ದಾವಣಗೆರೆ | ಚಿತ್ರದುರ್ಗ ಚಿಕ್ಕಮಗಳೂರು ಜಿಲ್ಲೆಯ ಗ್ರಾಮಗಳಿಗೆ ಕುಡಿಯುವ ನೀರು ಯೋಜನೆ ಅವೈಜ್ಞಾನಿಕ; ಜಿಲ್ಲಾ ರೈತ ಒಕ್ಕೂಟ

Date:

ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ 346 ಗ್ರಾಮಗಳಿಗೆ ಮತ್ತು ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಮತ್ತು ಅಜ್ಜಂಪುರ ತಾಲ್ಲೂಕಿನ 172 ಹಳ್ಳಿಗಳಿಗೆ ಕುಡಿಯುವ ನೀರಿನ ಸಲುವಾಗಿ ಭದ್ರಾ ಡ್ಯಾಂನಿಂದ ನೀರು ಪೂರೈಕೆ ಮಾಡುವ ಕಾಮಗಾರಿ ಸಂಪೂರ್ಣವಾಗಿ ಅವೈಜ್ಞಾನಿಕ ಎಂದು ದಾವಣಗೆರೆ ಜಿಲ್ಲಾ ರೈತ ಒಕ್ಕೂಟ ಆರೋಪಿಸಿದ್ದು, ಕೂಡಲೇ ನಿಲ್ಲಿಸುವಂತೆ ಹೋರಾಟ ನಡೆಸಲು ಮುಂದಾಗಿದೆ.

- Advertisement -

ದಾವಣಗೆರೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಒಕ್ಕೂಟದ ಮುಖಂಡರು “ರಾಜ್ಯದ ಕಾಂಗ್ರೆಸ್ ಸರ್ಕಾರ ದಾವಣಗೆರೆ ಜಿಲ್ಲೆಯ ರೈತರೊಂದಿಗೆ ಹುಡುಗಾಟಿಕೆ ಆಡುತ್ತಿದೆ. ಭದ್ರಾ ರೈತರ ಜೀವನಾಡಿ ಎಂದು ನಂಬಿದ ರೈತರನ್ನು ವಂಚಿಸಿ, ಅವರ ಕತ್ತು ಹಿಸುಕುವ ಅಮಾನವೀಯ ಕೃತ್ಯ ಇದಾಗಿದೆ. ಈ ಕಾಮಗಾರಿ ನಡೆಯುವ ಸ್ಥಳ ಬಫರ್ ಜೋನ್ ಆಗಿದ್ದು, ಯಾವುದೇ ಕಾಮಗಾರಿ ಕೈಗೊಳ್ಳುವುದು ಡ್ಯಾಂನ ಅಭದ್ರತೆ ಕಾರಣವಾಗುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಭದ್ರಾ ಡ್ಯಾಂ ದಾವಣಗೆರೆ ಜಿಲ್ಲೆಯ ರೈತರ ಜೀವನಾಡಿ. ಬಲದಂಡೆ ನಾಲೆ ಮೂಲಕ ದಾವಣಗೆರೆ ಜಿಲ್ಲೆಗೆ ನೀರು ಪೂರೈಕೆ ಆಗುತ್ತದೆ. ಈ ನಾಲೆ ಕಲ್ಲು ಗುಡ್ಡದ ನಡುವೆ ಹಾದು ಬಂದಿದೆ. ಈಗ ಬಲದಂಡೆ ನಾಲೆಯನ್ನು ಸೀಳಿ ಹೊಸದುರ್ಗ, ತರೀಕೆರೆ, ಅಜ್ಜಂಪುರ ತಾಲ್ಲೂಕಿನ ಹಳ್ಳಿಗಳಿಗೆ ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ನೀರು ಪೈಪು ಅಳವಡಿಸುವ ಕಾಮಗಾರಿ ನಡೆದಿದೆ. ಇದು ನಾಲೆ ಮಟ್ಟದಿಂದ 8 ಅಡಿ ಕೆಳಮಟ್ಟದಲ್ಲಿದ್ದು, ನೀರು ಸರಾಗವಾಗಿ ಮತ್ತು ರಭಸವಾಗಿ ಹರಿಯುವಂತೆ ಮಾಡುವ ಚಾಣಾಕ್ಷ ತಂತ್ರ ಮಾಡಲಾಗಿದೆ” ಎಂದು ಆರೋಪಿಸಿದರು.

