪಾನ ನಿಷೇಧ ವಲಯ’ ಎಂಬ ಫಲಕಗಳನ್ನು ಹಾಕದೆ ಇರುವ ಐದು ಸಂಸ್ಥೆಗಳನ್ನು ಮುಚ್ಚಲಾಗಿದೆ. ಜತೆಗೆ ಗೊತ್ತುಪಡಿಸಿದ ಧೂಮಪಾನ ಪ್ರದೇಶಗಳು ಮಾರ್ಗಸೂಚಿಗಳಿಗೆ ಬದ್ಧವಾಗಿದೆಯೇ ಎಂದು ಪರಿಶೀಲಿಸಿದರು” ಎಂದು ಅಧಿಕಾರಿಯೊಬ್ಬರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗುತ್ತಿಗೆದಾರನನ್ನು ಕಿಡ್ನ್ಯಾಪ್‌ ಮಾಡಿ ₹3 ಕೋಟಿ ಚೆಕ್‌ ಪಡೆದ ಬಿಬಿಎಂಪಿ ಮಾಜಿ ಕಾರ್ಪೋರೇಟರ್

ಕೆಲ ದಿನಗಳ ಹಿಂದೆ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರು, “ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರಿಗೆ ದಂಡ ವಿಧಿಸುವ ಕುರಿತು ಎಚ್ಚರಿಕೆ ನೀಡಿದ್ದಲ್ಲದೆ, ಧೂಮಪಾನದ ದುಷ್ಪರಿಣಾಮಗಳ ಕುರಿತು ಕೈಪಿಡಿ ಬಿಡುಗಡೆ ಮಾಡಿ, ಸಿಒಟಿಪಿಎ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿದ್ದರು. ಪೊಲೀಸರು ನಗರದಾದ್ಯಂತ 1,000ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿ ಎರಡು ವಾರಗಳಲ್ಲಿ 950 ಪ್ರಕರಣಗಳನ್ನು ದಾಖಲಿಸಿದ್ದಾರೆ” ಎಂದು ಹೇಳಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X