ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜುಲೈ 4ರವರೆಗೆ ಆರೋಪಿ ನಟ ದರ್ಶನ್ ಜೈಲುಪಾಲಾಗಿದ್ದಾರೆ.
24ನೇ ಎಸಿಎಂಎಂ ನ್ಯಾಯಾಲಯ ದರ್ಶನ್ ಮತ್ತು ಇತರ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಪ್ರಕಟಿಸಿದೆ. ಜುಲೈ 4ರವರೆಗೆ ದರ್ಶನ್, ವಿನಯ್, ಪ್ರದೂಷ್ ಹಾಗೂ ಧನರಾಜ್ ಅವರನ್ನು ಅರಪ್ಪನ ಅಗ್ರಹಾರದ ಜೈಲಿಗೆ ಕಳುಹಿಸಲಾಗಿದೆ.
ಜೂನ್ 22ರಂದು ಕಸ್ಟಡಿ ಅವಧಿ ಮುಗಿದಿರುವ ಹಿನ್ನೆಲೆ ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆದೊಯ್ದಿದ್ದಾರೆ. ದರ್ಶನ್, ವಿನಯ್, ಪ್ರದೂಶ್ ಹಾಗೂ ಧನರಾಜ್‌ಗೆ ಜುಲೈ 4ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 13 ದಿನ ನಟ ದರ್ಶನ್ ಪರಪ್ಪನ ಅಗ್ರಹಾರದ ಜೈಲಿನಲ್ಲಿ ಇರಲಿದ್ದಾರೆ.
ಈ ಸುದ್ದಿ ಓದಿದ್ದೀರಾ? ದರ್ಶನ್ ಪ್ರಕರಣ | ಕಾನೂನು ಉಲ್ಲಂಘಿಸೋರು ಶ್ರೀಮಂತರು – ನರಳೋರು ಬಡವರು; ನಟಿ ರಮ್ಯ ಟ್ವೀಟ್
13 ವರ್ಷದ ಬಳಿಕ ಅಂದರೇ, 2011ರ ಬಳಿಕ ನಟ ದರ್ಶನ್ ಮತ್ತೆ ಜೈಲುಪಾಲಾಗಿದ್ದಾರೆ.