ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ. ಇದು ಅವರ ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸಿದೆ. ಮುಂದಿನ ವಾರ ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದ್ದು, ತರಗತಿಗಳು ಸರಿಯಾಗಿ ನಡೆದಿಲ್ಲ. ಹಾಗಾಗಿ ಕೂಡಲೇ ದಾವಣಗೆರೆ ವಿಶ್ವವಿದ್ಯಾಲಯವು ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಬೇಕೆಂದು ಆಗ್ರಹಿಸಿದರು. ನಂತರ ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲ ಸಚಿವರಿಗೆ ಎಐಡಿಎಸ್ಓ ನೇತೃತ್ವದಲ್ಲಿ ವಿದ್ಯಾರ್ಥಿಗಳ ನಿಯೋಗವು ಮನವಿ ಪತ್ರ ಸಲ್ಲಿಸಿತು.
ಈ ವೇಳೆ ಎಐಡಿಎಸ್ಓ ಜಿಲ್ಲಾಧ್ಯಕ್ಷೆ ಪೂಜಾ ನಂದಿಹಳ್ಳಿ “ಸರ್ಕಾರವು ಹಿಂದಿನ ಶೈಕ್ಷಣಿಕ ವರ್ಷದ ಅತಿಥಿ ಉಪನ್ಯಾಸಕರನ್ನೇ ಮುಂದುವರಿಸುತ್ತೇವೆ ಎಂದು ಸುತ್ತೋಲೆಯನ್ನು ಹೊರಡಿಸಿದೆ. ಈ ನಿರ್ಧಾರ ಸ್ವಾಗತಿಸುತ್ತೇವೆ. ಆದರೆ ಪ್ರತಿ ವಿಷಯಕ್ಕೆ ಕನಿಷ್ಠ 30 ಗಂಟೆಗಳ ಪಾಠವಿಲ್ಲದೆ ಈಗಾಗಲೇ ಪರೀಕ್ಷೆಗಳನ್ನು ಘೋಷಿಸಿರುವುದು ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಆದ್ದರಿಂದ ದಾವಣಗೆರೆ ವಿಶ್ವವಿದ್ಯಾಲಯಕ್ಕೆ ಪಾಠ ನಡೆಯದೆ ಪರೀಕ್ಷೆಗಳನ್ನು ನಡೆಸಬಾರದು ಎಂದು ಒತ್ತಾಯಿಸುತ್ತೆವೆ. ಸೆಮಿಸ್ಠರ್ ಪರೀಕ್ಷೆಗಳನ್ನು, ಪರೀಕ್ಷಾ ಶುಲ್ಕದ ಸುತ್ತೋಲೆಯನ್ನು, ಈ ಕೂಡಲೇ ಮುಂದೂಡಬೇಕು ಹಾಗೂ ಅದಕ್ಕನುಗುಣವಾಗಿ ಕಾಲೇಜಿನಲ್ಲಿಯೂ ಆಂತರಿಕ ಪರೀಕ್ಷೆಗಳನ್ನು ಮುಂದೂಡಬೇಕು” ಎಂದು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

“ವಿದ್ಯಾರ್ಥಿಗಳ ಹೋರಾಟದಿಂದ ಸರ್ಕಾರವು ಅತಿಥಿ ಉಪನ್ಯಾಸಕರನ್ನು ನೇಮಿಸುವುದಾಗಿ ಸುತ್ತೋಲೆ ಹೊರಡಿಸಿದೆ . ಇದು ವಿದ್ಯಾರ್ಥಿಗಳ ಅಭೂತಪೂರ್ವ ಜಯವಾಗಿದೆ. ಈಶ್ವರ ಚಂದ್ರ ವಿದ್ಯಾಸಾಗರ್, ಜ್ಯೋತಿರಾವ್ ಪುಲೆ, ಕ್ರಾಂತಿಕಾರಿ ಭಗತ್ ಸಿಂಗ್, ನೇತಾಜಿಯವರ ಆದರ್ಶಗಳಿಂದ ಪ್ರೇರಿತರಾಗಿ ತಮ್ಮ ಶಿಕ್ಷಣದ ಹಕ್ಕನ್ನು ಕಾಪಾಡಿಕೊಳ್ಳಲು ವಿದ್ಯಾರ್ಥಿಗಳು ನಡೆಸಿದ ಹೋರಾಟಕ್ಕಿಂದು ಜಯ ದೊರೆತಿದೆ. ಹೋರಾಟದಿಂದ ಮಾತ್ರವೇ ಬದಲಾವಣೆ ಸಾಧ್ಯ ಎಂಬ ಸಂದೇಶವನ್ನು ಕರ್ನಾಟಕದ ವಿದ್ಯಾರ್ಥಿಗಳು ಈ ಮೂಲಕ ಎಲ್ಲೆಡೆ ಸಾರಿದ್ದಾರೆ” ಎಂದು ಅಭಿಪ್ರಾಯಪಟ್ಟರು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರೈತರ ದಾರಿಗೆ ಪ್ರಭಾವಿಗಳ ಅಡ್ಡಿ: ಸೂಕ್ತ ದಾರಿ ಗುರುತಿಸಲು ಕಂದಾಯ ಇಲಾಖೆಗೆ ರೈತ ಸಂಘ ಒತ್ತಾಯ
ಈ ಸಂದರ್ಭದಲ್ಲಿ ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ಸುಮನ್ ಟಿ ಎಸ್, ಜಿಲ್ಲಾ ಸಂಘಟನಕಾರರಾದ ಎಚ್ ಡಿ ಗಂಗಾಧರ್, ಹಲವು ಕಾಲೇಜುಗಳ ವಿದ್ಯಾರ್ಥಿಗಳಾದ ಸಿದ್ದಿಕ್ ಅವರಗೆರೆ, ವಿಕಾಸ್ ಎಂ ಆರ್, ಗಂಗಾಧರ್ ಎನ್, ಪ್ರೇಮಾ, ವರಲಕ್ಷ್ಮಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಹಾಜರಿದ್ದರು.