ಕಳಂಕಿತ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮುಂದಾದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Date:

ಆರೋಗ್ಯ ಇಲಾಖೆಯಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆದ ಭ್ರಷ್ಟಾಚಾರ ಪ್ರಕರಣಗಳ ತನಿಖೆಯ ಜೊತೆಗೆ, ಕಳಂಕಿತ ಆರೋಪ ಹೊಂದಿರುವ ಅಧಿಕಾರಿಗಳ ಮೇಲೂ ಸಚಿವ ದಿನೇಶ್ ಗುಂಡೂರಾವ್ ಕ್ರಮಕ್ಕೆ ಮುಂದಾಗಿದ್ದು, ಆರೋಗ್ಯ ಮತ್ತು ಆಯುಷ್ ಇಲಾಖೆಗಳಲ್ಲಿ ಮೇಜರ್ ಸರ್ಜರಿಗೆ ಕೈ ಹಾಕಿದ್ದಾರೆ.

- Advertisement -

ಕೋವಿಡ್ ಪ್ರಕರಣಗಳನ್ನು ನ್ಯಾಯಾಂಗ ತನಿಖೆಗೆ ವಹಿಸಿದ ಬೆನ್ನಲ್ಲೇ ಇದೀಗ ನಕಲಿ ವೈದ್ಯರ ಹಾವಳಿ ತಡೆಯಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಾರ್ಯತಂತ್ರ ರೂಪಿಸಿದ್ದಾರೆ. ಆಯುಷ್ ಇಲಾಖೆಯಲ್ಲಿ ನಕಲಿ ವೈದ್ಯರ ಸೃಷ್ಟಿಗೆ ಕಾರಣರಾದವರ ಬುಡವನ್ನು ಕಿತ್ತೆಸೆಯಲು ಮುಂದಾಗಿರುವ ಸಚಿವರು, ಈ ಮೂಲಕ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ನೂರಾರು ನಕಲಿ ವೈದ್ಯರಿಗೆ ಆಯುಷ್ ಇಲಾಖೆಯಿಂದ ನಕಲಿ ಸರ್ಟಿಫಿಕೇಟ್ ಕೊಟ್ಟಿರುವ ಬಗ್ಗೆ ಆಂತರಿಕ ವರದಿ ತರಿಸಿಕೊಂಡಿರುವ ಸಚಿವರು, ಒಬ್ಬೊಬ್ಬ ಅಧಿಕಾರಿಗಳಿಗೆ ಗೇಟ್ ಪಾಸ್ ಕೊಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಹಿಂದೆ ಮೂರು ನಾಲ್ಕು ಬಾರಿ ಅಮಾನತ್ತಾಗಿದ್ದ, ಆಯುರ್ವೇದದ ಹೆಸರಿನಲ್ಲಿ ನಕಲಿ ವೈದ್ಯರನ್ನು ಸೃಷ್ಢಿಸಿದ್ದ ಆರೋಪ ಹೊತ್ತಿರುವ ಹಿರಿಯ ಆಯುಷ್ ವೈದ್ಯಾಧಿಕಾರಿ ವೆಂಕಟರಾಮಯ್ಯ ಅವರನ್ನ ಅಮಾನತ್ತುಗೊಳಿಸಲಾಗಿದೆ. 13 ಪ್ರಕರಣಗಳಲ್ಲಿ ಡಾ. ವೆಂಕಟರಾಮಯ್ಯ ಅವರ ಮೇಲೆ ದೋಷಾರೋಪಣೆಯಿದ್ದು, ಇಲಾಖೆ ತನಿಖೆಗೆ ಒಳಪಡಿಸಲಾಗಿತ್ತು.

ಹಿರಿಯ ವೈದ್ಯಾಧಿಕಾರಿ ಡಾ. ವೆಂಕಟರಮಣಯ್ಯ ವಿರುದ್ದ ಕೊಲೆ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ಅಮಾನತ್ತು ಮಾಡಿ ಆದೇಶಿಸಲಾಗಿದೆ. ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮ 2021 ರ ನಿಯಮ 3(1) (i) (ii) (iii) ಉಲ್ಲಂಘಿಸಿರುವುದರಿಂದ ಕರ್ನಾಟಕ ನಾಗರಿಕ ಸೇವಾ 1957ರ ನಿಯಮ 10(3) ಪ್ರಕಾರ ಅಧಿಕಾರವನ್ನು ಚಲಾಯಿಸಿ, ಡಾ. ವೆಂಕಟರಾಮಯ್ಯ ಇವರ ವಿರುದ್ಧ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ.