“ಯೋಜನೆಯ ಪೈಪ್ ಲೈನ್ ಭದ್ರಾ ನಾಲೆಗಿಂತ 8 ಅಡಿ ಕೆಳಮಟ್ಟದಲ್ಲಿರುವುದರಿಂದ ಸಹಜವಾಗಿ ನೀರು ನಮ್ಮ ಜಿಲ್ಲೆಯ ಕಡೆಗೆ ಹರಿಯುವುದಿಲ್ಲ. ಆಗ ದಾವಣಗೆರೆ ಜಿಲ್ಲೆಯ ರೈತರು ಭತ್ತದ ನಾಟಿ ಮಾಡುವುದಿರಲ್ಲಿ, ಇರುವ ತೋಟಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಇದು ಜಿಲ್ಲೆಯ ರೈತರಿಗೆ ಬರಸಿಡಿಲು ಬಡಿದಂತಾಗಿದೆ” ಎಂದು ಆತಂಕ ವ್ಯಕ್ತಪಡಿಸಿದರು.

“ಸುಮಾರು 1600 ಕೋಟಿ ರೂ. ಅಂದಾಜಿನ ಇಂತಹ ಬೃಹತ್ ಕಾಮಗಾರಿ ಕೈಗೊಳ್ಳುವ ಮುನ್ನ ಪ್ರದೇಶದ ಜನಪ್ರತಿನಿಧಿಗಳ, ರೈತರ ಸಭೆ ನಡೆಸಿ, ಸಮಾಲೋಚನೆ ಮಾಡಿಲ್ಲ. ಹೊಸದುರ್ಗ, ತರೀಕೆರೆ, ಅಜ್ಜಂಪುರ ತಾಲ್ಲೂಕುಗಳಿಗೆ ಹಿರಿಯೂರಿನ ವಾಣಿ ವಿಲಾಸ ಡ್ಯಾಂ ಸಮೀಪವಾಗಿದ್ದು, ದೂರದ ಭದ್ರಾ ಡ್ಯಾಂ ಮೇಲೆ ಈ ಸರ್ಕಾರದ ಕಣ್ಣು ಬಿದ್ದಿರುವುದು ಸೋಜಿಗದ ಸಂಗತಿ. ರಾಜ್ಯದ ಕಾಂಗ್ರೆಸ್ ಸರ್ಕಾರ ಸೌಜನ್ಯಕ್ಕಾದರೂ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಅಭಿಪ್ರಾಯ ಪಡೆಯಬೇಕಿತ್ತು” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಆಶ್ರಮದ ಕಾರ್ಯಕ್ರಮಕ್ಕೆ ಟ್ರಸ್ಟ್ ಸದಸ್ಯರು ಭಾಗವಹಿಸಲು ಆಶ್ರಮ ರಕ್ಷಣಾ ಸಮಿತಿ ಆಕ್ಷೇಪ

“ಬಹು ಗ್ರಾಮ ಕುಡಿಯುವ ನೀರು ಯೋಜನೆಯಡಿ ಹೊಸದುರ್ಗ, ತರೀಕೆರೆ, ಅಜ್ಜಂಪುರ ತಾಲ್ಲೂಕುಗಳ ಹಳ್ಳಿಗಳ ಕಡೆಯಿಂದ ಮೊದಲು ಕಾಮಗಾರಿ ಪ್ರಾರಂಭವಾಗಬೇಕಾಗಿತ್ತು. ಆದರೆ ಭದ್ರಾ ಡ್ಯಾಂ ಬುಡದಿಂದ ಕಾಮಗಾರಿ ಪ್ರಾರಂಭವಾಗಿರುವುದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ. ಇದರ ಹಿಂದೆ ಕಾಣದ ಕೈಗಳ ಕೈವಾಡ ಕುತಂತ್ರ ಅಡಗಿದೆ” ಎಂದು ಅನುಮಾನ ವ್ಯಕ್ತಪಡಿಸಿದರು.

