ದಾವಣಗೆರೆ | ಅತಿಥಿ ಉಪನ್ಯಾಸಕರು, ಪದವಿ ಶೈಕ್ಷಣಿಕ ಗೊಂದಲ ಪರಿಹರಿಸಲು ಎಐಡಿಎಸ್ಓ ಪ್ರತಿಭಟನೆ

Date:

ಅತಿಥಿ ಉಪನ್ಯಾಸಕರಿಲ್ಲದೇ ಪದವಿ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಶೈಕ್ಷಣಿಕ ಗೊಂದಲ ಪರಿಹರಿಸಲು ಆಗ್ರಹಿಸಿ, ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಾಗಿರುವ ಗೊಂದಲವನ್ನು ಖಂಡಿಸಿ ದಾವಣಗೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎದುರು ಎಐಡಿಎಸ್ಓ ನೇತೃತ್ವದಲ್ಲಿ ಕಾರ್ಯಕರ್ತರು ಮತ್ತು ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

- Advertisement -
1002589455

ಪ್ರತಿಭಟನೆಯಲ್ಲಿ ಎಐಡಿಎಸ್ಓ ನ ರಾಜ್ಯ ಕಛೇರಿ ಕಾರ್ಯದರ್ಶಿಗಳಾದ ಮಹಾಂತೇಶ್ ಬಿಳೂರ್ ಮಾತನಾಡಿ, “ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಇಲ್ಲಿಯವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲ. ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ. ಇದು ಅವರ ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸಿದೆ. ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದ್ದು ಪಾಠಗಳು ಇನ್ನೂ ಆರಂಭವಾಗಿಲ್ಲ. ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ಕೋರ್ಟಿನಲ್ಲಿ ನಡೆಯುತ್ತಿರುವ ಮೊಕದ್ದಮೆಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಯು ನೆನೆಗುದಿಗೆ ಬಿದ್ದಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...
1002589453

“ಶೈಕ್ಷಣಿಕ ವಿಷಯಗಳಲ್ಲಿ ರಾಜ್ಯ ಸರ್ಕಾರವು ಕೇಂದ್ರದ ನಿರ್ಧಾರಗಳನ್ನು ಪಾಲಿಸವುದು ಖಡ್ಡಾಯವಲ್ಲ ಎಂದು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವಿದೆ. ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಬೇಕು. ಇಂತಹ ಪರಿಸ್ಥಿತಿಯಲ್ಲಿ, ರಾಜ್ಯ ಸರ್ಕಾರವು ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತುರ್ತಾಗಿ ಕೈಗೊಂಡು ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.

1002589452

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಗಣೇಶಮೂರ್ತಿ ಬಳಿ ಅಳವಡಿಸಿದ್ದ ವಿವಾದಿತ ಫ್ಲೆಕ್ಸ್‌ ತೆರವು: ಪೊಲೀಸರ ಕಾರ್ಯ ಯಶಸ್ವಿ

ಪ್ರತಿಭಟನೆಯಲ್ಲಿ ಎಐಡಿಎಸ್ಓ ಜಿಲ್ಲಾ ಅಧ್ಯಕ್ಷರಾದ ಪೂಜಾ ನಂದಿಹಳ್ಳಿ, ಜಿಲ್ಲಾ ಕಾರ್ಯದರ್ಶಿಗಳಾದ ಸುಮನ್ ಟಿ ಎಸ್ ಸಂಘಟನಾ ಕಾರ್ಯರಾದ ಗಂಗಾಧರ, ವರಲಕ್ಷ್ಮಿ, ಪ್ರೇಮ್ ಕುಮಾರ್, ಅನುಷಾ, ಕವನ, ಮಧು, ಪರಶುರಾಮ, ಮಂಜುನಾಥ್ ಹೆಚ್ ವಿ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಪ್ರತಿಭಟನೆ ನಂತರ ಮಾನ್ಯ ಉನ್ನತ ಶಿಕ್ಷಣ ಸಚಿವರಿಗೆ ತಹಸೀಲ್ದಾರರ ಮೂಲಕ ಮನವಿ ಸಲ್ಲಿಸಲಾಯಿತು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...