ಪುನೀತ್ ಕೆರೆಹಳ್ಳಿ, ಸಹಚರರ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ

Date:

ಪುನೀತ್ ಕೆರೆಹಳ್ಳಿ ಹಾಗೂ ಆತನ ಸಹಚರರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ‘ದ್ವೇಷದ ಮಾತಿನ ವಿರುದ್ದ ಜನಾಂದೋಲನ/ Campaign Against Hate Speech’ ವತಿಯಿಂದ email ಮೂಲಕ ಮನವಿ ಸಲ್ಲಿಸಲಾಗಿದೆ.

- Advertisement -

ʼಪುನೀತ್ ಕೆರೆಹಳ್ಳಿ ಎಂಬ ಕೊಲೆ‌ ಆರೋಪಿ ವಲಸೆ ಕಾರ್ಮಿಕರ ವಾಸಸ್ಥಳಗಳಿಗೆ ಅಕ್ರಮವಾಗಿ ಪ್ರವೇಶಿಸಿ, ಅವರ ಪೌರತ್ವ ಹಾಗೂ ಗುರುತಿನ ದಾಖಲೆಗಳಿಗೆ ಬೇಡಿಕೆ ಇಟ್ಟು, ಬೆದರಿಕೆ ಹಾಗೂ ಭೀತಿಯನ್ನುಂಟುಮಾಡುತ್ತಿರುವʼ ಗಂಭೀರ ಆರೋಪಗಳನ್ನು ಮನವಿಯಲ್ಲಿ ವಿವರಿಸಲಾಗಿದೆ. ʼಸ್ವತಃ ಆತನೇ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿದ ವೀಡಿಯೊಗಳಲ್ಲಿ, “ಬಾಂಗ್ಲಾದೇಶಿಗಳು” ಎಂದು ಮುಸ್ಲಿಂ ವಲಸೆ ಕಾರ್ಮಿಕರನ್ನು ಗುರುತಿಸಿ, ರಾತ್ರಿ ಸಮಯದಲ್ಲಿ ಘೋಷಣೆ ಕೂಗಿ, ಧರ್ಮಾಧಾರಿತ ದ್ವೇಷ ಮತ್ತು ಸಮಾಜದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿರುವುದು ದಾಖಲಾಗಿದೆ. ಈತನ ಈ ವರ್ತನೆಯಿಂದ ಕಾರ್ಮಿಕರ ಗೌರವ, ಗೌಪ್ಯತೆ ಮತ್ತು ಜೀವಸುರಕ್ಷೆಗೆ ಗಂಭೀರ ಅಪಾಯವನ್ನುಂಟುಮಾಡುತ್ತದೆʼ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬರಪೀಡಿತ ಜಿಲ್ಲೆಯ ಜನರ ಜಲಾಗ್ರಹದ ಕೂಗು ಕೇಳಿಸುವುದೇ ಸರ್ಕಾರಕ್ಕೆ?

ʼಈ ರೀತಿಯ “ಬಾಂಗ್ಲಾದೇಶಿ” ಎಂಬ ಶಂಕೆಯ ಆಧಾರದಲ್ಲಿ ನಡೆದ ಹಲ್ಲೆ ಮತ್ತು ಲಿಂಚಿಂಗ್ ಘಟನೆಗಳು ದೇಶದ ವಿವಿಧ ಭಾಗಗಳಲ್ಲಿ (ಕೇರಳದಲ್ಲಿ ದಲಿತ ಕಾರ್ಮಿಕ ರಾಮನಾರಾಯಣ್ ಬಗೇಲ್ ಅವರ ಹತ್ಯೆ, ಒಡಿಶಾದಲ್ಲಿ ಜುವೆಲ್ ಶೇಕ್ ಅವರ ಹತ್ಯೆ, ಮಂಗಳೂರಿನಲ್ಲಿ ಅಂಸಾರಿ ಎಂಬ ಕಾರ್ಮಿಕರ ಮೇಲೆ ಥಳಿತ) ಇತ್ತೀಚೆಗೆ ನಡೆದಿರುವುದನ್ನು ಉಲ್ಲೇಖಿಸಿ, ಇಂತಹ ಕೃತ್ಯಗಳು ಕರ್ನಾಟಕದಲ್ಲಿಯೂ ಪ್ರಾಣಾಪಾಯಕ್ಕೆ ದಾರಿ ಮಾಡಿಕೊಡಬಹುದುʼ ಎಂದು ಎಚ್ಚರಿಸಲಾಗಿದೆ.

ʼಪುನೀತ್ ಕೆರೆಹಳ್ಳಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವುದರಿಂದ, ಅವನು ನಡೆಸುತ್ತಿರುವ ಇತ್ತೀಚಿನ ಕಾನೂನುಬಾಹಿರ ಕೃತ್ಯಗಳು ಜಾಮೀನಿನ ದುರುಪಯೋಗವಾಗಿದ್ದು, ತಕ್ಷಣವೇ ಎಫ್‌ಐಆರ್‌ ದಾಖಲಿಸಿ, ಜಾಮೀನು ರದ್ದುಗೊಳಿಸಲು ನ್ಯಾಯಾಲಯದ ಮುಂದೆ ವಿಷಯ ಮಂಡಿಸಬೇಕುʼ ಎಂದು ಆಗ್ರಹಿಸಲಾಗಿದೆ. ʼಜೊತೆಗೆ, ಇಂತಹ ಘಟನೆಗಳ ಸಂದರ್ಭದಲ್ಲಿ ಹಾಜರಿದ್ದ ಪೊಲೀಸ್ ಅಧಿಕಾರಿಗಳ ಪಾತ್ರದ ಬಗ್ಗೆ ಇಲಾಖಾ ತನಿಖೆ ನಡೆಸಬೇಕು ಹಾಗೂ ಖಾಸಗಿ ವ್ಯಕ್ತಿಗಳು ಪೌರತ್ವ ವಿಚಾರಣೆ ನಡೆಸುವುದನ್ನು ತಡೆಯುವ ಸ್ಪಷ್ಟ ನಿರ್ದೇಶನಗಳನ್ನು ರಾಜ್ಯದಾದ್ಯಂತ ನೀಡಬೇಕುʼ ಎಂದು ಈ ಮನವಿ ಮೂಲಕ ಒತ್ತಾಯಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್...

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ...

ಜೀವರಕ್ಷಕ ಔಷಧಗಳ ಬೆಲೆ ನಿಯಂತ್ರಣ: ತ್ವರಿತ ಕ್ರಮ ಜಾರಿಗೊಳಿಸಲು ಕೇಂದ್ರಕ್ಕೆ ರಾಜ್ಯದ ಒತ್ತಾಯ

ಕ್ಯಾನ್ಸರ್ ಔಷಧಿಗಳು ಸೇರಿದಂತೆ ಅತ್ಯಗತ್ಯ ಔಷಧಗಳ ಮೇಲೆ ವಿಧಿಸಲಾಗುತ್ತಿರುವ ಹೆಚ್ಚಿನ ದರದ...