ಕಲಬುರಗಿ | ʼಗೋ ಬ್ಯಾಕ್‌ ಮೋದಿʼ ಘೋಷಣೆ ಕೂಗಿದ ಸಿಪಿಐ(ಎಂ) ಕಾರ್ಯಕರ್ತರು ವಶಕ್ಕೆ

Date:

ಮೂರು ತಿಂಗಳಿಂದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ (ಮನರೇಗಾ) ಅಡಿಯಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರಿಗೆ ಪಾವತಿಸಬೇಕಾದ ಬಾಕಿ ಇರುವ ಕೂಲಿಯನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಸಿಪಿಐ(ಎಂ) ಕಾರ್ಯಕರ್ತರು ಕಲಬುರಗಿ ನಗರದಲ್ಲಿ ಪ್ರತಿಭಟನೆ ನಡೆಸಿದರು.

- Advertisement -

ಇಂದು ಮಧ್ಯಾಹ್ನ 1 ಗಂಟೆಗೆ ಕಲಬುರಗಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಹಿನ್ನಲೆಯಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದ) ಕಾರ್ಯಕರ್ತರು ನಗರದ‌ ಜಗತ್‌ ವೃತ್ತದ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟಿಸಿ ʼಗೋ ಬ್ಯಾಕ್‌ ಮೋದಿʼ ಎಂದು ಕೇಂದ್ರ ಸರ್ಕಾರದ ನೀತಿ ವಿರುದ್ಧ ಘೋಷಣೆ ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಕೊಟ್ಯಾಂತರ ರೂಪಾಯಿ ಮನರೇಗಾ ಕೂಲಿ ಬಾಕಿ ಉಳಿಸಿಕೊಂಡಿರುವ ಮೋದಿ ಅವರೇ ಯಾವ ಮುಖ ಇಟ್ಟುಕೊಂಡು ಕಲಬುರಗಿಗೆ ಬರುತ್ತಿದ್ದೀರಿ ಎಂದು ಪ್ರಶ್ನಿಸಿದರು. ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿ ಸಾವಿರಾರು ಕೋಟಿ ಹಣ ವಸೂಲಿ ಮಾಡಿದೆ” ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ.

ಪೊಲೀಸರು ಪ್ರತಿಭಟನೆಗೆ ಅನುಮತಿ ನೀಡಿರಲಿಲ್ಲ. ಆದರೂ ಪ್ರತಿಭಟನೆ ನಡೆಸಿ ಕೇಂದ್ರದ ಜನವಿರೋಧಿ ನೀತಿ ಖಂಡಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಈ ಸುದ್ದಿ ಓದಿದ್ದೀರಾ? ‘WELCOME TO MR. BOND’ ಎಂದು ಸಂಬೋಧಿಸಿ ಪ್ರಶ್ನೆಗಳ ಮೂಲಕ ಮೋದಿ ಸ್ವಾಗತಿಸಿದ ಸಚಿವ ಪ್ರಿಯಾಂಕ್‌ ಖರ್ಗೆ

ಪ್ರತಿಭಟನೆಯಲ್ಲಿ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಕೆ.ನೀಲಾ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಶರಣಬಸಪ್ಪ ಮಮಶೆಟ್ಟಿ, ಭೀಮಶೆಟ್ಟು ಯಂಪಳ್ಳಿ, ಲವಿತ್ರ ವಸ್ತ್ರದ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....