ದಾವಣಗೆರೆ | ಮಹಾನಗರ ಪಾಲಿಕೆಗೆ ಸ್ವಚ್ಛ ಸರ್ವೇಕ್ಷಣ್ 2024ರ ಪ್ರಶಸ್ತಿಯ ಗರಿ

Date:

ದಾವಣಗೆರೆ ಮಹಾನಗರ ಪಾಲಿಕೆ ಸ್ವಚ್ಚ ಸರ್ವೇಕ್ಷಣಾ 2024 ರ ಸಮೀಕ್ಷೆಯಲ್ಲಿ ಹಾಗೂ ಘನತಾಜ್ಯ ನಿರ್ವಹಣೆಗೆ ಸಂಬಂಧಿಸಿದ ಕಾರ್ಯಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿರುವುದರಿಂದ ಹಾಗೂ ಸ್ವಚ್ಚತೆಯಲ್ಲಿ ಉತ್ತಮ ಸಾಧನೆಗಾಗಿ ಕೇಂದ್ರ ಸರ್ಕಾರದ ಮಿನಿಸ್ಟ್ರೀರಿಯಲ್ ಅವಾರ್ಡ್ (ಪ್ರಶಸ್ತಿ) ದಾವಣಗೆರೆ ಮಹಾನಗರ ಪಾಲಿಕೆಗೆ ಲಭಿಸಿದೆ.

- Advertisement -

ಸ್ವಚ್ಚ ಸರ್ವೇಕ್ಷಣ್ (Swachh survekshan) ಅಭಿಯಾನವು ಭಾರತ ಸರ್ಕಾರವು ಪ್ರತಿ ವರ್ಷ ನಡೆಸುವ ಸ್ವಚ್ಛತೆ ಮತ್ತು ನೈರ್ಮಲ್ಯದ ಸಮೀಕ್ಷೆಯಾಗಿದೆ. ದೇಶದ ನಗರಗಳನ್ನು ಸ್ವಚ್ಛ ಮತ್ತು ಆರೋಗ್ಯಕರವಾಗಿ ಇಡುವುದು ಮತ್ತು ನಾಗರಿಕರ ಜೀವನ ಮಟ್ಟವನ್ನು ಸುಧಾರಿಸುವುದು ಅಭಿಯಾನ ಮತ್ತು ಸಮೀಕ್ಷೆಯ ಉದ್ದೇಶ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಪ್ರತಿ ವರ್ಷ ನಗರದ ಎಲ್ಲಾ ನಾಗರಿಕರು, ಸ್ಥಳೀಯ ಸಂಸ್ಥೆಗಳು, ಮತ್ತು ಸ್ವಚ್ಛತಾ ಕಾರ್ಯಗಳಿಗೆ ಸಂಬಂಧಿಸಿದಂತೆ ಇತರ ಪಾಲುದಾರರು ಭಾಗವಹಿಸುತ್ತಾರೆ. ತ್ಯಾಜ್ಯ ಸಂಗ್ರಹಣೆ, ನಿರ್ವಹಣೆ, ಸಾರ್ವಜನಿಕ ಸ್ಥಳಗಳ ಸ್ವಚ್ಛತೆ, ಶೌಚಾಲಯಗಳ ನಿರ್ವಹಣೆ, ಸಾರ್ವಜನಿಕರಲ್ಲಿ ಜಾಗೃತಿ ಮುಂತಾದ ಅಂಶಗಳನ್ನು ಆಧರಿಸಿ ಸಮೀಕ್ಷೆಯ ತಂಡಗಳು ಮೌಲ್ಯಮಾಪನ ಮಾಡುತ್ತವೆ.

ಈ ಹಿನ್ನೆಲೆಯಲ್ಲಿ ದಾವಣಗೆರೆ ಮಹಾನಗರ ಪಾಲಿಕೆ ಸ್ವಚ್ಛ ಸರ್ವೇಕ್ಷಣಾ-2024ರ ಅಂಗವಾಗಿ ಕಳೆದ ಡಿಸೆಂಬರ್ ತಿಂಗಳಲ್ಲಿ ನಗರದ ಸ್ವಚ್ಛತೆಯನ್ನು ಹೆಚ್ಚಿಸಲು ನೈರ್ಮಲೀಕರಣ, ವಾರ್ಡ್ ಗಳ ಸ್ವಚ್ಛತೆ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡಿತ್ತು. ಇದರಲ್ಲಿ ಸ್ವಚ್ಛತಾ ಸಿಬ್ಬಂದಿಗೆ ತರಬೇತಿ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಮುಂತಾದವು ಸೇರಿದ್ದವು.‌
ದಾವಣಗೆರೆ ಮಹಾನಗರ ಪಾಲಿಕೆ ಸ್ವಚ್ಛ ಸರ್ವೇಕ್ಷಣಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದು, ನಗರವನ್ನು ಸ್ವಚ್ಛ ಮತ್ತು ಸುಂದರವಾಗಿಸಲು ಡಿಸೆಂಬರ್ ನಿಂದ ಎರಡು ತಿಂಗಳ ಕಾಲ ಸ್ವಚ್ಛತಾ ಚಟುವಟಿಕೆ ಹಮ್ಮಿಕೊಳ್ಳಲಾಗಿತ್ತು.

ಕೇಂದ್ರ ಸರ್ಕಾರದ ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆ ತಂಡ ದಾವಣಗೆರೆಯಲ್ಲಿ ವಾರ್ಡುಗಳಲ್ಲಿ, ನಗರದ ತ್ಯಾಜ್ಯ ವಿಲೇವಾರಿ ನಿರ್ವಹಣೆ, ಘಟಕಗಳಲ್ಲಿ ಸಮೀಕ್ಷೆ ನೆಲೆಸಿತ್ತು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಜಗಳೂರು, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಗಳಲ್ಲಿ ಶಕ್ತಿ ಯೋಜನೆ ಸಂಭ್ರಮಾಚರಣೆ

ಈ ಸಾಧನೆಗೆ ಸಹಕರಿಸಿ ಪ್ರೋತ್ಸಾಹಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಂಸದೆ ಪ್ರಭಾ ಮಲ್ಲಿಕಾರ್ಜುನ್, ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ, ಆಯಕ್ತೆ ರೇಣುಕಾ, ಪರಿಸರ ಅಭಿಯಂತರಾದ ಬಸವಣ್ಣ, ಆರೋಗ್ಯ ನಿರೀಕ್ಷಕರು ಹಾಗೂ ಪಾಲಿಕೆ ಪೌರಕಾರ್ಮಿಕರನ್ನು ಮಾಜಿ ಸದಸ್ಯರಾದ ಎ.ನಾಗರಾಜ, ಗಡಿಗುಡಾಳ, ಅಬ್ದುಲ್ ಲತೀಫ್, ಉದಯಕುಮಾರ್, ಜಾಕೀರ ಅಲಿ ಹಾಗೂ ಇತರ ಸದಸ್ಯರು ಅಭಿನಂದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...