ಸೈಬರ್ ವಂಚನೆ | ರಿಯಾಯಿತಿ ದರದಲ್ಲಿ ಶೇರು ನೀಡುವುದಾಗಿ ನಂಬಿಸಿ ಉದ್ಯಮಿಗೆ ₹6 ಕೋಟಿ ವಂಚನೆ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೈಬರ್ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇವೆ. ಇದೀಗ, ಕಂಪನಿ ಷೇರು ಮತ್ತು ಐಪಿಒಗಳನ್ನು ರಿಯಾಯಿತಿ ದರದಲ್ಲಿ ನೀಡುವುದಾಗಿ ಫೇಸ್‌ಬುಕ್‌ನಲ್ಲಿ ಪರಿಚಯವಾದವರನ್ನು ನಂಬಿದ ಉದ್ಯಮಿಯೊಬ್ಬರು ಬರೋಬ್ಬರಿ ₹6.01 ಕೋಟಿ ಕಳೆದುಕೊಂಡ ಘಟನೆ ನಡೆದಿದೆ.

- Advertisement -

ಈ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಗೋಲ್ಡ್ಮನ್ ಸ್ಯಾಚ್ಸ್ ಇಕ್ವಿಟಿ ಅಸೆಟ್ ಮ್ಯಾನೇಜ್ಮೆಂಟ್ ಗ್ರೂಪ್ – 109, EQT ಕ್ಲಬ್ Q92 ಮತ್ತು ಸ್ಕೈರಿಮ್ ಕ್ಯಾಪಿಟಲ್-ಎಮಿಲಿ ಕುನಾಲ್ ಕಂಪನಿಯ ಪ್ರತಿನಿಧಿಗಳೆಂದು ಫೇಸ್‌ಬುಕ್ ಮೂಲಕ 72 ವರ್ಷದ ದೂರದಾರ ಉದ್ಯಮಿಗೆ ಆರೋಪಿಗಳು ಪರಿಚಯವಾಗುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

72 ವರ್ಷದ ಉದ್ಯಮಿಗೆ ನಾನಾ ಕಂಪನಿಗಳ ‍ಷೇರುಗಳು ಹಾಗೂ ಐಪಿಒಗಳನ್ನು ರಿಯಾಯಿತಿ ದರದಲ್ಲಿ ಕೊಡುವುದಾಗಿ ನಂಬಿಸಿದ್ದಾರೆ. ಫೇಸ್‌ಬುಕ್‌ ನಂತರ ವಾಟ್ಸ್‌ಆಪ್‌ನಲ್ಲಿ ಸಂಪರ್ಕದಲ್ಲಿದ್ದ ಆರೋಪಿಗಳು ಫೆಬ್ರುವರಿ 8 ರವರೆಗೆ ಹಂತ ಹಂತವಾಗಿ ₹6.01 ಕೋಟಿ ವರ್ಗಾವಣೆ ಮಾಡಿಕೊಂಡಿದ್ದಾರೆ.

“ಕೇರಳದ ಹೂಡಿಕೆದಾರರೊಬ್ಬರು ಈ ಕಂಪನಿಗಳ ವಿರುದ್ಧ ದೂರು ಸಲ್ಲಿಸಿರುವುದು ತಿಳಿದು ಬಂದಾಗ ಇದು ವಂಚನೆಯ ಜಾಲ ಎಂದು ಅನುಮಾನಗೊಂಡಿದ್ದಾರೆ. ಬಳಿಕ, ಉದ್ಯಮಿ ಆರೋಪಿಗಳಿಗೆ ತಮ್ಮ ಹಣ ವಾಪಸ್ ಮಾಡುವಂತೆ ಕೇಳಿದ್ದಾರೆ. ಆರೋಪಿಗಳು ಹಣ ನೀಡದೇ, ವಿಳಂಬ ಮಾಡುತ್ತಿವೆ” ಎಂದು 72 ವರ್ಷದ ಉದ್ಯಮಿ ಠಾಣೆಗೆ ದೂರು ನೀಡಿದ್ದಾರೆ.

“ಆರೋಪಿಗಳು ಉದ್ಯಮಿಗೆ ಷೇರುಗಳು, ಐಪಿಒಗಳನ್ನು ಕೊಡಿಸುವುದಾಗಿ ನಂಬಿಸಿ ಸುಮಾರು 26 ಖಾತೆಗಳಿಗೆ ಹಣ ವರ್ಗಾವಣೆ ಮಾಡಿಕೊಂಡು ವಂಚಿಸಿದ್ದಾರೆ. ಪ್ರತಿನಿತ್ಯ ಈ ರೀತಿ ಷೇರು ಟ್ರೇಡಿಂಗ್ ಹೆಸರಿನಲ್ಲಿ ವಂಚಿಸುತ್ತಿರುವ 3ರಿಂದ 4 ಪ್ರಕರಣಗಳು ವರದಿಯಾಗುತ್ತಿವೆ. ಸಾಮಾನ್ಯವಾಗಿ ಇಂತಹ ಪ್ರಕರಣಗಳಲ್ಲಿ ಪರಿಚಯವಾಗುವ ಆರೋಪಿಗಳು ವಾಟ್ಸ್‌ಆಪ್‌ ಗ್ರೂಪ್‌ಗಳಿಗೆ ಆಹ್ವಾನಿತರಾಗುತ್ತಾರೆ. ವಾಟ್ಸ್‌ಆಪ್‌ ಗ್ರೂಪ್‌ನಲ್ಲಿರುವ ಉಳಿದ ಸದಸ್ಯರು ಹೊಸದಾಗಿ ಬಂದವರನ್ನು ಹುರುದುಂಬಿಸುವ ಸಂದೇಶ ಕಳುಹಿಸುತ್ತಾರೆ. ಬೇರೆ ಬೇರೆ ಖಾತೆಗಳಿಗೆ ಹಣ ಹಾಕಿಸಿಕೊಂಡು ಲಾಭ ಬಂದಂತೆ ತೋರಿಸಿ ವಂಚಿಸುತ್ತಿದ್ದಾರೆ” ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ನಾನಾ ಬೇಡಿಕೆ ಈಡೇರಿಕೆಗೆ ಒತ್ತಾಯ; ಮಾರ್ಚ್‌ 4ರಿಂದ ಸಾರಿಗೆ ನೌಕರರ ಅಹೋರಾತ್ರಿ ಮುಷ್ಕರ

ಸದ್ಯ ಹಣ ಕಳೆದುಕೊಂಡಿರುವ ಉದ್ಯಮಿ ಆರೋಪಿ‌ ಕಂಪನಿಗಳ ವಿರುದ್ಧ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....