ದಾವಣಗೆರೆ | ಕನ್ನಡ ಅವಗಣನೆ, ಬರೋಡ ಬ್ಯಾಂಕ್ ಮುತ್ತಿಗೆ ಹಾಕಿ ಕರವೇ ಪ್ರತಿಭಟನೆ

Date:

ಭಾರತೀಯ ರಿಸರ್ವ್ ಬ್ಯಾಂಕ್ ಸ್ಪಷ್ಟವಾದ ನಿದರ್ಶನದಂತೆ ಎಲ್ಲಾ ಬ್ಯಾಂಕುಗಳಲ್ಲಿ ತ್ರಿಭಾಷಾ ಸೂತ್ರ ಇರಬೇಕು, ಸ್ಥಳೀಯ ಭಾಷೆಯಲ್ಲಿ ಪ್ರತಿಯೊಂದು ವ್ಯವಹಾರ ನಡೆಸಬೇಕೆಂದು ಆದೇಶವಿದ್ದರೂ, ಕನ್ನಡದಲ್ಲಿ ಯಾವುದೇ ಖಾತೆ ಅರ್ಜಿ ಮತ್ತು ಹಣ ವರ್ಗಾವಣೆ ಮಾಡುವ, ಹಣ ಬಿಡಿಸುವ ಅರ್ಜಿಗಳಿಲ್ಲದೇ ಕನ್ನಡ ಕಡೆಗಣಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ (ಕರವೇ) ಮುಖಂಡರು ದಾವಣಗೆರೆ ನಗರದ ಪಿ.ಬಿ ರಸ್ತೆಯಲ್ಲಿರುವ ಬರೋಡ ಬ್ಯಾಂಕ್ ನ ಕಚೇರಿಯ ವ್ಯವಸ್ಥಾಪಕರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

- Advertisement -

ಬ್ಯಾಂಕಿನಲ್ಲಿ ಕನ್ನಡ ಭಾಷೆಯಲ್ಲಿ ಯಾವುದೇ ಖಾತೆ ಅರ್ಜಿ ಮತ್ತು ಹಣ ವರ್ಗಾವಣೆ ಮಾಡುವ, ಹಣ ಬಿಡಿಸುವ ವ್ಯವಹಾರದ ಅರ್ಜಿಗಳಿಲ್ಲ. ಎಲ್ಲವೂ ಸಹ ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ಮಾತ್ರ ಇದ್ದು, ಕನ್ನಡವನ್ನು ಅವಗಣನೆ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಬರೋಡಾ ಬ್ಯಾಂಕ್ ವ್ಯವಸ್ಥಾಪಕರಿಗೆ ಪ್ರತಿಭಟನೆ ಮೂಲಕ ಎಚ್ಚರಿಸಲಾಯಿತು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...
1002656281

“ಬ್ಯಾಂಕಿನ ವ್ಯವಸ್ಥಾಪಕರು ಒಂದು ವಾರದ ಒಳಗಾಗಿ ಕನ್ನಡದಲ್ಲಿ ಮುದ್ರಣ ಮಾಡಿಸುತ್ತೇವೆ ಎಂದು ತಿಳಿಸಿದ್ದಾರೆ. ಬರೋಡಾ ಬ್ಯಾಂಕಿನ ಪಿಜೆ ಬಡಾವಣೆಯ ಶಾಖೆಯಲ್ಲೂ ಸಹ ಇದೇ ರೀತಿ ಕನ್ನಡ ಕಡೆಗಣಿಸಲಾಗಿದೆ, ಇದನ್ನು ಖಂಡಿಸುತ್ತೇವೆ. ಒಂದು ವಾರದ ಒಳಗಾಗಿ ಸರಿಪಡಿಸದೆ ಹೋದರೆ ಬ್ಯಾಂಕಿನ ಮುಂದೆ ಪ್ರತಿಭಟನೆ ನಡೆಸಲಾಗುವುದು” ಎಂದು ಕರವೇ ಜಿಲ್ಲಾಧ್ಯಕ್ಷ ಎಂಎಸ್ ರಾಮೇಗೌಡ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬೀದಿ ನಾಯಿ ದಾಳಿಗೆ ವೃದ್ಧ, ನಾಲ್ವರು ಮಕ್ಕಳಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಈ ಸಂದರ್ಭದಲ್ಲಿ ಯುವ ಘಟಕದ ಅಧ್ಯಕ್ಷರಾದ ಗೋಪಾಲ ದೇವರ ಮನೆ, ತನ್ವೀರ್ ಭಾಷಾ, ಮೋಹನ್ ಜಿಲ್ಲಾ ಕಾರ್ಯದರ್ಶಿ ಜಿಎಸ್ ಸಂತೋಷ ಹಾಜರಿದ್ದರು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...