ಮೂರು ತಿಂಗಳಿಂದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ (ಮನರೇಗಾ) ಅಡಿಯಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರಿಗೆ ಪಾವತಿಸಬೇಕಾದ ಬಾಕಿ ಇರುವ ಕೂಲಿಯನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಸಿಪಿಐ(ಎಂ) ಕಾರ್ಯಕರ್ತರು ಕಲಬುರಗಿ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಇಂದು ಮಧ್ಯಾಹ್ನ 1 ಗಂಟೆಗೆ ಕಲಬುರಗಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಹಿನ್ನಲೆಯಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದ) ಕಾರ್ಯಕರ್ತರು ನಗರದ ಜಗತ್ ವೃತ್ತದ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟಿಸಿ ʼಗೋ ಬ್ಯಾಕ್ ಮೋದಿʼ ಎಂದು ಕೇಂದ್ರ ಸರ್ಕಾರದ ನೀತಿ ವಿರುದ್ಧ ಘೋಷಣೆ ಕೂಗಿದರು.
“ಕೊಟ್ಯಾಂತರ ರೂಪಾಯಿ ಮನರೇಗಾ ಕೂಲಿ ಬಾಕಿ ಉಳಿಸಿಕೊಂಡಿರುವ ಮೋದಿ ಅವರೇ ಯಾವ ಮುಖ ಇಟ್ಟುಕೊಂಡು ಕಲಬುರಗಿಗೆ ಬರುತ್ತಿದ್ದೀರಿ ಎಂದು ಪ್ರಶ್ನಿಸಿದರು. ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿ ಸಾವಿರಾರು ಕೋಟಿ ಹಣ ವಸೂಲಿ ಮಾಡಿದೆ” ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ.
ಪೊಲೀಸರು ಪ್ರತಿಭಟನೆಗೆ ಅನುಮತಿ ನೀಡಿರಲಿಲ್ಲ. ಆದರೂ ಪ್ರತಿಭಟನೆ ನಡೆಸಿ ಕೇಂದ್ರದ ಜನವಿರೋಧಿ ನೀತಿ ಖಂಡಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಈ ಸುದ್ದಿ ಓದಿದ್ದೀರಾ? ‘WELCOME TO MR. BOND’ ಎಂದು ಸಂಬೋಧಿಸಿ ಪ್ರಶ್ನೆಗಳ ಮೂಲಕ ಮೋದಿ ಸ್ವಾಗತಿಸಿದ ಸಚಿವ ಪ್ರಿಯಾಂಕ್ ಖರ್ಗೆ
ಪ್ರತಿಭಟನೆಯಲ್ಲಿ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಕೆ.ನೀಲಾ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಶರಣಬಸಪ್ಪ ಮಮಶೆಟ್ಟಿ, ಭೀಮಶೆಟ್ಟು ಯಂಪಳ್ಳಿ, ಲವಿತ್ರ ವಸ್ತ್ರದ ಸೇರಿದಂತೆ ಇತರರಿದ್ದರು.