Advertisements

ಆಯುಷ್ ಇಲಾಖೆ ಮುಖ್ಯ ಆಡಳಿತಾಧಿಕಾರಿ ಎಸ್​ ಶೈಲಜ ಎಂಬುವರು ಫೆಬ್ರವರಿ 6ರಂದು ಮಧ್ಯಾಹ್ನ ಸುಮಾರು 4.30 ವೇಳೆಯಲ್ಲಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಆಗಮಿಸಿದ ಡಾ. ವೆಂಕಟರಾಮಯ್ಯ ಕೊಲೆ ಬೆದರಿಕೆ ಹಾಕಿ ಬೈದು ಹೀಯಾಳಿಸಿ ಕರ್ತವ್ಯಕ್ಕೆ ಧಕ್ಕೆ ಉಂಟು ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಇಂತಹ ಬೆದರಿಕೆಗಳಿಂದ ಕೆಲಸ ಮಾಡಲು ತೊಂದರೆ ಆಗುತ್ತಿದೆ ಎಂದು ಎಸ್​ ಶೈಲಜ ಅವರು ಫೆಬ್ರವರಿ 7ರಂದು ದೂರು ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ಕುಮಾರಸ್ವಾಮಿಗೆ ಉತ್ತರಿಸುವುದೂ, ಹುಚ್ಚಾಸ್ಪತ್ರೆಗೆ ಸೇರುವುದೂ ಒಂದೇ: ದಿನೇಶ್ ಗುಂಡೂರಾವ್ ವ್ಯಂಗ್ಯ

ಕಳೆದ ಎಂಟು ತಿಂಗಳುಗಳಿಂದ ಆಯುಷ್ ಇಲಾಖೆಯ ಹಿರಿಯ ವೈದ್ಯಾಧಿಕಾರಿ ಡಾ. ವೆಂಕಟರಾಮಯ್ಯ ಅವರ ಮೇಲೆ ನಕಲಿ ವೈದ್ಯರನ್ನು ಸೃಷ್ಟಿಸಿದ ಹಾಗೂ ನಕಲಿ ವೈದ್ಯರಿಗೆ ಜಿಲ್ಲಾವಾರು ಕೆ ಪಿ ಎಮ್ ಇ ನೋಂದಣಿ ನೀಡಲು ಜಿಲ್ಲಾ ಆಯುಷ್ ಅಧಿಕಾರಿಗಳಿಗೆ ಶಿಫಾರಸು ಮಾಡಿದ ಆರೋಪಗಳು ಕೇಳಿ ಬಂದಿದ್ದವು. ಎರಡು ವರ್ಷಗಳ ಹಿಂದೆ ಆಯುರ್ವೇದ ವೈದ್ಯ ವಿದ್ಯಾರ್ಥಿಗಳ ನೋಂದಣಿಯಲ್ಲಿ ಭೃಷ್ಟಾಚಾರ ಎಸಗಿದ ಆರೋಪದ ಮೇಲೆ ಅಮಾನತ್ತಾಗಿದ್ದರು.

ತಮ್ಮ ಆಪ್ತ ನಕಲಿ ವೈದ್ಯರಿಗಾಗಿ ತಮ್ಮದೇ ನೋಂದಣಿ ಪುಸ್ತಕ ರಚಿಸಿಕೊಂಡಿದ್ದರು ಎಂಬ ಆರೋಪ ಕೂಡ ಇತ್ತು. ಅಲ್ಲದೇ ಆನ್ಲೈನ್ ಬಯೋಮೆಟ್ರಿಕ್ ರಿಜಿಸ್ಟ್ರೇಶನ್ ಡಿಜಿಟಲ್ ವ್ಯವಸ್ಥೆಯನ್ನೂ ನಾಶಪಡಿಸಲು ಯತ್ನ ನಡೆಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...