“ಕಲ್ಯಾಣ ಕರ್ನಾಟಕಕ್ಕೆ 5.5 ಸಾವಿರ ಶಿಕ್ಷಕರು, 2020ನೇ ಸಾಲಿನವರೆಗೆ ಅನುದಾನಿತ ಶಾಲೆಗಳಿಗೆ 6ಸಾವಿರ ಶಿಕ್ಷಕರು, ಇನ್ನುಳಿದ ಭಾಗಕ್ಕೆ 5.5 ಸಾವಿರ ಶಿಕ್ಷಕರನ್ನು ಭರ್ತಿ ಮಾಡಲು ಈಗಾಗಲೇ ಹಣಕಾಸು ಇಲಾಖೆಯಿಂದ ಒಪ್ಪಿಗೆ ಸಿಕ್ಕಿದ್ದು ಸದ್ಯದಲ್ಲಿಯೇ ನೇಮಕಾತಿಯ ಪ್ರಕ್ರಿಯೆ ನಡೆಯಲಿದೆ” ಎಂದು ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧುಬಂಗಾರಪ್ಪ ತಿಳಿಸಿದರು.

ಸುದ್ದಿವಾಹಿನಿಗಳ ಜೊತೆ ಮಾತನಾಡಿದ ಅವರು “2025-26ರ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಅಧಿಕ ಅನುದಾನ ನೀಡಿದ್ದೇವೆ. ರಾಜ್ಯದಲ್ಲಿ ಕೆಪಿಎಸ್ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಇದ್ದು ಪ್ರಸ್ತುತ 300 ಕೆ.ಪಿ.ಎಸ್ ಶಾಲೆಗಳಿದ್ದು ಪ್ರಸ್ತುತ ವರ್ಷದಲ್ಲಿ 500ಕ್ಕೂ ಹೆಚ್ಚು ಕೆ.ಪಿ.ಎಸ್ ಶಾಲೆಗಳನ್ನು ತೆರೆಯುವ ತಯಾರಿ ನಡೆಸಲಾಗಿದೆ. ಅಧುನಿಕ ತಂತ್ರಜ್ಞಾನದಿಂದ ಇಂದಿನ ಮಕ್ಕಳ ಕಲಿಕೆಯಲ್ಲಿ ಕುಂಠಿತವಾಗುತ್ತಿದ್ದು, ಮಾನವೀಯ ಮೌಲ್ಯಗಳು ಸಹ ಕ್ಷೀಣಿಸುತ್ತಿವೆ. ಮುಂದಿನ ವರ್ಷದಿಂದ 1ನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣ ಭೋದನೆ ಮಾಡುವ ಉದ್ದೇಶ ಹೊಂದಲಾಗಿದೆ” ಎಂದರು.

“ಪಠ್ಯ ಪುಸ್ತಕ ರಚನಾ ಸಮಿತಿಯ ತಂತ್ರಜ್ಞರು ಸಭೆಯನ್ನು ಮುಂದಿನ ವಾರದಿಂದ ಕರೆಯಲಿದ್ದೇವೆ. ಎಲ್ಲಾ ತಂತ್ರಜ್ಞರ ಜೊತೆ ಚರ್ಚಿಸಿ ಈ ಕಾಲಘಟ್ಟದಲ್ಲಿ ಮಕ್ಕಳಿಗೆ ಅಗತ್ಯವಾದ ನೈತಿಕ ಶಿಕ್ಷಣ, ಮೌಲ್ಯಗಳನ್ನು, ಪರಿಸರದ ಕಾಳಜಿ ಇತ್ಯಾದಿಗಳನ್ನು ಬೆಳೆಸುವ ಪಠ್ಯ, ಕಾರ್ಯಕ್ರಮಗಳನ್ನು ಅಂತಿಮಗೊಳಿಸಿ ಅದಕ್ಕೆ ಬೇಕಾದ ಪಟ್ಟಿಯನ್ನು ತಂತ್ರಜ್ಞರು ತಯಾರಿಸಲಿದ್ದಾರೆ. ವಾರದಲ್ಲಿ ಎರಡು ದಿನ ನೈತಿಕ ಶಿಕ್ಷಣ, ಎರಡು ದಿನ ಬರವಣಿಗೆ, ಎರಡು ದಿನ ಓದುವ ಹವ್ಯಾಸಗಳ ಬಗ್ಗೆ ತಿಳಿಸಲಾಗುವುದು. ಎಲ್.ಕೆ.ಜಿ, ಯು.ಕೆ.ಜಿ ಶಾಲೆಗಳಿಗೂ ರಾಜ್ಯದಲ್ಲಿ ಅಧಿಕ ಬೇಡಿಕೆ ಇದ್ದು ಅವುಗಳನ್ನು ತೆರೆಯಲು ಸಿದ್ಧತೆಗಳು ನಡೆಯುತ್ತಿವೆ. ಆದರೆ ಅಲ್ಲೂ ಹೆಚ್ಚಿನ ಆದ್ಯತೆ ಕನ್ನಡಕ್ಕೆ ಇರಲಿದೆ” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಜಾತಿ ತಾರತಮ್ಯ, ಎಸ್ಡಿಎಂಸಿ ಅಧ್ಯಕ್ಷನಿಂದ ಮುಖ್ಯ ಶಿಕ್ಷಕನ ವಿರುದ್ಧ ದೂರು, ಕ್ರಮಕ್ಕೆ ಆಗ್ರಹ.
“ಕಳೆದ ವಿಧಾನಸಭಾ ಚುನಾವಣಾ ವೇಳೆ ನಾನು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಸಮಿತಿಯ ಉಪಾಧ್ಯಕ್ಷನಾಗಿದ್ದು, ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯಂತೆ ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ ಒ.ಪಿ.ಎಸ್ ಅನ್ನು ಮುಂದಿನ ದಿನಗಳಲ್ಲಿ ಜಾರಿಗೊಳಿಸಲು ತೀರ್ಮಾನಿಸಲಾಗಿದೆ” ಎಂದು ಮಾಹಿತಿ ನೀಡಿದರು.
Very nice teaching field