ದಾವಣಗೆರೆ | ಮುಸ್ಲಿಂ ಸಮಾಜದ ವಿರುದ್ಧ ಕೋಮುವಾದಿ ಹೇಳಿಕೆ: ಕ್ರಮಕ್ಕೆ ಮುಖಂಡರ ಆಗ್ರಹ

Date:

*ಇತ್ತೀಚೆಗೆ ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆ, ಆಜಾದ್ ನಗರದಲ್ಲಿ ನಡೆದಿರುವ ಮುಸ್ಲಿಂ ಯುವಕರ ಗುಂಪುಗಳ ನಡುವಿನ ಘರ್ಷಣೆಯ ನಂತರ ಸಮಾಜದ ವಿರುದ್ಧ ಕೆಟ್ಟ ಅಭಿಪ್ರಾಯ ಬರುವ ರೀತಿಯಲ್ಲಿ ಕೋಮುವಾದಿ ಹೇಳಿಕೆಗಳನ್ನು ನೀಡುತ್ತಿರುವವರು ಕುರಿತು ಕ್ರಮಕೈಗೊಳ್ಳುವಂತೆ ಎಐಎಂಐಎಂ ಪಕ್ಷಿದ ಮುಖಂಡರು ಹಾಗೂ ದಾವಣಗೆರೆ ತಂಜೀಮುಲ್ ಮುಸ್ಲಿಮೀನ್ ಫಂಡ್ ಅಸೋಸಿಯೇಷನ್ ಮುಖಂಡರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪ್ರತ್ಯೇಕವಾಗಿ ಮನವಿ ಸಲ್ಲಿಸಿದರು.

- Advertisement -
1003634079
ತಂಜೀಮುಲ್ ಮುಸ್ಲಿಮೀನ್ ಫಂಡ್ ಅಸೋಸಿಯೇಷನ್ ಮುಖಂಡರು

ದಾವಣಗೆರೆ ತಂಜೀಮುಲ್ ಮುಸ್ಲಿಮೀನ್ ಫಂಡ್ ಅಸೋಸಿಯೇಷನ್ ಅಧ್ಯಕ್ಷರಾದ ಜನಾಬ್ ಶೇಕ್ ದಾದಾಪೀರ್ (ದಾದು ಸೇಠ್) ರವರ ನೇತೃತ್ವದ ತಂಡ ಹಾಗೂ ಜಿಲ್ಲಾಧ್ಯಕ್ಷ ಮುಹಮ್ಮದ್ ಅಲಿ ಶೋಯೆಬ್ ನೇತೃತ್ವದ ಎಐಎಂಐಎಂ (AIMIM) ನಿಯೋಗವು ಇಂದು ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರನ್ನು ಭೇಟಿಯಾಗಿ, ಇತ್ತೀಚೆಗೆ ಯುವ ಗುಂಪುಗಳ ನಡುವಿನ ಘರ್ಷಣೆಯನ್ನು ಕೋಮುವಾದೀಕರಣಗೊಳಿಸುವುದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಈ ವೇಳೆ ಮಾತನಾಡಿದ ಮಹಮದ್ ಅಲಿ ಶೋಯೆಬ್ “ಬಿಜೆಪಿ ಸದಸ್ಯರು “ಜಿಹಾದಿ “ಮತಾಂಧ”ನಂತಹ ಪ್ರಚೋದನಕಾರಿ ಪದಗಳನ್ನು ಬಳಸಿಕೊಂಡು ಘಟನೆಯನ್ನು ಪೊಲೀಸ್-ವರ್ಸಸ್-ಸಮುದಾಯ ಸಮಸ್ಯೆಯಂತೆ ಸುಳ್ಳಾಗಿ ತಿರುಚುತ್ತಿದ್ದಾರೆ. ತಮ್ಮ ರಾಜಕೀಯ ಲಾಭಕ್ಕಾಗಿ ಬಳಸುತ್ತಿದ್ದಾರೆ. ಮತ್ತು ಸಾರ್ವಜನಿಕ ಸಾಮರಸ್ಯಕ್ಕೆ ಅಪಾಯವನ್ನುಂಟು ಮಾಡುತ್ತಿದ್ದಾರೆ. ಸಮಾಜದಲ್ಲಿ ಹಿಂದೂ ಮುಸ್ಲಿಂ ಬಾಂಧವರು ಸಾಮರಸ್ಯದಿಂದ ಇದ್ದಾರೆ. ಇದರ ಬಗ್ಗೆ ಸೂಕ್ತ ಕ್ರಮ ಕೈಗೊಡಬೇಕು” ಎಂದು ಅಭಿಪ್ರಾಯಪಟ್ಟರು.