“ಭದ್ರಾ ಡ್ಯಾಂ ಸುರಕ್ಷತೆ ಬಗ್ಗೆ ಸಮೀಕ್ಷೆ ನಡೆಸಿ, ಸೂಕ್ತ ಭದ್ರತೆ ಕ್ರಮಗಳನ್ನು ಕೈಗೊಳ್ಳಬೇಕು. ಡ್ಯಾಂ ನಿರ್ವಹಣೆಯ ಕ್ರೇನ್ ಗಳನ್ನು ರೀ ಕಂಡೀಷನ್ ಮಾಡಿಸಬೇಕು. ಡ್ಯಾಂ ತಳಭಾಗದ ಬಫ‌ರ್ ಜೋನ್ ಪ್ರದೇಶದಲ್ಲಿ ಯಾವುದೇ ರೀತಿಯ ಅವೈಜ್ಞಾನಿಕ ಕಾಮಗಾರಿಗಳನ್ನು ಕೈಗೊಳ್ಳಬಾರದು. ಜೂನ್ 23ರ ನಾಳೆ ಬೆಳಿಗ್ಗೆ 10 ಗಂಟೆಗೆ ಭದ್ರಾ ಡ್ಯಾಂ ಬಲದಂಡೆ ನಾಲೆ ಬಳಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ರೊಟ್ಟಿ ಬುತ್ತಿ ಕಟ್ಟಿಕೊಂಡು ಬರಬೇಕು. ವರ್ಷಗಳಿಂದ ಜಿಲ್ಲಾ ರೈತರ ಒಕ್ಕೂಟದಿಂದ ಸರ್ಕಾರಕ್ಕೆ ಆಗ್ರಹಿಸಲಾಗಿದ್ದರೂ ಈ ಕಿವುಡು ಕಾಂಗ್ರೆಸ್ ಸರ್ಕಾರ ನಿರ್ಲಕ್ಷಿಸಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮಳೆ ಬಂದರೆ ಸೋರುವ ಬೀಳುವ ಹೆಂಚು ಪ್ರಾಣಿಗಳ ವಾಸಸ್ಥಾನವಾದ ಅಮರಾವತಿ ಶಾಲೆ; ಶಿಕ್ಷಣಾಸಕ್ತರ ಆರೋಪ

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ರೈತ ಒಕ್ಕೂಟದ ಕೊಳೇನಹಳ್ಳಿ ಸತೀಶ್, ಲೋಕಿಕೆರೆ ನಾಗರಾಜ್, ಧನಂಜಯ, ಎಂ. ಬಸವರಾಜ್ ನಾಯ್ಕ ಮತ್ತಿತರರು ಪಾಲ್ಗೊಂಡಿದ್ದರು..

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...

ಚಿಕ್ಕಮಗಳೂರು | ರಾಷ್ಟ್ರೀಯ ಹೆದ್ದಾರಿ: ಮರಗಳ ಕಟಾವು ತನಿಖೆಗೆ ಒತ್ತಾಯ

ಮೂಡಿಗೆರೆ ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಕೆಳಗೂರು ಸಮೀಪದ ಸಾಲು ಮರ...

ರಾಜ್ಯದಲ್ಲಿ SIR ಭೌತಿಕ ವಿಚಾರಣೆ ಸ್ಥಗಿತ: ಬಿಎಲ್ಒಗಳಿಂದ ಮನೆ ಬಾಗಿಲಿಗೆ ತೆರಳಿ ದಾಖಲೆ ಸಂಗ್ರಹ

ಹಿಂದಿನ ದತ್ತಾಂಶ ಲಭ್ಯವಿಲ್ಲದ ಹಾಗೂ ಮಾಹಿತಿಯಲ್ಲಿ ಹೊಂದಾಣಿಕೆಯಾಗದ ಕಾರಣಕ್ಕೆ ನೋಟಿಸ್ ಸ್ವೀಕರಿಸಿರುವ...

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಕೋರಿದ ಸಿಎಂ ಡಿಕೆ ಶಿವಕುಮಾರ್

ರಾಜ್ಯದ ಕುಡಿಯುವ ನೀರು, ನೀರಾವರಿ ಹಾಗೂ ಬರ ಪರಿಹಾರದ ಅಗತ್ಯಗಳನ್ನು ಈಡೇರಿಸಲು...