ಪಾಕ್‌ ಪರ ಘೋಷಣೆ | ನಾಸೀರ್ ಹುಸೇನ್ ಬಂಧನಕ್ಕೆ ಒತ್ತಾಯ; ದೂರು ನೀಡಿದ ಬಿಜೆಪಿ

Date:

ವಿಧಾನಸೌಧದಲ್ಲಿ ಕಾಂಗ್ರೆಸ್‌ನ ಡಾ. ಸಯ್ಯದ್ ನಾಸೀರ್ ಹುಸೇನ್ ಅವರು ಗೆದ್ದ ನಂತರ ಅವರ ಬೆಂಬಲಿಗರು ಎನ್ನಲಾದ ಕೆಲವರು ಪಾಕ್‌ ಪರ ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಚರ್ಚೆಗಳು ನಡೆಯುತ್ತಿವೆ.

- Advertisement -

ಈ ವಿಷಯಕ್ಕೆ ಸಂಬಂಧಿಸಿದಂತೆ, ಪ್ರಕರಣದ ತನಿಖೆ ಪೂರ್ಣಗೊಳ್ಳುವವರೆಗೆ ನಾಸೀರ್ ಹುಸೇನ್ ಪ್ರಮಾಣ ವಚನ ಸ್ವೀಕಾರ ಮಾಡಬಾರದು ಹಾಗೂ ಪ್ರಮಾಣವಚನ ಬೋಧಿಸದಂತೆ ಉಪ ರಾಷ್ಟ್ರಪತಿಯವರಿಗೆ ಪತ್ರ ಬರೆಯಲು ಬಿಜೆಪಿ ಮುಂದಾಗಿದೆ. ಇದೀಗ, ರಾಜ್ಯಸಭಾ ಸದಸ್ಯ ಡಾ.ಸೈಯದ್‌ ನಾಸೀರ್ ಹುಸೇನ್ ಅವರನ್ನು ಬಂಧಿಸುವಂತೆ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ರಾಜ್ಯ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಹಾಗೂ ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜು ಅವರು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

“ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಪ್ರಕರಣ ಪೂರ್ಣಗೊಳ್ಳುವವರೆಗೂ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ನಾಸೀರ್ ಹುಸೇನ್ ಪ್ರಮಾಣ ವಚನ ಸ್ವೀಕರಿಸಬಾರದು” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬೆಳಗಾವಿಯಲ್ಲಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಮಗನ ಕೊಂದ ಸಿಇಒ | ಮಾನಸಿಕ ಆರೋಗ್ಯ ತಪಾಸಣೆಗೆ ಗೋವಾ ಕೋರ್ಟ್ ಅನುಮತಿ

“ರಾಜ್ಯಸಭೆಗೆ ಆಯ್ಕೆಯಾಗುವ ಜನಪ್ರತಿನಿಧಿಯು ಸಂವಿಧಾನ ಮತ್ತು ದೇಶದ ಸಾರ್ವಭೌಮತೆಯ ಪ್ರಮಾಣ ವಚನ ಸ್ವೀಕರಿಸುತ್ತಾನೆ. ಆದರೆ, ಹುಸೇನ್ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದಾರೆ” ಎಂದು ತಿಳಿಸಿದರು.

“ಘೋಷಣೆ ಕೂಗಿರುವುದು ಸಾಬೀತಾಗಿರುವ ಕಾರಣ ಹುಸೇನ್ ಅವರು ಪ್ರಮಾಣವಚನ ಸ್ವೀಕರಿಸದಂತೆ ತಡೆಯಬೇಕು. ಕಾಂಗ್ರೆಸ್ ಪಕ್ಷಕ್ಕೆ ದೇಶಾಭಿಮಾನವಿದ್ದರೆ, ಅವರಲ್ಲಿ ರಾಷ್ಟ್ರದ ಸಮಗ್ರತೆ ಬಗ್ಗೆ ನಿಜವಾದ ಕಾಳಜಿಯಿದ್ದರೆ ಈ ಕೆಲಸ ಮಾಡಬೇಕು. ಹುಸೇನ್ ಅವರಿಗೆ ಪ್ರಮಾಣ ವಚನ ಬೋಧಿಸಬಾರದು ಎಂದು ಕೋರಿ ಉಪ ರಾಷ್ಟ್ರಪತಿಯವರಿಗೆ ಪತ್ರ ಬರೆಯಲಾಗುವುದು” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...