“ಮುಸ್ಲಿಂ ಸಮಾಜದ ವಿರುದ್ಧ ಪ್ರಚೋದನಕಾರಿ ಮತ್ತು ಕೋಮುವಾದಿ ಹೇಳಿಕೆ ಗಳು ನೀಡಿರುವವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕು. ದ್ವೇಷಪೂರಿತ ಹೇಳಿಕೆಗಳನ್ನು ನೀಡಿ ಸಮಾಜದ ಸಾಮರಸ್ಯ ಹಾಳು ಮಾಡುವ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ತಂಜೀಂ ಮುಖಂಡ ದಾದು ಸೇಠ್ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವಸತಿ ರಹಿತರಿಗೆ ಹಕ್ಕುಪತ್ರ ನೀಡಲು ಆಗ್ರಹಿಸಿ ಅಂಬೇಡ್ಕರ್ ಸೇವಾ ಸಮಿತಿ ಅನಿರ್ದಿಷ್ಟ ಧರಣಿ

ವಿಷಯವನ್ನು ಪರಿಶೀಲಿಸಿ, ನಿಷ್ಪಕ್ಷಪಾತ ಕಾನೂನು ಜಾರಿ ಮತ್ತು ಶಾಂತಿಗೆ ಇಲಾಖೆಯ ಬದ್ಧವಾಗಿದೆ ಎಂದು ಎಸ್ಪಿ ಭರವಸೆ ನೀಡಿದರು.

ಈ ಸುದ್ದಿ ಓದಿ – ದಾವಣಗೆರೆ | ಬಸ್ ನಿಲ್ದಾಣದಲ್ಲಿ ಸುರಕ್ಷತೆಗೆ ಸಿಸಿಟಿವಿ ಅಳವಡಿಕೆಗೆ ಆಮ್ ಆದ್ಮಿ ಪಕ್ಷದ ಒತ್ತಾಯ

ಈ ವೇಳೆ ಎಐಎಂಐಎಂ ಪಕ್ಷದ ಕಾರ್ಯಕರ್ತರು ತಂಜೀಮ್ ನ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದೆ. ಪರಿಣಾಮ, ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ ನಾಲ್ಕು...

‘ಮತದಾನದ ಹಕ್ಕು ಕಸಿಯಲು ಯಾರಿಗೂ ಅಧಿಕಾರವಿಲ್ಲ’: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

"ಈ ದೇಶದಲ್ಲಿ ಹುಟ್ಟಿರುವ ಯಾವುದೇ ನಾಗರಿಕನ ಮತದಾನದ ಹಕ್ಕನ್ನು ಕಸಿಯಲು ಯಾರಿಗೂ...

ಬಿಡದಿ ರೈತರ ಮೇಲೆ ಪೊಲೀಸ್ ದೌರ್ಜನ್ಯ: ಸಂಯುಕ್ತ ಹೋರಾಟ ಕರ್ನಾಟಕ ತೀವ್ರ ಖಂಡನೆ

ಕಳೆದ ಐದು ದಿನಗಳಿಂದ ಬೈರಮಂಗಲ ವೃತ್ತದಲ್ಲಿ ರಸ್ತೆ ತಡೆ ಹಾಗೂ ಸರಣಿ...

ಪ್ರಧಾನಿ ಮೋದಿ ವಿರುದ್ಧ ನಿಂದನೆ ಆರೋಪ: ಸಾಕ್ಷ್ಯವಿಲ್ಲವೆಂದು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿದ್ದಾರೆ ಎಂಬ...