ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 19 ಆರೋಪಿಗಳು ಬಂಧನದಲ್ಲಿದ್ದಾರೆ. ಸದ್ಯ, ಈ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಲು ವಿಶೇಷ ಪ್ರಾಸಿಕ್ಯೂಟರ್ ಆಗಿ ಹೈಕೋರ್ಟ್ ವಕೀಲ ಪಿ.ಪ್ರಸನ್ನ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯ ಒಳಾಡಳಿತ ಇಲಾಖೆಯ ಅಧೀನ ಕಾರ್ಯದರ್ಶಿ ಶನಿವಾರ ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮೆಟ್ರೋ ಕಾಮಗಾರಿ ಪೂರ್ಣಗೊಂಡಿರುವ ಕಡೆ ಸರ್ವೀಸ್ ರಸ್ತೆ ಹಾಗೂ ಪಾದಚಾರಿ ಮಾರ್ಗ ಅಭಿವೃದ್ಧಿಪಡಿಸಿ: ತುಷಾರ್ ಗಿರಿ ನಾಥ್
ವಿಚಾರಣಾ, ಸೆಷನ್ಸ್ ಮತ್ತು ಹೈಕೋರ್ಟ್‌ನಲ್ಲಿ ವಿಶೇಷ ಪ್ರಾಸಿಕ್ಯೂಟರ್ ಆಗಿ ಪ್ರಸನ್ನ ಕುಮಾರ್ ಅವರು ಈ ಪ್ರಕರಣವನ್ನು ಪ್ರತಿನಿಧಿಸಲಿದ್ದಾರೆ. ಹಾಗೆಯೇ, ಸಹಾಯಕ ಪ್ರಾಸಿಕ್ಯೂಟರ್ ಆಗಿ ಹೈಕೋರ್ಟ್ ವಕೀಲ ಸಿ.ಸಚಿನ್ ಅವರನ್ನು ನೇಮಕ ಮಾಡಲಾಗಿದೆ.