ದರ್ಶನ್ ಪ್ರಕರಣ | ತನಿಖಾಧಿಕಾರಿಯಾಗಿ ಗಿರೀಶ್ ನಾಯ್ಕ್ ಮರು ನೇಮಕ

Date:

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್ ಸೇರಿದಂತೆ 14 ಆರೋಪಿಗಳನ್ನು ಮತ್ತೆ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿದೆ. ಈ ಪ್ರಕರಣ ಪ್ರಮುಖ ಹಂತಕ್ಕೆ ತಲುಪುವ ಹೊತ್ತಿನಲ್ಲಿ ಈ ಪ್ರಕರಣದ ತನಿಖೆ ಮಾಡುತ್ತಿದ್ದ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿತ್ತು. ಆದರೆ, ಇದೀಗ ಮತ್ತೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಇನ್ಸ್‌ಪೆಕ್ಟರ್ ಗಿರೀಶ್ ನಾಯ್ಕ್ ಅವರನ್ನು ತನಿಖಾ ತಂಡಕ್ಕೆ ಮರು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

- Advertisement -

ಈ ಪ್ರಕರಣದ ತನಿಖೆಯನ್ನು ಕಾಮಾಕ್ಷಿಪಾಳ್ಯದ ಇನ್​​ಸ್ಪೆಕ್ಟರ್​ ಗಿರೀಶ್ ನಾಯ್ಕ್ ಅವರು ನಡೆಸುತ್ತಿದ್ದರು. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಗಿರೀಶ್ ನಾಯ್ಕ್ ಅವರು ತನಿಖೆ ನಡೆಸಿ ನಟ ದರ್ಶನ್‌, ಪವಿತ್ರ ಗೌಡ ಸೇರಿದಂತೆ ಒಟ್ಟು 13 ಜನರನ್ನು ಬಂಧಿಸಿದ್ದರು. ಈ ಪ್ರಕರಣವನ್ನು ಸಮರ್ಥವಾಗಿ ನಡೆಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಲೋಕಸಭಾ ಚುನಾವಣೆಯ ಹಿನ್ನೆಲೆ, ಗಿರೀಶ್ ನಾಯ್ಕ್‌ ಅವರನ್ನು ಸಿ.ಕೆ.ಅಚ್ಚುಕಟ್ಟು‌ ಠಾಣೆಯಿಂದ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಈ ಮಧ್ಯೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಜವಾಬ್ದಾರಿ ಇವರ ಹೆಗಲಿಗೆ ಬಿದ್ದಿತ್ತು. ಪ್ರಕರಣದ ತನಿಖೆ ನಡೆಸುತ್ತಿದ್ದ ಅವರನ್ನು ಮತ್ತೆ ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ತೆರವಾದ ಸ್ಥಾನಕ್ಕೆ ಪ್ರಕರಣದ ನೂತನ ತನಿಖಾಧಿಕಾರಿಯಾಗಿ ವಿಜಯನಗರ ಉಪವಿಭಾಗ ಎಸಿಪಿ ಚಂದನ್ ತನಿಖಾಧಿಕಾರಿಯಾಗಿ ಬಂದಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಕಾರು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸಾವು

ಇದೀಗ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಅಗತ್ಯ ಇರುವ ಹಿನ್ನೆಲೆ, ಗಿರೀಶ್ ನಾಯ್ಕ್ ಅವರನ್ನು ಸಹಾಯಕ‌ ತನಿಖಾಧಿಕಾರಿಯನ್ನಾಗಿ ಮತ್ತೆ ನಿಯುಕ್ತಿಗೊಳಿಸಲಾಗಿದೆ. ಆರೋಪಿ ದರ್ಶನ್ ಅವರನ್ನು ಮೈಸೂರಿನಿಂದ ಕರೆತಂದಿದ್ದ ತಂಡದಲ್ಲಿ ಗಿರೀಶ್ ನಾಯ್ಕ್ ಪ್ರಮುಖ ಪಾತ್ರ ವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...