ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 15 ಆರೋಪಿಗಳನ್ನು ನ್ಯಾಯಾಲಯದ ಆದೇಶ ಮೇರೆಗೆ ಆರು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ನಾಳೆಗೆ ಕಸ್ಟಡಿ ಅವಧಿ ಮುಗಿಯಲಿದ್ದು, ನಾಳೆ ಭಾನುವಾರ ಇರುವ ಕಾರಣ ಪೊಲೀಸರು ಇಂದೇ ಆರೋಪಿಗಳನ್ನು ಬೆಂಗಳೂರು ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್‌ಗೆ ಹಾಜರುಪಡಿಸಿದ್ದರು. ಇದೀಗ, ಹೆಚ್ಚಿನ ವಿಚಾರಣೆಗಾಗಿ 5 ದಿನಗಳವರೆಗೆ ಆರೋಪಿಗಳನ್ನು ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.
ಸದ್ಯ, ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸರು ನಗರದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಆರೋಪಿಗಳನ್ನು ಹಾಜರುಪಡಿಸಿದ್ದಾರೆ. ಪೊಲೀಸರು ಆರೋಪಿಗಳಿಂದ ಮಹತ್ವದ ಹೇಳಿಕೆಗಳನ್ನು ದಾಖಲಿಸಿ ಕೋರ್ಟ್‌ಗೆ ಹಾಜರು ಪಡಿಸಿದ್ದರು. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಆರೋಪಿಗಳನ್ನು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಚೆಕಪ್ ಮಾಡಿಸಲಾಯಿತು.
ಮ್ಯಾಜಿಸ್ಟ್ರೇಟ್ ವಿಶ್ವನಾಥ್ ಗೌಡರ್ ಅವರು ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಸರ್ಕಾರದ ಪರವಾಗಿ ವಾದಿಸಲು ವಿಶೇಷ ಸರ್ಕಾರಿ ಅಭಿಯೋಜಕರಾಗಿ ಪಿ ಪ್ರಸನ್ನಕುಮಾರ್ ನೇಮಕ ಆಗಿದ್ದಾರೆ. ನಾಳೆಗೆ ಆರೋಪಿಗಳ ಕಸ್ಟಡಿ ಅವಧಿ ಮುಗಿಯಲಿದೆ. ಭಾನುವಾರ ನ್ಯಾಯಾಲಯಕ್ಕೆ ರಜೆ ಇರುವ ಕಾರಣ ಇಂದೇ (ಶನಿವಾರ) ಪೊಲೀಸರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
ಪ್ರಕರಣದಲ್ಲಿ ಕಸ್ಟಡಿಗೆ ನೀಡಿದ ಅವಧಿಯಲ್ಲಿ ವಾಹನ ಬಳಕೆ, ಸ್ಥಳ ಮಹಜರು ಮಾಡಲಾಗಿದೆ. ಅಲ್ಲದೇ, ಆರೋಪಿಗಳ ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಮೈಸೂರು, ಬೆಂಗಳೂರಿನಲ್ಲಿ ಸ್ಥಳ ಮಹಜರು ಮಾಡಬೇಕಿದೆ. ಜೂನ್ 14ರಂದು ಚಿತ್ರದುರ್ಗದಲ್ಲಿ ಪ್ರಕರಣ ಸಂಬಂಧ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಮೃತದೇಹವನ್ನು ಸಾಗಣೆ ಮಾಡಲು ದರ್ಶನ್ ನೀಡಿರುವ ₹30 ಲಕ್ಷ ಆರೋಪದ ಕುರಿತಾಗಿ ಹಣವನ್ನು ಜಪ್ತಿ ಮಾಡಲಾಗಿದೆ. ಈ ಹಣ ಯಾರದ್ದು ಮತ್ತು ಯಾರಿಗೆ ನೀಡಿದ್ದರು ಎಂಬಿತ್ಯಾದಿ ಸೇರಿದಂತೆ ಹಲವು ಮಾಹಿತಿ ತಿಳಿಯಬೇಕಿದೆ” ಎಂದು ಎಸ್ಪಿಪಿ ಪ್ರಸನ್ನ ಕುಮಾರ್ ಹೇಳಿದರು.
ಪೊಲೀಸರ ತನಿಖೆಯ ಅಂಶಗಳ ಬಗ್ಗೆ ಕೋರ್ಟ್‌ಗೆ ಮಾಹಿತಿ ನೀಡಿದ ಅವರು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಷ್ಟಡಿಗೆ ನೀಡಬೇಕು ಎಂದು ಕೋರ್ಟ್ ಎದುರು ಮನವಿ ಮೂಲಕ ವಾದ ಮಂಡಿಸಿದರು.
ಮೃತ ವ್ಯಕ್ತಿ ರೇಣುಕಾಸ್ವಾಮಿಗೆ ಎಲೆಕ್ಟ್ರಿಕ್ ಶಾಕ್ ನೀಡಲಾಗಿದೆ ಎಂದು ಕೋರ್ಟ್ ಗಮನಕ್ಕೆ ತರಲಾಗಿದೆ.
ಪವಿತ್ರಾ ಗೌಡ ಅವರನ್ನು 6 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಈಗ ರಿಮ್ಯಾಂಡ್ ಅರ್ಜಿ ನೀಡುತ್ತಿಲ್ಲ. ಈಗಾಗಲೇ 5 ದಿನ ಅವರನ್ನು ಕಸ್ಟಡಿಗೆ ಪಡೆದಿದ್ದಾರೆ. ಆರೋಪಿಗಳ ಪೈಕಿ ಮಹಿಳೆ ನೋವನ್ನು ಅನುಭವಿಸುತ್ತಿದ್ದಾರೆ ಎಂದು ಪವಿತ್ರಾ ಗೌಡ ಪರ ವಕೀಲ ನಾರಾಯಣಸ್ವಾಮಿ ವಾದ ಮಂಡನೆ ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ವಾಹನ ಸವಾರರಿಗೆ ಮತ್ತೆ ಬೆಲೆ ಏರಿಕೆ ಬಿಸಿ; ಪೆಟ್ರೋಲ್, ಡೀಸೆಲ್ ದರ ಹೆಚ್ಚಳ
ನಟ ದರ್ಶನ್ ಪರ ವಕೀಲ ಅನಿಲ್ ಬಾಬು, “ಎಲ್ಲದಕ್ಕೂ ಎರಡನೇ ಆರೋಪಿ ದರ್ಶನ್ ಕಾರಣ ಎನ್ನುವುದು ಎಷ್ಟರ ಮಟ್ಟಿಗೆ ಸರಿ. ಅನುಮತಿಯಿಲ್ಲದೇ ಎಲ್ಲ ಆರೋಪಿಗಳ ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ. A5 ನಂದೀಶ್ ಮತ್ತು A13 ದೀಪಕ್ಗೆ ಪೊಲೀಸರು ಕರೆಂಟ್ ಶಾಕ್ ನೀಡಿದ್ದಾರೆ. ಆರೋಪಿಗಳ ಹೇಳಿಕೆ ಸೋರಿಕೆಯಾಗುತ್ತಿವೆ. ಇದರಿಂದ ಕೇಸ್ ಬಗ್ಗೆ ಗಾಸಿಪ್ ಹರಡುತ್ತಿವೆ” ಎಂದು ವಾದ ಮಂಡಿಸಿದ್ದಾರೆ.